ನವದೆಹಲಿ(ಜೂ.02): ಸಣ್ಣ ಮತ್ತು ಮಧ್ಯಮ ಉದ್ಯಮಗಳಲ್ಲಿ ಉದ್ಯೋಗ ಸೃಷ್ಟಿಗೆ ಮೊದಲ ಅದ್ಯತೆ ನೀಡುವುದು ತಮ್ಮ ಉದ್ದೇಶ ಎಂದು ಕೇಂದ್ರ ಭೂ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಖಾತೆ ಮತ್ತು ಅತಿಸಣ್ಣ, ಸಣ್ಣ ಹಾಗೂ ಮಧ್ಯಮ ಉದ್ದಿಮೆ ಖಾತೆ ಸಚಿವ ನಿತಿನ್​ ಗಡ್ಕರಿ ಹೇಳಿದ್ದಾರೆ.

ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಗಡ್ಕರಿ, ಭೂ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಖಾತೆ ಹಾಗೂ ಅತಿಸಣ್ಣ, ಸಣ್ಣ ಹಾಗೂ ಮಧ್ಯಮ ಉದ್ದಿಮೆ ಇಲಾಖೆಗಳು ದೇಶದ ಬೆಳವಣಿಗೆ ಪ್ರಮಾಣ ಮತ್ತು ಉದ್ಯೋಗದ ಸಾಮರ್ಥ್ಯವನ್ನು ನಿರ್ಧರಿಸುತ್ತವೆ ಎಂದು ಹೇಳಿದರು. 

ಉದ್ಯೋಗ ಅವಕಾಶ ಹೆಚ್ಚಿಸುವುದು ಸರ್ಕಾರದ ಮುಖ್ಯ ಉದ್ದೇಶವಾಗಿದ್ದು, ಈ ನಿಟ್ಟಿನಲ್ಲಿ ತಮ್ಮ ಇಲಾಖೆ ಹಲವು ಯೋಜನೆಗಳೊಂದಿಗೆ ಮುಂದಡಿ ಇಡಲಿದೆ ಎಂದು ಗಡ್ಕರಿ ಸ್ಪಷ್ಟಪಡಿಸಿದ್ದಾರೆ.