ರಿಲಯನ್ಸ್ ಮಂಡಳಿಯಿಂದ ನೀತಾ ಅಂಬಾನಿ ಹೊರಕ್ಕೆ , ಮಕ್ಕಳಿಗೆ ಹೊಸ ಹೊಣೆ!

ರಿಲಯನ್ಸ್ ಇಂಡಸ್ಟ್ರಿ ಲಿಮಿಟೆಡ್ ಬೋರ್ಡ್ 46ನೇ ಸಾಮಾನ್ಯ ವಾರ್ಷಿಕ ಸಭೆಯಲ್ಲಿ ಮಹತ್ವದ ನಿರ್ಧಾರಗಳು ಹೊರಬಿದ್ದಿದೆ. ಭಾರತ ಅತ್ಯಂತ ಶ್ರೀಮಂತ ಹಾಗೂ ಬೇಡಿಕೆಯ ಕಂಪನಿಯಾಗಿರುವ ರಿಲಯನ್ಸ್ ಇಂಡಸ್ಟ್ರೀ ಲಿಮಿಟೆಡ್ ಮಂಡಳಿಗೆ ನೀತಾ ಅಂಬಾನಿ ರಾಜೀನಾಮೆ ನೀಡಿದ್ದಾರೆ. ಇತ್ತ ಮುಕೇಶ್ ಅಂಬಾನಿ ಮಕ್ಕಳಿಗೆ ಹೊಸ ಜವಾಬ್ದಾರಿ ನೀಡಲು ಶಿಫಾರಸು ಮಾಡಲಾಗಿದೆ.
 

Nita Ambani to step down from Reliance Industries Board RIL recommends Isha akash Anant for new role ckm

ಮುಂಬೈ(ಆ.28) ಭಾರತ ಅತ್ಯಮೂಲ್ಯ ಕಂಪನಿಗಳ ಸಾಲಿನಲ್ಲಿ ಮುಂಚೂಣಿಯಲ್ಲಿರುವ ರಿಲಯನ್ಸ್ ಇಂಡಸ್ಟ್ರೀ ಲಿಮಿಟೆಡ್ ಇದೀಗ ಮಹತ್ವದ ನಿರ್ಧಾರ ಘೋಷಿಸಿದೆ. ಇಂದು ಮುಂಬೈನಲ್ಲಿ ನಡೆದ 46ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ರಿಲಯನ್ಸ್ ಚೇರ್ಮೆನ್ ಮುಕೇಶ್ ಅಂಬಾನಿ ಈ ಘೋಷಣೆ ಮಾಡಿದ್ದಾರೆ. ರಿಲಯನ್ಸ್ ಇಂಡಸ್ಟ್ರಿ ಲಿಮಿಟೆಡ್ ಬೋರ್ಡ್ ಸದಸ್ಯ ಸ್ಥಾನಕ್ಕೆ ನೀತಾ ಅಂಬಾನಿ ರಾಜೀನಾಮೆ ನೀಡಿದ್ದಾರೆ. ಇದೀಗ ಮಂಡಳಿಗೆ ಅಂಬಾನಿ ಮಕ್ಕಳಾದ ಇಶಾ, ಆಕಾಶ್ ಹಾಗೂ ಅನಂತ್ ಅಂಬಾನಿಯನ್ನು ಸೇರಿಸಲಾಗಿದೆ.

