ಆರ್‌ಬಿಐ ಡಿಜಿಟಲ್ ಪಾವತಿ ವಿಶೇಷ ಸಮಿತಿಯ ಅಧ್ಯಕ್ಷರಾಗಿ ನಂದನ್ ನಿಲೇಕಣಿ| ಡಿಜಿಟಲ್ ಪಾವತಿಯ ಭದ್ರತೆ ಬಗ್ಗೆ ವಿಶೇಷ ಸಮಿತಿಯಿಂದ ಅಧ್ಯಯನ| ಡಿಜಿಟಲ್ ಪಾವತಿ ಕುರಿತಂತೆ ಸಲಹೆ ಸೂಚನೆಗಳನ್ನು ನೀಡಲಿರುವ ಸಮಿತಿ| ವಿಶೇಷ ಸಮಿತಿಯಲ್ಲಿ ನಾಲ್ವರು ಸದಸ್ಯರು
ಮುಂಬೈ(ಜ.08): ಆಧಾರ್ ಯೋಜನೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದ ನಂದನ್ ನಿಲೇಕಣಿ ಅವರನ್ನು ಇದೀಗ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಡಿಜಿಟಲ್ ಪಾವತಿ ವಿಶೇಷ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ನೂತನ ಯೋಜನೆಗಳು, ಡಿಜಿಟಲ್ ಪಾವತಿಯ ಸಾಧಕ-ಬಾಧಕಗಳು, ಡಿಜಿಟಲ್ ಪಾವತಿಯ ಭದ್ರತೆ ಬಗ್ಗೆ ಈ ವಿಶೇಷ ಸಮಿತಿ ಆಳವಾಗಿ ಅಧ್ಯಯನ ಮಾಡಲಿದೆ. ಡಿಜಿಟಲ್ ಪಾವತಿ ಕುರಿತಂತೆ ಸಲಹೆ ಸೂಚನೆಗಳನ್ನು ಈ ಸಮಿತಿ ನೀಡಲಿದೆ.
Scroll to load tweet…
ಈ ವಿಶೇಷ ಸಮಿತಿಯಲ್ಲಿ ನಾಲ್ವರು ಸದಸ್ಯರಿರಲಿದ್ದಾರೆ. ಸಮಿತಿಯ ಸದಸ್ಯರಾಗಿ ಎಚ್ ಆರ್ ಖಾನ್, ಕಿಶೋರ್ ಸಾಂಸಿ, ಅರುಣಾ ಶರ್ಮಾ, ಸಂಜಯ್ ಜೈನ್ ಅವರನ್ನು ನೇಮಕ ಮಾಡಲಾಗಿದೆ ಎಂದು ಆರ್ಬಿಐ ಪ್ರಕಟಣೆಯಲ್ಲಿ ತಿಳಿಸಿದೆ.
