ಬೆಂಗಳೂರಿನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಇಂದು ಕೊಂಚ ಏರಿಕೆ ಕಂಡುಬಂದಿದ್ದರೂ ಅದು ಕೆಲವೇ ಕೆಲವು ಪೈಸೆಗಳಿಗಷ್ಟೇ ಸೀಮಿತವಾಗಿದೆ. ಹೀಗಾಗಿ ಕ್ರಿಸ್ಮಸ್ ಸಂಭ್ರಮದಲ್ಲಿರೋ ವಾಹನ ಸವಾರರು ಇಂದು ಇಂಧನ ದರದ ಬಗ್ಗೆ ತಲೆಕೆಡಿಸಿಕೊಳ್ಳಬೇಕಾದ ಅಗತ್ಯವಿಲ್ಲ.
ಬೆಂಗಳೂರು (ಡಿ.25): ಕೇಂದ್ರ ಸರ್ಕಾರ ಅಬಕಾರಿ ಸುಂಕ (excise duty) ಕಡಿತಗೊಳಿಸಿದ ಪರಿಣಾಮ ನವೆಂಬರ್ 4ರಂದು ದೇಶಾದ್ಯಂತ ಪೆಟ್ರೋಲ್ (Petrol) ಹಾಗೂ ಡೀಸೆಲ್ (Diesel) ದರದಲ್ಲಿ ಲೀಟರ್ ಗೆ ಕ್ರಮವಾಗಿ 5ರೂ. ಹಾಗೂ 10ರೂ. ಇಳಿಕೆಯಾಗಿದೆ.ಕೇಂದ್ರ ಸರ್ಕಾರದ ಈ ನಿರ್ಧಾರದ ಬೆನ್ನಲ್ಲೇ ಅನೇಕ ರಾಜ್ಯ ಸರ್ಕಾರಗಳು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ವ್ಯಾಟ್ (VAT) ಕಡಿತಗೊಳಿಸಿದವು. ಇದ್ರಿಂದ ಕೆಲವು ರಾಜ್ಯಗಳಲ್ಲಿ ಇಂಧನ ದರದಲ್ಲಿ ಇನ್ನಷ್ಟು ಇಳಿಕೆ ಕಂಡುಬಂದಿದೆ. ದೆಹಲಿ( Delhi) ಸರ್ಕಾರ ಡಿಸೆಂಬರ್ 1ರಂದು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ವ್ಯಾಟ್ (VAT)ಅನ್ನು ಶೇ.30ರಿಂದ ಶೇ.19.40ಕ್ಕೆ ಇಳಿಕೆ ಮಾಡಿದೆ. ಇದ್ರಿಂದ ರಾಷ್ಟ್ರ ರಾಜ್ಯಧಾನಿಯಲ್ಲಿ ಪೆಟ್ರೋಲ್ ಬೆಲೆಯಲ್ಲಿ ಲೀಟರ್ ಗೆ 8ರೂ.ಇಳಿಕೆಯಾಗಿದೆ. ದೆಹಲಿ ಬಿಟ್ಟರೆ ಬೇರೆ ಯಾವ ರಾಜ್ಯಗಳಲ್ಲೂ ಸುಮಾರು ಒಂದೂವರೆ ತಿಂಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು(ಡಿ.25) ಇಂಧನ ದರ ಹೀಗಿದೆ.
ರಾಜ್ಯದ ಪ್ರಮುಖ ನಗರಗಳಲ್ಲಿಇಂಧನ ದರ
ಬೆಂಗಳೂರಿನಲ್ಲಿ( Bengaluru)ಇಂದು ಪೆಟ್ರೋಲ್ ದರದಲ್ಲಿ 0.07 ಏರಿಕೆ ಕಂಡುಬಂದಿದ್ದು, ಲೀಟರ್ ಗೆ 100.65ರೂ. ಇದೆ. ಡೀಸೆಲ್ ದರದಲ್ಲಿ ಲೀಟರ್ ಗೆ 0.07ರೂ. ಏರಿಕೆಯಾಗಿದ್ದು, 85.08 ರೂ.ಇದೆ. ಹುಬ್ಬಳ್ಳಿಯಲ್ಲಿ (Hubli)ಪೆಟ್ರೋಲ್ ಬೆಲೆ 100.31ರೂ. ಇದೆ. ಡೀಸೆಲ್ ಬೆಲೆ ಇಂದು 84.79 ರೂ.ಇದೆ. ಮಂಗಳೂರಿನಲ್ಲಿ (Mangalore) ಪೆಟ್ರೋಲ್ ಬೆಲೆ 99.76 ರೂ. ಹಾಗೂ ಡೀಸೆಲ್ ದರ 84.24ರೂ.ಇದೆ. ಮೈಸೂರಿನಲ್ಲಿ (Mysore)ಪೆಟ್ರೋಲ್ ದರ ಲೀಟರ್ ಗೆ 100.65ರೂ. ಇದೆ. ನಿನ್ನೆ ಪೆಟ್ರೋಲ್ ದರ 100.08ರೂ. ಇದ್ದು, ೦.57ರೂ. ಏರಿಕೆಯಾಗಿದೆ. ಇನ್ನು ಡೀಸೆಲ್ ದರ ಇಂದು ಲೀಟರ್ ಗೆ 85.08ರೂ. ಇದೆ. ನಿನ್ನೆ 84.56ರೂ. ಇದ್ದು, 0.52ರೂ. ಏರಿಕೆಯಾಗಿದೆ. ಕಲಬುರಗಿಯಲ್ಲಿ(Kalburgi)ನಿನ್ನೆ ಪೆಟ್ರೋಲ್ ಬೆಲೆ ಲೀಟರ್ ಗೆ 101.28ರೂ. ಇತ್ತು. ಇಂದು 0.68ರೂ. ಏರಿಕೆಯಾಗಿ 100.96ರೂ. ಇದೆ. ಡೀಸೆಲ್ ಲೀಟರ್ ಗೆ ನಿನ್ನೆ 84.77ರೂ. ಇತ್ತು. ಇಂದು 85.38ರೂ. ಇದೆ. ಅಂದ್ರೆ 0.61ರೂ. ಏರಿಕೆಯಾಗಿದೆ.
