ಹೊಸ ವರ್ಷವನ್ನು ಬರಮಾಡಿಕೊಳ್ಳಲು ಇನ್ನು ಬೆರಳೆಣಿಕೆ ದಿನಗಳಷ್ಟೇ ಬಾಕಿ ಉಳಿದಿವೆ. ಈ ಮಧ್ಯೆ ನಿತ್ಯಬಳಕೆ ವಸ್ತುಗಳಂತೆ ಇಂಧನ ದರವೂ ಏರಿಕೆಯಾಗಬಹುದಾ ಎಂಬ ಅನುಮಾನ ಜನಸಾಮಾನ್ಯರ ಮನಸ್ಸಿನಲ್ಲೇ ಇದ್ದೇಇದೆ. ಆದ್ರೆ ಇಂಥ ಯಾವುದೇ ಬದಲಾವಣೆಗಳು ಇಂದು ಘಟಿಸಿಲ್ಲ. ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಂದು ಕೂಡ ಯಥಾಸ್ಥಿತಿ ಕಾಯ್ದುಕೊಂಡಿದೆ.

ಬೆಂಗಳೂರು (ಡಿ.28): ಹಣದುಬ್ಬರ(Inflation)ಏರಿಕೆ ನಡುವೆಯೂ ದೇಶದಲ್ಲಿ ಪೆಟ್ರೋಲ್ (Petrol) ಹಾಗೂ ಡೀಸೆಲ್ (Diesel)ದರ ಸ್ಥಿರತೆ ಕಾಯ್ದುಕೊಂಡಿರೋದು ವಾಹನ ಸವಾರರಿಗೆ ಸ್ವಲ್ಪ ಮಟ್ಟಿಗೆ ನೆಮ್ಮದಿ ಒದಗಿಸಿದೆ. ಜಗತ್ತಿನಲ್ಲಿ ಕೊರೋನಾ ರೂಪಾಂತರಿ ಒಮಿಕ್ರಾನ್(Omicron) ಭೀತಿ ಮಡುಗಟ್ಟಿರೋ ಬೆನ್ನಲ್ಲೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ (Crude oil)ಬೆಲೆಯಲ್ಲಿ ನಿರಂತರ ಏರಿಳಿತ ಕಂಡುಬರುತ್ತಿದೆ. ಆದ್ರೆ ಈ ಬೆಲೆ ವ್ಯತ್ಯಯ ದೇಶೀಯ ಮಾರುಕಟ್ಟೆ ಮೇಲೆ ಈ ತನಕ ಯಾವುದೇ ಪರಿಣಾಮ ಬೀರಿಲ್ಲ. ದೀಪಾವಳಿ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಇಂಧನ ಮೇಲಿನ ಅಬಕಾರಿ ಸುಂಕ(excise duty)ಕಡಿತಗೊಳಿಸೋ ಮೂಲಕ ಬೆಲೆಯಲ್ಲಿ ಇಳಿಕೆ ಮಾಡಿತ್ತು. ಆ ಬಳಿಕ ದೆಹಲಿ (Delhi)ಹೊರತುಪಡಿಸಿದ್ರೆ ದೇಶದ ಇತರ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಇಂದು (ಡಿ.28) ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಎಷ್ಟಿದೆ?

Add Asianetnews Kannada as a Preferred SourcegooglePreferred

ರಾಜ್ಯದ ಪ್ರಮುಖ ನಗರಗಳಲ್ಲಿಇಂಧನ ದರ
ಬೆಂಗಳೂರಿನಲ್ಲಿ( Bengaluru)ಇಂದು ಪೆಟ್ರೋಲ್ ದರ ಲೀಟರ್ ಗೆ 100.58ರೂ. ಇದ್ದು, ಯಾವುದೇ ಬದಲಾವಣೆ ಕಂಡುಬಂದಿಲ್ಲ. ಡೀಸೆಲ್ ದರ ಲೀಟರ್ ಗೆ 85.01ರೂ ಇದೆ. ಹುಬ್ಬಳ್ಳಿಯಲ್ಲಿ (Hubli)ಪೆಟ್ರೋಲ್ ಬೆಲೆ ಇಂದು 100.30ರೂ. ಇದೆ. ನಿನ್ನೆ ಪೆಟ್ರೋಲ್ ಬೆಲೆ 100.55ರೂ. ಇತ್ತು. ಅಂದ್ರೆ ನಿನ್ನೆಗಿಂತ ಇಂದು 0.25ರೂ. ಇಳಿಕೆಯಾಗಿದೆ. ಡೀಸೆಲ್ ಬೆಲೆ ಇಂದು 84.78ರೂ. ಇತ್ತು. ನಿನ್ನೆ 85.01ರೂ. ಇತ್ತು. ಅಂದ್ರೆ 0.23ರೂ. ಇಳಿಕೆಯಾಗಿತ್ತು. ಮಂಗಳೂರಿನಲ್ಲಿ (Mangalore) ಪೆಟ್ರೋಲ್ ಬೆಲೆ 99.76 ರೂ. ಹಾಗೂ ಡೀಸೆಲ್ ದರ 84.24ರೂ.ಇದೆ. ಮೈಸೂರಿನಲ್ಲಿ (Mysore)ಪೆಟ್ರೋಲ್ ದರ ಲೀಟರ್ ಗೆ 100.32ರೂ. ಇದೆ. ನಿನ್ನೆ ಪೆಟ್ರೋಲ್ ದರ 100.38ರೂ. ಇದ್ದು, ೦.06ರೂ. ಇಳಿಕೆಯಾಗಿದೆ. ಇನ್ನು ಡೀಸೆಲ್ ದರ ಇಂದು ಲೀಟರ್ ಗೆ 84.77ರೂ. ಇದೆ. ನಿನ್ನೆ 84.33ರೂ. ಇದ್ದು, 0.06ರೂ. ಏರಿಕೆಯಾಗಿದೆ. ಕಲಬುರಗಿಯಲ್ಲಿ(Kalburgi)ನಿನ್ನೆ ಪೆಟ್ರೋಲ್ ಬೆಲೆ ಲೀಟರ್ ಗೆ 100.93ರೂ. ಇತ್ತು. ಇಂದು 0.12ರೂ. ಏರಿಕೆಯಾಗಿ 101.05ರೂ. ಇದೆ. ಡೀಸೆಲ್ ಲೀಟರ್ ಗೆ ನಿನ್ನೆ 85.35ರೂ. ಇತ್ತು. ಇಂದು 0.11ರೂ. ಏರಿಕೆಯಾಗಿ 85.46ರೂ. ಇದೆ. ಅಂದ್ರೆ 0.11ರೂ. ಏರಿಕೆಯಾಗಿದೆ.

