Asianet Suvarna News Asianet Suvarna News

Petrol Rate: ದೆಹಲಿಯಲ್ಲಿ ಮಾತ್ರ ಇಳಿಕೆಯಾದ ಪೆಟ್ರೋಲ್ ದರ, ರಾಜ್ಯದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?

ದೆಹಲಿಯಲ್ಲಿ ನಿನ್ನೆ(ಡಿ.1) ಪೆಟ್ರೋಲ್ ದರ ಲೀಟರ್ ಗೆ 8ರೂ. ಇಳಿಕೆಯಾಗಿದೆ. ಆದ್ರೆ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು (ಡಿ.2) ಕೂಡ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ಬದಲಾವಣೆಯಾಗಿಲ್ಲ. 

No changes in Petrol Diesel price in major cities of Karnataka Dec 2 2021 anu
Author
Bangalore, First Published Dec 2, 2021, 10:32 AM IST

ಬೆಂಗಳೂರು (ಡಿ.2): ರಾಜ್ಯದ ಪ್ರಮುಖ ನಗರಗಳಲ್ಲಿಇಂದು  (ಡಿ.2) ಕೂಡ  ಪೆಟ್ರೋಲ್ (Petrol) ಹಾಗೂ ಡೀಸೆಲ್ (Diesel) ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಸತತ 28 ದಿನಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ. ನಿನ್ನೆ (ಡಿ.1) ಇಂಧನ ದರದಲ್ಲಿ ಬದಲಾವಣೆಯಾಗಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ,ದೆಹಲಿ ಹೊರತುಪಡಿಸಿ ದೇಶದ ಬೇರೆ ಯವ ನಗರಗಳಲ್ಲಿಯೂ ಪೆಟ್ರೋಲ್ ಬೆಲೆಯಲ್ಲಿ ಬದಲಾವಣೆಯಾಗಿಲ್ಲ. ದೆಹಲಿ ಸರ್ಕಾರ ಪೆಟ್ರೋಲ್ ಮೇಲಿನ ವ್ಯಾಟ್ (VAT) ಅನ್ನು ನಿನ್ನೆ (ಡಿ.1) ಶೇ.30ರಿಂದ ಶೇ.19.40ಕ್ಕೆ ಇಳಿಕೆ ಮಾಡಿದ್ದು, ಲೀಟರ್ ಗೆ 8ರೂ.ಇಳಿಕೆಯಾಗಿದೆ. ಕಳೆದ ತಿಂಗಳು ನಿರಂತರ ಏರಿಕೆ ಕಂಡಿದ್ದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಕಳೆದ ಕೆಲವು ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿರೋದು ಜನಸಾಮಾನ್ಯರಿಗೆ ನೆಮ್ಮದಿ ನೀಡಿದೆ. ಅಲ್ಲದೆ, ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಇನ್ನಷ್ಟು ಇಳಿಕೆಯಾಗೋ ನಿರೀಕ್ಷೆ ಕೂಡ ಇದೆ. ರಾಜ್ಯದ ಪ್ರಮುಖ ನಗರಗಳಲ್ಲಿ(Cities) ಇಂದು (ಡಿ.2) ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?  

ರಾಜ್ಯದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಬೆಲೆ ಎಷ್ಟಿದೆ?
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ(Bangalore) ಇಂದು ಪೆಟ್ರೋಲ್ ದರ ಲೀಟರ್ ಗೆ 100.58ರೂ. ಹಾಗೂ ಡೀಸೆಲ್  ದರ 85.01 ರೂ.ಇದೆ. ಕಳೆದ 9 ದಿನಗಳಿಂದ ಸ್ವಲ್ಪವೂ ಬದಲಾವಣೆಯಾಗದೆ ಸ್ಥಿರತೆ ಕಾಯ್ದುಕೊಂಡಿದೆ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ (Hubli) ಪೆಟ್ರೋಲ್ ಬೆಲೆ 100.31ರೂ. ಹಾಗೂ ಡೀಸೆಲ್ ಬೆಲೆ 84.79 ರೂ.ಇದೆ. ಪೆಟ್ರೋಲ್ ದರ ನಿನ್ನೆ 0.31 ರೂ. ಏರಿಕೆಯಾಗಿದ್ರೆ, ಇಂದು 31 ರೂ. ಇಳಿಕೆ ದಾಖಲಿಸಿದೆ. ಡೀಸೆಲ್ ಬೆಲೆಯಲ್ಲಿ ನಿನ್ನೆ 0.28 ರೂ. ಹೆಚ್ಚಳವಾಗಿತ್ತು, ಆದ್ರೆ ಇಂದು 0.28 ರೂ. ಇಳಿಕೆಯಾಗಿದೆ. ಮಂಗಳೂರಿನಲ್ಲಿ (Mangalore) ಪೆಟ್ರೋಲ್ ಬೆಲೆ 99.76 ರೂ. ಹಾಗೂ ಡೀಸೆಲ್ ದರ 84.24ರೂ.ಇದ್ದರೆ, ಸಾಂಸ್ಕ್ರತಿಕ ನಗರಿ ಮೈಸೂರಿನಲ್ಲಿ (Mysore) ಪೆಟ್ರೋಲ್ ಗೆ 100.41ರೂ. ಹಾಗೂ ಡೀಸೆಲ್ ಗೆ 84.86ರೂ. ಇದೆ.  ಪೆಟ್ರೋಲ್ ದರದಲ್ಲಿ ನಿನ್ನೆಗಿಂತ 0.10ರೂ. ಹಾಗೂ ಡೀಸೆಲ್ ಬೆಲೆಯಲ್ಲಿ 0.09ರೂ. ಇಳಿಕೆಯಾಗಿದೆ. ಬಿಸಿಲ ನಗರಿ ಕಲಬುರಗಿಯಲ್ಲಿ (Kalburgi) ಪೆಟ್ರೋಲ್ ಗೆ 100.28ರೂ. ಹಾಗೂ ಡೀಸೆಲ್ ಗೆ 84.77ರೂ.ಇದೆ. ಪೆಟ್ರೋಲ್ ದರದಲ್ಲಿ ನಿನ್ನೆಗಿಂತ 0.65ರೂ. ಹಾಗೂ ಡೀಸೆಲ್ ಬೆಲೆಯಲ್ಲಿ 0.58ರೂ. ಇಳಿಕೆಯಾಗಿದೆ.