Aadhaar card: ಆಧಾರ್ ಕಾರ್ಡ್ ಕಳೆದು ಹೋಗಿದೆಯಾ? ಮರಳಿ ಪಡೆಯಲು ಹೀಗೆ ಮಾಡಿ
ಪೆಟ್ರೋಲ್ ದರ ಪರಿಷ್ಕರಣೆ ಹೇಗೆ?
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರ್ಧರಣೆಯಲ್ಲಿಅನೇಕ ಅಂಶಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಮೊದಲನೆಯದಾಗಿ ಕಚ್ಚಾ ತೈಲದ ಬೆಲೆ, ಎರಡನೆಯದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುತ್ತಿರೋ ತೆರಿಗೆಗಳು. ಇವೆರಡರ ಜೊತೆಗೆ ಡೀಲರ್‌ಗಳ ಕಮೀಷನ್ ಹಾಗೂ ವ್ಯಾಟ್(VAT) ಕೂಡ ಬೆಲೆ ಮೇಲೆ ಪರಿಣಾಮ ಬೀರುತ್ತವೆ. ಪೆಟ್ರೋಲ್ ಹಾಗೂ ಡೀಸೆಲ್ ದುಬಾರಿಯಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸೋ ತೆರಿಗೆಗಳೇ ಕಾರಣ.ಇಂಧನಗಳ ಮೇಲೆ ವಿಧಿಸೋ ತೆರಿಗೆಗಳಿಂದ ಸರ್ಕಾರಕ್ಕೆ ದೊಡ್ಡ ಮೊತ್ತದ ಆದಾಯ ಸೃಷ್ಟಿಯಾಗುತ್ತದೆ. ಇದೇ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿತಗೊಳಿಸಲು ಹಿಂದೇಟು ಹಾಕೋದು.ಅಂತಾರಾಷ್ಟ್ರೀಯ ಕಚ್ಚಾ ತೈಲಗಳ ಮಾರುಕಟ್ಟೆಯಲ್ಲಿ ದರಗಳ ಏರಿಳಿತವಾಗುತ್ತಿರೋ ಕಾರಣ ಪ್ರತಿದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಈ ಹಿಂದೆ ಪೆಟ್ರೋಲ್ ದರವನ್ನು ಪ್ರತಿ 15 ದಿನಗಳಿಗೊಮ್ಮೆ ಬದಲಾಯಿಸಲಾಗುತ್ತಿತ್ತು. ಅಂದ್ರೆ ಪ್ರತಿ ತಿಂಗಳು 1 ಹಾಗೂ 16ನೇ ತಾರೀಖಿನಂದು ದರ ಬದಲಾವಣೆ ಮಾಡಲಾಗುತ್ತಿತ್ತು. ಆದ್ರೆ 2017ರ ಜೂನ್ 16ರಿಂದ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಯಿತು. ಅದರಡಿಯಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ನಿಗದಿಪಡಿಸುತ್ತವೆ.
GST ಇಲ್ಲ
ಪೆಟ್ರೋಲ್ ಹಾಗೂ ಡೀಸೆಲ್ ಸರಕು ಹಾಗೂ ಸೇವಾ ತೆರಿಗೆ (GST) ವ್ಯಾಪ್ತಿಗೆ ಬಾರದಿದ್ರೂ ಕೂಡ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನೇಕ ತೆರಿಗೆಗಳನ್ನು ವಿಧಿಸುತ್ತವೆ. ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಿದಾಗ ಅದರ ಮೇಲಿನ ಸುಂಕವನ್ನು ಸರ್ಕಾರ ಕಡಿತಗೊಳಿಸುತ್ತಿತ್ತು.ಆದ್ರೆ 2014ರಿಂದ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಬಿಟ್ಟಿದೆ.
"
