Karnataka Budget 2024: ಇದೊಂದು ಅಭಿವೃದ್ಧಿ ಪರ ಬಜೆಟ್, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

ಪ್ರಸಕ್ತ ಸಾಲಿನಲ್ಲಿ ಇಲಾಖೆ ನಿರೀಕ್ಷಿಸಿದಷ್ಟು ಬಜೆಟ್‌ ದಕ್ಕಿದ್ದು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಗೃಹಲಕ್ಷ್ಮಿಗೆ ಈ ಸಾಲಿನಲ್ಲಿ ₹ 28,608 ಕೋಟಿ ಒದಗಿಸಲಾಗಿದೆ. ಇದರಿಂದ ಕುಟುಂಬ ನಿರ್ವಹಣೆಯ ಜೊತೆಗೆ ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಮಹಿಳೆಯರಿಗೆ ಈ ಯೋಜನೆ ಅವಕಾಶ ಕಲ್ಪಿಸಲಾಗಿದೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ 

Minister Lakshmi Hebbalkar React to Siddaramaiah's Karnataka Budget 2024 grg

ಬೆಳಗಾವಿ(ಫೆ.17): ಮುಖ್ಯಮಂತ್ರಿ ಸಿದ್ದರಾಮಯ್ಯನವರು ಐತಿಹಾಸಿಕ ಹಾಗೂ ರಚನಾತ್ಮಕ ಬಜೆಟ್ ಮಂಡಿಸಿದ್ದು, ರಾಜ್ಯದ ಅಭಿವೃದ್ಧಿಗೆ ಪೂರಕವಾಗಿದೆ. ಎಲ್ಲಾ ವರ್ಗದವರಿಗೆ ಸಲ್ಲುವ ಬಜೆಟ್ ಇದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಮುಖ್ಯಮಂತ್ರಿಗಳಿಗೆ ಧನ್ಯವಾದ ಅರ್ಪಿಸಿದ್ದಾರೆ‌.

2024-25ನೇ ಸಾಲಿನಲ್ಲಿ ಮಹಿಳಾ ಉದ್ದೇಶಿತ ಯೋಜನೆಗಳಿಗೆ ₹ 86,423 ಕೋಟಿ ಒದಗಿಸಲಾಗಿದೆ. ಇಲಾಖೆಯ ಬಹುತೇಕ ಬೇಡಿಕೆಗಳಿಗೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದಾರೆ. ಮಕ್ಕಳ ಉದ್ದೇಶಿತ ಯೋಜನೆಗಳಿಗೆ ಬಜೆಟ್‌ನಲ್ಲಿ ₹54,617 ಕೋಟಿ ಒದಗಿಸಲಾಗಿದೆ ಎಂದರು.

ಬಜೆಟ್‌ನಲ್ಲಿ ಏನಿಲ್ಲಾ ಏನಿಲ್ಲಾ: ಬಿಜೆಪಿ ಆಕ್ರೋಶ

ಪ್ರಸಕ್ತ ಸಾಲಿನಲ್ಲಿ ಇಲಾಖೆ ನಿರೀಕ್ಷಿಸಿದಷ್ಟು ಬಜೆಟ್‌ ದಕ್ಕಿದ್ದು, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ಗೃಹಲಕ್ಷ್ಮಿಗೆ ಈ ಸಾಲಿನಲ್ಲಿ ₹ 28,608 ಕೋಟಿ ಒದಗಿಸಲಾಗಿದೆ. ಇದರಿಂದ ಕುಟುಂಬ ನಿರ್ವಹಣೆಯ ಜೊತೆಗೆ ಆದಾಯೋತ್ಪನ್ನ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಮಹಿಳೆಯರಿಗೆ ಈ ಯೋಜನೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು.

Latest Videos
Follow Us:
Download App:
  • android
  • ios