ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಿದ ಮುಖೇಶ್ ಅಂಬಾನಿ| ಅಪಾರ ರಾಜಕೀಯ ಜ್ಞಾನವಿರುವ ಅಭ್ಯರ್ಥಿ ಎಂದು ಹೊಗಳಿದ ಮುಖೇಶ್| ಮುಂಬೈ ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಲಿಂದ್ ದಿಯೋರಾ| ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯುಸ್ಥನ ವಿಡಿಯೋ ಶೇರ್ ಮಾಡಿದ ಮಿಲಿಂದ್|
ಮುಂಬೈ(ಏ.18): ಮಹತ್ವದ ಬೆಳವಣಿಗೆಯೊಂದರಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಖೇಶ್ ಅಂಬಾನಿ, ಮುಂಬೈ ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಿಲಿಂದ್ ದಿಯೋರಾ ಪರ ಬೆಂಬಲದ ಮಾತುಗಳನ್ನಾಡಿದ್ದಾರೆ.
ಮಿಲಿಂದ್ ದಿಯೋರಾ ಅವರಲ್ಲಿ ಅಪಾರ ರಾಜಕೀಯ ಜ್ಞಾನವಿದ್ದು, ಮುಂಬೈ ದಕ್ಷಿಣ ಲೋಕಸಭಾ ಕ್ಷೇತ್ರದ ಸಮಸ್ಯೆಗಳ ಕುರಿತು ಅರಿವಿದೆ ಎಂದು ಮುಖೇಶ್ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ಮಿಲಿಂದ್ ದಿಯೋರಾ, ಮುಖೇಶ್ ಬೆಂಬಲದಿಂದಾಗಿ ಗೆಲುವಿನ ವಿಶ್ವಾಸ ಮತ್ತಷ್ಟು ಹೆಚ್ಚಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಮಿಲಿಂದ್ ದಿಯೋರಾ ಟ್ವೀಟ್ ಮಾಡಿರುವ ವಿಡಿಯೋದಲ್ಲಿ ಇತರ ಸಣ್ಣಪುಟ್ಟ ವ್ಯಾಪಾರಿಗಳೂ ಕೂಡ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸುವ ಕುರಿತು ಹೇಳಿಕೆ ನೀಡಿದ್ದಾರೆ.
