ಮಾರುತಿ ಸುಜುಕಿ ಕಾರುಗಳ ಬೆಲೆಯಲ್ಲಿ ಹೆಚ್ಚಳ! ಉಪಕರಣಗಳ ಆಮದು ವೆಚ್ಛ ಹೆಚ್ಚಳ ಹಿನ್ನೆಲೆ! ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಪರಿಣಾಮ! ಎಲ್ಲಾ ಮಾದರಿಯ ಕಾರುಗಳ ಬೆಲೆಯಲ್ಲಿ ಹೆಚ್ಚಳ
ನವದೆಹಲಿ(ಆ.16): ದೇಶದ ಪ್ರತಿಷ್ಠಿತ ಕಾರು ತಯಾರಿಕಾ ಕಂಪನಿ ಮಾರುತಿ ಸುಜುಕಿ ತನ್ನ ಎಲ್ಲಾ ಮಾದರಿಯ ಕಾರುಗಳ ಬೆಲೆಯನ್ನು ಏರಿಸಿದೆ.
ತಯಾರಿಕೆ ಮತ್ತು ಹಂಚಿಕೆಯಲ್ಲಿನ ವೆಚ್ಛ ಹೆಚ್ಚಾದ ಹಿನ್ನೆಲೆಯಲ್ಲಿ ಕಾರುಗಳ ಬೆಲೆ ಏರಿಕೆ ಮಾಡಲಾಗಿದೆ ಎಂದು ಕಂಪನಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ನವದೆಹಲಿಯ ಎಕ್ಸ್ ಶೋರೂಂ ಬೆಲೆಯಲ್ಲಿ ಸುಮಾರು ೬೧೦೦ ರೂ ಹೆಚ್ಚಳವಾಗಿದೆ ಎನ್ನಲಾಗಿದೆ.
ಕಾರು ತಯಾರಿಕಾ ಉಪಕರಣಗಳನ್ನು ಆಮದು ಮಾಡಿಕೊಳ್ಳಲು ಹೆಚ್ಚಿನ ವೆಚ್ಛ ಮಾಡಬೇಕಾಗಿದ್ದು, ಇದಕ್ಕೆ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಕಾರಣ ಎಂದು ಹೇಳಲಾಗಿದೆ.
ಇದೇ ವೇಳೆ ಇತರ ಕಾರು ತಯಾರಿಕಾ ಕಂಪನಿಗಳಾದ ಟಾಟಾ ಮೋಟರ್ಸ್, ಮಹೀಂದ್ರಾ, ಹೋಂಡಾ ಕಂಪನಿಗಳು ಕೂಡ ಶೀಘ್ರದಲ್ಲೇ ಬೆಲೆ ಏರಿಕೆ ಮಾಡಲಿವೆ ಎಂಬ ಮಾತುಗಳು ಕೇಳಿ ಬರುತ್ತಿವೆ.