Edible Oil: ಖಾದ್ಯ ತೈಲ ಕಂಪನಿಗಳಿಂದ ಶೇ.10-15ರಷ್ಟು ಬೆಲೆ ಕಡಿತ!

ಪೆಟ್ರೋಲ್ ದರ ಪರಿಷ್ಕರಣೆ ಹೇಗೆ? 
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರ್ಧರಣೆಯಲ್ಲಿಅನೇಕ ಅಂಶಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಮೊದಲನೆಯದಾಗಿ ಕಚ್ಚಾ ತೈಲದ ಬೆಲೆ, ಎರಡನೆಯದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುತ್ತಿರೋ ತೆರಿಗೆಗಳು. ಇವೆರಡರ ಜೊತೆಗೆ ಡೀಲರ್‌ಗಳ ಕಮೀಷನ್ ಹಾಗೂ ವ್ಯಾಟ್(VAT) ಕೂಡ ಬೆಲೆ ಮೇಲೆ ಪರಿಣಾಮ ಬೀರುತ್ತವೆ. ಪೆಟ್ರೋಲ್‌ ಹಾಗೂ ಡೀಸೆಲ್ ದುಬಾರಿಯಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸೋ ತೆರಿಗೆಗಳೇ ಕಾರಣ.ಇಂಧನಗಳ ಮೇಲೆ ವಿಧಿಸೋ ತೆರಿಗೆಗಳಿಂದ ಸರ್ಕಾರಕ್ಕೆ ದೊಡ್ಡ ಮೊತ್ತದ ಆದಾಯ ಸೃಷ್ಟಿಯಾಗುತ್ತದೆ. ಇದೇ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿತಗೊಳಿಸಲು ಹಿಂದೇಟು ಹಾಕೋದು.ಅಂತಾರಾಷ್ಟ್ರೀಯ ಕಚ್ಚಾ ತೈಲಗಳ ಮಾರುಕಟ್ಟೆಯಲ್ಲಿ ದರಗಳ ಏರಿಳಿತವಾಗುತ್ತಿರೋ ಕಾರಣ ಪ್ರತಿದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಈ ಹಿಂದೆ ಪೆಟ್ರೋಲ್ ದರವನ್ನು ಪ್ರತಿ 15 ದಿನಗಳಿಗೊಮ್ಮೆ ಬದಲಾಯಿಸಲಾಗುತ್ತಿತ್ತು. ಅಂದ್ರೆ ಪ್ರತಿ ತಿಂಗಳು 1 ಹಾಗೂ 16ನೇ ತಾರೀಖಿನಂದು ದರ ಬದಲಾವಣೆ ಮಾಡಲಾಗುತ್ತಿತ್ತು. ಆದ್ರೆ 2017ರ ಜೂನ್ 16ರಿಂದ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಯಿತು. ಅದರಡಿಯಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. 

Credit Card : ಉಚಿತವಾಗಿರಲ್ಲ ಕ್ರೆಡಿಟ್ ಕಾರ್ಡ್! ಗ್ರಾಹಕರಿಗೆ ಗೊತ್ತಿಲ್ಲದೆ ವಸೂಲಿ ಮಾಡಲಾಗುತ್ತೆ ಈ ಶುಲ್ಕ

GST ಇಲ್ಲ
ಪೆಟ್ರೋಲ್ ಹಾಗೂ ಡೀಸೆಲ್ ಸರಕು ಹಾಗೂ ಸೇವಾ ತೆರಿಗೆ (GST) ವ್ಯಾಪ್ತಿಗೆ ಬಾರದಿದ್ರೂ ಕೂಡ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನೇಕ ತೆರಿಗೆಗಳನ್ನು ವಿಧಿಸುತ್ತವೆ. ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಿದಾಗ ಅದರ ಮೇಲಿನ ಸುಂಕವನ್ನು ಸರ್ಕಾರ ಕಡಿತಗೊಳಿಸುತ್ತಿತ್ತು.ಆದ್ರೆ 2014ರಿಂದ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಬಿಟ್ಟಿದೆ. 

"