ನೀತಾ ಅಂಬಾನಿ ರಾಜೀನಾಮೆಯನ್ನು ರಿಲಯನ್ಸ್ ಇಂಡಸ್ಟ್ರೀ ಸ್ವೀಕರಿಸಿದೆ. ನೀತಾ ಅಂಬಾನಿ ರಿಲಯನ್ಸ್ ಇಂಡಸ್ಟ್ರಿ ಲಿಮಿಟೆಡ್ ಬೋರ್ಡ್ ಸಮಿತಿಗೆ ಮಾತ್ರ ರಾಜೀನಾಮೆ ನೀಡಿದ್ದಾರೆ. ರಿಲಯನ್ಸ್ ಫೌಂಡೇಶನ್‌ನ ಮುಖ್ಯಸ್ಥೆಯಾಗಿ ನೀತಾ ಅಂಬಾನಿ ಮುಂದುವರಿಯಲಿದ್ದಾರೆ ಎಂದು ರಿಲಯನ್ಸ್ ಸ್ಪಷ್ಟಪಡಿಸಿದೆ. ರಿಲಯನ್ಸ್ ಫೌಂಡೇಶನ್ ಮೇಲೆ ಹೆಚ್ಚಿನ ಗಮನ ಕೇಂದ್ರೀಕರಿಸಲು ಹಾಗೂ ಭಾರತದಲ್ಲಿ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಳ್ಳಲು ನೀತಾ ಅಂಬಾನಿ ರಿಲಯನ್ಸ್ ಬೋರ್ಡ್ ಆಫ್ ಡೈರೆಕ್ಟರ್ಸ್‌ಗೆ ರಾಜೀನಾಮೆ ನೀಡಿದ್ದಾರೆ. ಇದೀದ ನೀತಾ ಅಂಬಾನಿ ತಮ್ಮ ಎಲ್ಲಾ ಶ್ರಮ ಹಾಗೂ ಶಕ್ತಿಯನ್ನು ಫೌಂಡೇಶನ್‌ಗೆ ಬಳಸಿಕೊಳ್ಳಲಿದ್ದಾರೆ. ನೀತಾ ಅಂಬಾನಿ ನಾಯಕತ್ವದಲ್ಲಿ ರಿಲಯನ್ಸ್ ಫೌಂಡೇಶನ್ ಮಹತ್ವದ ಮೈಲಿಗಲ್ಲು ಸ್ಥಾಪಿಸಿದೆ ಎಂದು ಮುಕೇಶ್ ಹೇಳಿದ್ದಾರೆ.

 

ಅಂಬಾನಿ ರಿಲಯನ್ಸ್ ಇಂಡಸ್ಟ್ರೀಸ್ ಒಡೆತನದ ಜನಪ್ರಿಯ ಬ್ರ್ಯಾಂಡ್‌ಗಳಿವು, ನಿಮ್ಮ ಫೇವರಿಟ್ ಬ್ರಾಂಡ್‌ ಇದೆಯಾ?

ರಿಲಯನ್ಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಅವರ ಮಕ್ಕಳಾದ ಇಶಾ ಅಂಬಾನಿ, ಆಕಾಶ್ ಅಂಬಾನಿ ಮತ್ತು ಅನಂತ್ ಅಂಬಾನಿ ಅವರನ್ನು ಕಂಪೆನಿಯ ಕಾರ್ಯ ನಿರ್ವಾಹಕಯೇತರ (ನಾನ್ ಎಕ್ಸಿಕ್ಯೂಟಿವ್) ನಿರ್ದೇಶಕರನ್ನಾಗಿ ನೇಮಿಸಲು ಸೋಮವಾರ ನಡೆದ ಸಭೆಯಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್‌ಐಎಲ್) ನಿರ್ದೇಶಕರ ಮಂಡಳಿ ಶಿಫಾರಸು ಮಾಡಿದೆ. ಮಾನವ ಸಂಪನ್ಮೂಲ, ನಾಮನಿರ್ದೇಶನ ಮತ್ತು ಸಂಭಾವನೆ ಸಮಿತಿಯ ಶಿಫಾರಸುಗಳನ್ನು ಪರಿಗಣಿಸಿರುವ ಮಂಡಳಿ, ಈ ಮೂವರ ನೇಮಕಾತಿಗಾಗಿ ಅನುಮೋದನೆ ನೀಡಲು ಶಿಫಾರಸು ಮುಂದಿಟ್ಟಿದೆ. ಶೇರ್ ಹೋಲ್ಡರ್‌ಗಳ ಒಪ್ಪಿಗೆ ಬಳಿಕ ಅವರು ಅಧಿಕಾರ ಸ್ವೀಕರಿಸಿದ ದಿನಾಂಕದಿಂದ ನೇಮಕಾತಿಯು ಜಾರಿಗೆ ಬರಲಿದೆ. 