ರಾಷ್ಟ್ರರಾಜಧಾನಿಯಲ್ಲಿ ಪೆಟ್ರೋಲ್ ಬೆಲೆಯಲ್ಲಿಇಳಿಕೆ

ಪೆಟ್ರೋಲ್ ದರ ಪರಿಷ್ಕರಣೆ ಹೇಗೆ?
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರ್ಧರಣೆಯಲ್ಲಿಅನೇಕ ಅಂಶಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಮೊದಲನೆಯದಾಗಿ ಕಚ್ಚಾ ತೈಲದ ಬೆಲೆ, ಎರಡನೆಯದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುತ್ತಿರೋ ತೆರಿಗೆಗಳು. ಇವೆರಡರ ಜೊತೆಗೆ ಡೀಲರ್‌ಗಳ ಕಮೀಷನ್ ಹಾಗೂ ವ್ಯಾಟ್(VAT) ಕೂಡ ಬೆಲೆ ಮೇಲೆ ಪರಿಣಾಮ ಬೀರುತ್ತವೆ. ಪೆಟ್ರೋಲ್‌ ಹಾಗೂ ಡೀಸೆಲ್ ದುಬಾರಿಯಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸೋ ತೆರಿಗೆಗಳೇ ಕಾರಣ.ಇಂಧನಗಳ ಮೇಲೆ ವಿಧಿಸೋ ತೆರಿಗೆಗಳಿಂದ ಸರ್ಕಾರಕ್ಕೆ ದೊಡ್ಡ ಮೊತ್ತದ ಆದಾಯ ಸೃಷ್ಟಿಯಾಗುತ್ತದೆ. ಇದೇ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿತಗೊಳಿಸಲು ಹಿಂದೇಟು ಹಾಕೋದು.ಅಂತಾರಾಷ್ಟ್ರೀಯ ಕಚ್ಚಾ ತೈಲಗಳ ಮಾರುಕಟ್ಟೆಯಲ್ಲಿ ದರಗಳ ಏರಿಳಿತವಾಗುತ್ತಿರೋ ಕಾರಣ ಪ್ರತಿದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಈ ಹಿಂದೆ ಪೆಟ್ರೋಲ್ ದರವನ್ನು ಪ್ರತಿ 15 ದಿನಗಳಿಗೊಮ್ಮೆ ಬದಲಾಯಿಸಲಾಗುತ್ತಿತ್ತು. ಅಂದ್ರೆ ಪ್ರತಿ ತಿಂಗಳು 1 ಹಾಗೂ 16ನೇ ತಾರೀಖಿನಂದು ದರ ಬದಲಾವಣೆ ಮಾಡಲಾಗುತ್ತಿತ್ತು. ಆದ್ರೆ 2017ರ ಜೂನ್ 16ರಿಂದ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಯಿತು. ಅದರಡಿಯಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. 

ಬೆಲೆ ಏರಿಕೆ ಬಿಸಿ, ಗ್ಯಾಸ್‌ ಸಿಲಿಂಡರ್‌ ಬೆಲೆ ಮತ್ತೆ 103.50ರೂ. ಹೆಚ್ಚಳ!

GST ಇಲ್ಲ
ಪೆಟ್ರೋಲ್ ಹಾಗೂ ಡೀಸೆಲ್ ಸರಕು ಹಾಗೂ ಸೇವಾ ತೆರಿಗೆ (GST) ವ್ಯಾಪ್ತಿಗೆ ಬಾರದಿದ್ರೂ ಕೂಡ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನೇಕ ತೆರಿಗೆಗಳನ್ನು ವಿಧಿಸುತ್ತವೆ. ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಿದಾಗ ಅದರ ಮೇಲಿನ ಸುಂಕವನ್ನು ಸರ್ಕಾರ ಕಡಿತಗೊಳಿಸುತ್ತಿತ್ತು.ಆದ್ರೆ 2014ರಿಂದ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಬಿಟ್ಟಿದೆ. 

"

Follow Us:
Download App:
  • android
  • ios