ನವದೆಹಲಿ[ಸೆ.26]: ಪೆಟ್ರೋಲ್‌ ಬಂಕ್‌ಗಳಲ್ಲಿ ಪೆಟ್ರೋಲ್‌ ಹಾಗೂ ಡೀಸೆಲ್‌ಗೆ ಕ್ರೆಡಿಟ್‌ ಕಾರ್ಡ್‌ ಮೂಲಕ ಹಣ ಪಾವತಿಸಿದ ಗ್ರಾಹಕರು ಪಡೆಯುತ್ತಿದ್ದ ಶೇ.0.75 ಕ್ಯಾಶ್‌ಬ್ಯಾಕ್‌ ಸೌಲಭ್ಯವು ಅ.1ರಿಂದ ರದ್ದಾಗಲಿದೆ.

2016ರಲ್ಲಿ ನೋಟು ಅಪನಗದೀಕರಣದ ಬಳಿಕ ಡಿಜಿಟಲ್‌ ಪಾವತಿ ವ್ಯವಸ್ಥೆ ಪ್ರೋತ್ಸಾಹಕ್ಕಾಗಿ ಕ್ರೆಡಿಟ್‌ ಕಾರ್ಡ್‌ ಬಳಸುವ ಗ್ರಾಹಕರಿಗೆ ರಿಯಾಯತಿ ನೀಡುವಂತೆ ಕೇಂದ್ರ ಸರ್ಕಾರದ ನಿರ್ದೇಶನವನ್ನು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ರದ್ದುಗೊಳಿಸಲು ಮುಂದಾಗಿವೆ.

2019ರ ಅ.1ರಿಂದ ಕ್ರೆಡಿಟ್‌ ಕಾರ್ಡ್‌ ಮೂಲಕ ಹಣ ಪಾವತಿಸುವ ಗ್ರಾಹಕರಿಗೆ ನೀಡಲಾಗುತ್ತಿದ್ದ ಶೇ.0.75 ಕ್ಯಾಶ್‌ಬ್ಯಾಕ್‌ ಕೊಡುಗೆಯನ್ನು ರದ್ದುಗೊಳಿಸಲು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ನಿರ್ಧರಿಸಿವೆ ಎಂದು ತನ್ನ ಕ್ರೆಡಿಟ್‌ ಕಾರ್ಡ್‌ ಬಳಕೆಯ ಗ್ರಾಹಕರಿಗೆ ಎಸ್‌ಬಿಐ ಸಂದೇಶ ರವಾನಿಸಿದೆ.