ಭಾರತದ ಮೇಲೆ ರಿಲಯನ್ಸ್ ಫೌಂಡೇಷನ್ ಮತ್ತಷ್ಟು ದೊಡ್ಡ ಮಟ್ಟದ ಪರಿಣಾಮ ಉಂಟುಮಾಡಲು ಸಾಧ್ಯವಾಗುವಂತೆ ಬೆಳೆಸಲು ಹಾಗೂ ಮಾರ್ಗದರ್ಶನ ನೀಡಲು ತಮ್ಮ ಉತ್ಸಾಹ ಹಾಗೂ ಸಮಯವನ್ನು ಮೀಸಲಿಡಲು ಬಯಸಿರುವ ನೀತಾ ಅಂಬಾನಿ ಅವರ ನಿರ್ಧಾರವನ್ನು ಗೌರವಿಸಿರುವ ನಿರ್ದೇಶಕರ ಮಂಡಳಿಯು, ಅವರ ರಾಜೀನಾಮೆಯನ್ನು ಸ್ವೀಕರಿಸಿದೆ. ರಿಲಯನ್ಸ್ ಫೌಂಡೇಷನ್‌ನ ಸಂಸ್ಥಾಪಕ ಅಧ್ಯಕ್ಷರಾಗಿ ನೀತಾ ಅಂಬಾನಿ ಅವರ ನಾಯಕತ್ವವನ್ನು ನಿರ್ದೇಶಕರ ಮಂಡಳಿ ಶ್ಲಾಘಿಸಿದೆ.

ರಿಲಯನ್ಸ್ ಫೌಂಡೇಷನ್ ನಿರ್ದೇಶಕರಾಗಿ ನೀತಾ ಅಂಬಾನಿ ಅವರು ಆರ್‌ಐಎಲ್‌ನ ಎಲ್ಲಾ ಮಂಡಳಿ ಸಭೆಗಳಲ್ಲಿ ಕಾಯಂ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ. ಇದರಿಂದ ಕಂಪೆನಿಯು ಅವರ ಸಲಹೆಗಳ ಪ್ರಯೋಜನ ಪಡೆಯುವುದನ್ನು ಮುಂದುವರಿಸಲು ನೆರವಾಗಲಿದೆ ಎಂದು ರಿಲಯನ್ಸ್ ಹೇಳಿಕೆ ತಿಳಿಸಿದೆ.

ವಿಶ್ವ ದಾಖಲೆ ಬರೆದ ಆಕಾಶ್ ಅಂಬಾನಿ ಉದ್ಯಮ, ಇನ್ಮುಂದೆ 2Gbps ಅತ್ಯಂತ ವೇಗದೊಂದಿಗೆ ಜಿಯೋ 5G ಲಭ್ಯ

ರೀಟೇಲ್, ಡಿಜಿಟಲ್ ಸೇವೆಗಳು ಮತ್ತು ಸರಕು ವ್ಯವಹಾರಗಳು ಸೇರಿದಂತೆ ಆರ್‌ಐಎಲ್‌ನ ಪ್ರಮುಖ ವ್ಯವಹಾರಗಳನ್ನು ಮುನ್ನಡೆಸುವ ಹಾಗೂ ನಿರ್ವಹಿಸುವ ಕಾರ್ಯದಲ್ಲಿ ಇಶಾ ಅಂಬಾನಿ, ಆಕಾಶ್ ಅಂಬಾನಿ ಮತ್ತು ಅನಂತ್ ಅಂಬಾನಿ ಅವರು ಕಳೆದ ಕೆಲವು ವರ್ಷಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಆರ್‌ಐಎಲ್‌ನ ಪ್ರಮುಖ ಅಂಗ ಸಂಸ್ಥೆಗಳ ಮಂಡಳಿಗಳಲ್ಲಿಯೂ ಅವರು ಸೇವೆ ಸಲ್ಲಿಸುತ್ತಿದ್ದಾರೆ. ಆರ್‌ಐಎಲ್ ಮಂಡಳಿಗೆ ಅವರ ನೇಮಕಾತಿಯು, ಅವರ ದೃಷ್ಟಿಕೋನ ಮತ್ತು ಹೊಸ ಆಲೋಚನೆಗಳಿಂದ ಕಂಪೆನಿಯ ಉನ್ನತಿಗೆ ನೆರವಾಗಲಿದೆ ಎಂದು ಮಂಡಳಿ ಅಭಿಪ್ರಾಯಪಟ್ಟಿದೆ
 

Latest Videos
Follow Us:
Download App:
  • android
  • ios