Asianet Suvarna News Asianet Suvarna News

'ನಾರಿ ನೀನು ನಾರಾಯಣಿ', ನಿರ್ಮಲಾ ಬಜೆಟ್‌ನಲ್ಲಿ ಮಹಿಳೆಯರಿಗೆ ಬಂಪರ್

ನಾರಿ ತೂ ನಾರಾಯಣಿ| ನಿರ್ಮಲಾ ಸೀತಾರಾಮನ್ ಬಜೆಟ್‌ನಲ್ಲಿ ಮಹಿಳಾ ಸಬಲೀಕರಣಕ್ಕೆ ಮಹತ್ವದ ಘೋಷಣೆ| ಮಹಿಳಾ ಸಭಿವೃದ್ಧಿಗೆ ಸಿಕ್ಕಿದ್ದೇನು?

Nari tu Narayani Budget 2019 focuses on women empowerment Rs 1 lakh loan under Mudra scheme for women entrepreneurs
Author
Bangalore, First Published Jul 5, 2019, 12:38 PM IST

ನವದೆಹಲಿ[ಜು.05]: ತಮ್ಮ ಚೊಚ್ಚಲ ಬಜೆಟ್ ಮಂಡಿಸುತ್ತಿರುವ ದೇಶದ ಮೊಟ್ಟ ಮೊದಲ ಪೂರ್ಣಾವಧಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಿರೀಕ್ಷೆಯಂತೆ ಮಹಿಳಾ ಸಬಲೀಕರಣಕ್ಕಾಗಿ ಮಹತ್ವದ ಯೋಜನೆಗಳನ್ನು ಘೋಷಿಸಿದ್ದಾರೆ. ಭಾರತದ ಪರಂಪರೆ 'ನಾರಿ ತೂ ನಾರಾಯಣಿ'[ನಾರಿ ನೀನು ನಾರಾಯಣಿ] ಎಂದು ಉಲ್ಲೇಖಿಸುವ ಮೂಲಕ ಸ್ವಾಮಿ ವಿವೇಕಾನಂದರ ಮಾತಿನಂತೆ ಮಹಿಳಾ ಸಬಲೀಕರಣಕ್ಕೆ ಪಣ ತೊಟ್ಟಿದ್ದಾರೆ.

Live| 'ರಾಷ್ಟ್ರೀಯ ಭದ್ರತೆ, ಆರ್ಥಿಕ ಅಭಿವೃದ್ಧಿ: ಜನತೆಗಾಗಿ ಕೇಂದ್ರದ ಬದ್ಧತೆ'!

ಮಹಿಳೆಯ ಸ್ಥಿತಿಗತಿ ಬದಲಾಗದೆ ವಿಶ್ವ ಅಭಿವೃದ್ಧಿಯಾಗಲು ಸಾಧ್ಯವಿಲ್ಲ. ಗ್ರಾಮೀಣಾಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ದೊಡ್ಡದು. ಭಾರತದ ಅಭಿವೃದ್ಧಿಯಲ್ಲಿ ಮಹಿಳೆಯರು ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗೀದಾರರಾಗಬೇಕು ಎಂದು ಮನವಿ ಮಾಡಿಕೊಂಡಿರುವ ನಿರ್ಮಲಾ ಸೀತಾರಾಮನ್, ಮಹಿಳಾ ಸಬಲೀಕರಣಕ್ಕಾಗಿ ಈ ಹಿಂದೆ ಜಾರಿಗೊಳಿಸಿರುವ ಮುದ್ರಾ, ಸ್ಟ್ಯಾಂಡ್ ಅಪ್ ಇಂಡಿಯಾ, ಸೆಲ್ಫ್ ಹೆಲ್ಪ್, ಗ್ರೂಪ್ ಸಪೋರ್ಟ್ನಂತಹ ಯೋಜನೆಗಳು ಮುಂದುವರೆಯಲಿವೆ ಎಂದಿದ್ದಾರೆ. 

ಹೊಸ ಯೋಜನೆಗಳು:

ಈ ಹಿಂದಿನ ಯೋಜನೆಗಳೊಂದಿಗೆ ಮುದ್ರಾ ಯೋಜನೆಯಡಿ ಮಹಿಳೆಯರಿಗೆ 1 ಲಕ್ಷ ರೂ.ವರೆಗೂ ಸಾಲ ಸೌಲಭ್ಯ| ಜನ್ ಧನ್ ಖಾತೆ ಹೊಂದಿರುವ ಮಹಿಳೆಯರಿಗೆ 5 ಸಾವಿರ ರೂ. ಓವರ್ ಡ್ರಾಫ್ಟ್ ಮಾಡಲು ಅವಕಾಶ| ದೇಶದ ಎಲ್ಲ ಮಹಿಳಾ ಸಂಘಗಳಿಗೆ ಬಡ್ಡಿ ವಿನಾಯಿತಿಯಲ್ಲಿ ಸಾಲ ನೀಡುವುದಾಗಿ ಘೋಷಿಸಿದ್ದಾರೆ.

'11ರಿಂದ 5ಕ್ಕೆ: ಯಾರು ತಡೆಯಲ್ಲ ನಾವು 1ನೇ ಸ್ಥಾನ ಬರಲಿಕ್ಕೆ'!

ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅತಿಹೆಚ್ಚು ಮಹಿಳೆಯರು,  ಅಂದರೆ 78 ಮಹಿಳೆಯರು ಸಂಸದರಾಗಿ ಸಂಸತ್ತು ಪ್ರವೇಶಿಸಿದ್ದಾರೆ. ದೇಶದ ಮಹಿಳಾ ಸಬಲೀಕರಣಕ್ಕೆ ಇದೇ ಸಾಕ್ಷಿ ಎಂದೂ ಉಲ್ಲೇಖಿಸಿದ್ದಾರೆ. 

Follow Us:
Download App:
  • android
  • ios