15 ಕೋಟಿ ಜಿಎಸ್‌ಟಿ ವಂಚನೆ: ಬೆಂಗಳೂರಿನಲ್ಲಿ ವ್ಯಕ್ತಿಯ ಬಂಧನ!

Managing Director of automobile company arrested for evading GST of Rs 15 crore
Highlights

15 ಕೋಟಿ ತೆರಿಗೆ ವಂಚಿಸಿದ ವ್ಯವಸ್ಥಾಪಕ ನಿರ್ದೇಶಕ

ಬೆಂಗಳೂರಿನ ಆಟೋಮೊಟಿವ್ ಕಂಪನಿ ವ್ಯವಸ್ಥಾಪಕ ನಿರ್ದೇಶಕ

ಜಿಎಸ್‌ಟಿ ಅಡಿ ತೆರಿಗೆ ವಂಚನೆ ಆರೋಪದಡಿ ಬಂಧನ

ಕೇಂದ್ರ ಹಣಕಾಸು ಇಲಾಖೆ ಮಾಹಿತಿ

ಬೆಂಗಳೂರು(ಜು.8): ಜಿಎಸ್‌ಟಿ ಅನ್ವಯ ಸುಮಾರು ೧೫ ಕೋಟಿ ತೆರಿಗೆ ಪಾವತಿಸದ ಆರೋಪದಡಿಯಲ್ಲಿ ಬೆಂಗಳೂರಿನ ಆಟೋಮೊಟಿವ್ ಕಂಪನಿಯೊಂದರ ವ್ಯವಸ್ಥಾಪಕ ನಿರ್ದೇಶಕರನ್ನು ಬಂಧಿಸಲಾಗಿದೆ. ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಪಾವತಿಸದ ಹಿನ್ನೆಲೆಯಲ್ಲಿ ಕೇಂದ್ರ ಸರಕು ಮತ್ತು ಸೇವಾ ತೆರಿಗೆ ಕಾಯ್ದೆ 2017 ರ ನಿಬಂಧನೆಗಳ ಅಡಿಯಲ್ಲಿ ವ್ಯವಸ್ಥಾಪಕ ನಿರ್ದೇಶಕರನ್ನು ಬಂಧಿಸಲಾಗಿದೆ.

ಕೇಂದ್ರೀಯ ತೆರಿಗೆ ಇಲಾಖೆಯ ಪ್ರಿವೆಂಟಿವ್ ಯುನಿಟ್‌ನಿಂದ  ಸಂಗ್ರಹಿಸಲಾದ ನಿರ್ದಿಷ್ಟ ಗುಪ್ತಚರ ಮಾಹಿತಿ ಆಧಾರದಲ್ಲಿ ತೆರಿಗೆ ವಂಚನೆ ಪ್ರಕರಣ ಪತ್ತೆಯಾಗಿದೆ ಎಂದು ಹಣಕಾಸು ಸಚಿವಾಲಯ ಹೇಳಿಕೆ ನೀಡಿದೆ. ಆರೋಪಿಯು 2017 ರ ಆಗಸ್ಟ್‌್‌ನಿಂದ  2018 ರ ಮೇ ವರೆಗೆ ಜಿಎಸ್‌ಟಿ ಪಾವತಿ ಮಾಡದೆ ವಂಚಿಸಿದರು.

ಕೇಂದ್ರೀಯ ಸರಕು ಮತ್ತು ಸೇವಾ ತೆರಿಗೆ ಸೆಕ್ಷನ್ 132 ರ ಅನುಸಾರ ಅಪರಾಧಿಗೆ ಕನಿಷ್ಟ 5 ವರ್ಷಗಳ ವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ. ಅಲ್ಲದೇ ಈ ಅಪರಾಧವು ಜಾಮೀನು ರಹಿತ ಪ್ರಕರಣ ಎಂದು ಗುರುತಿಸಲ್ಪಡಲಿದೆ. ಸದ್ಯ ಆರೊಪಿ ತಾನು ತೆರಿಗೆ ವಂಚನೆ ಮಾಡಿರುವುದನ್ನು ಒಪ್ಪಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹಣಕಾಸು ಸಚಿವಾಲಯ ಸ್ಪಷ್ಟಪಡಿಸಿದೆ.

loader