Asianet Suvarna News Asianet Suvarna News

ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ವಿಫುಲ ಅವಕಾಶ: ಸಿಎಂ ಬೊಮ್ಮಾಯಿ

ದೇಶದಲ್ಲೇ ಕರ್ನಾಟಕ ಬಂಡವಾಳ ಹೂಡಿಕೆಗೆ ಪ್ರಶಸ್ತ್ಯವಾಗಿದೆ. ಬೆಂಗಳೂರಿನಲ್ಲೇ ಪ್ರತಿಷ್ಠಿತ ಕಂಪನಿಗಳು ಕಚೇರಿ ತೆರೆದಿವೆ. ವಿಶ್ವದ 500 ಬೃಹತ್‌ ಕೈಗಾರಿಕೆಗಳಿಗೆ 150 ವರ್ಷದಷ್ಟು ಇತಿಹಾಸವಿದೆ: ಸಿಎಂ  

Opportunity for Capital Investment in Karnataka Says CM Basavaraj Bommai grg
Author
First Published Sep 16, 2022, 7:02 AM IST

ಬೆಂಗಳೂರು(ಸೆ.16):  ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ವಿಫುಲ ಅವಕಾಶಗಳಿವೆ. ಮುಂದಿನ 10 ವರ್ಷದೊಳಗೆ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಮಹತ್ವದ ಬದಲಾವಣೆಯಾಗಲಿದ್ದು, ಸಾಂಪ್ರದಾಯಿಕ ಇಂಧನಗಳ ಬಳಕೆ ಗಣನೀಯವಾಗಿ ಕಡಿಮೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

ತುಮಕೂರು ರಸ್ತೆಯ ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಲಘು ಉದ್ಯೋಗ ಭಾರತಿ ಮತ್ತು ಕರ್ನಾಟಕ ಐ.ಎಂ.ಎಸ್‌. ಪ್ರತಿಷ್ಠಾನದಿಂದ ಆಯೋಜಿಸಿದ್ದ ಭಾರತೀಯ ತಯಾರಕರ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಂಡವಾಳ ಹೂಡಿಕೆಗೆ ದೇಶದಲ್ಲೇ ರಾಜ್ಯ ಪ್ರಶಸ್ತ್ಯವಾಗಿದೆ. ಇಲ್ಲಿ ಕೈಗಾರಿಕಾ ಸ್ನೇಹಿ ವಾತಾವರಣವಿದ್ದು, ಹೂಡಿಕೆಗೆ ಸಾಕಷ್ಟುಅವಕಾಶಗಳಿದ್ದು ಸದ್ಭಳಕೆ ಮಾಡಿಕೊಳ್ಳಬೇಕು. ಬದಲಾವಣೆಯ ಯುಗದಲ್ಲಿ ನಾವಿದ್ದು ಇದನ್ನು ಉಪಯೋಗಿಸಿಕೊಳ್ಳಬೇಕು. ಸೌರಶಕ್ತಿ, ಪವನಶಕ್ತಿ, ಎಥನಾಲ್‌ ಉತ್ಪಾದನೆಗೆ ಸರ್ಕಾರ ಆದ್ಯತೆ ನೀಡಿದೆ. ನಮ್ಮಲ್ಲಿ ಅಧಿಕ ಸಕ್ಕರೆ ಕಾರ್ಖಾನೆಗಳು ಇರುವುದರಿಂದ ಎಥನಾಲ್‌ ಉತ್ಪಾದನೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ ಎಂದು ವಿವರಿಸಿದರು.

ತೆರಿಗೆದಾರರೇ ಗಮನಿಸಿ, ಅಕ್ಟೋಬರ್ 1ರಿಂದ ಈ ಎರಡು ನಿಯಮಗಳಲ್ಲಿ ಬದಲಾವಣೆ

ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ದೇಶ ಸಮರ್ಥವಾಗಿ ಮುನ್ನಡೆಯುತ್ತಿದೆ. ಮೊದಲೆಲ್ಲಾ ಕಲ್ಲಿದ್ದಲನ್ನು ವಿದೇಶಗಳಿಂದ ಆಮದು ಮಾಡಿಕೊಳ್ಳಲಾಗುತ್ತಿತ್ತು. ಆದರೆ ಈಗ ಆಮದು ನಿಲ್ಲಿಸಿದ್ದು ಸ್ವಾವಲಂಬನೆ ಸಾಧಿಸಲಾಗಿದೆ. ಹಿಂದೆ ಪಿಪಿಇ ಕಿಟ್‌ಗಳನ್ನೂ ಆಮದು ಮಾಡಿಕೊಳ್ಳಲಾಗುತ್ತಿತ್ತು. ಅದರಲ್ಲೇನು ರಾಕೆಟ್‌ ಟೆಕ್ನಾಲಜಿ ಇರುತ್ತದೆಯೇ ಎಂದು ಪ್ರಶ್ನಿಸಿದರು.
ಶಾಸಕ ಎಸ್‌.ಆರ್‌.ವಿಶ್ವನಾಥ್‌, ಲಘು ಉದ್ಯೋಗ ಭಾರತಿಯ ಸಚಿನ್‌ ಸಬನೀಸ್‌, ಕೃಷ್ಣ ಹಾಜರಿದ್ದರು.

ಆತ್ಮಾವಲೋಕನ ಮಾಡಿಕೊಳ್ಳಬೇಕು

ದೇಶದಲ್ಲೇ ಕರ್ನಾಟಕ ಬಂಡವಾಳ ಹೂಡಿಕೆಗೆ ಪ್ರಶಸ್ತ್ಯವಾಗಿದೆ. ಬೆಂಗಳೂರಿನಲ್ಲೇ ಪ್ರತಿಷ್ಠಿತ ಕಂಪನಿಗಳು ಕಚೇರಿ ತೆರೆದಿವೆ. ವಿಶ್ವದ 500 ಬೃಹತ್‌ ಕೈಗಾರಿಕೆಗಳಿಗೆ 150 ವರ್ಷದಷ್ಟು ಇತಿಹಾಸವಿದೆ. ಆದರೆ ರಾಜ್ಯದ ಬೃಹತ್‌ ಕೈಗಾರಿಕೆಗಳಿಗೆ ಕೇವಲ 50 ವರ್ಷ ಮಾತ್ರ ಇತಿಹಾಸವಿದ್ದು, ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಕೈಗಾರಿಕಾ ಸಚಿವ ಮುರುಗೇಶ್‌ ನಿರಾಣಿ ಕರೆ ನೀಡಿದರು. ಬೆಂಗಳೂರಿನಲ್ಲಿ ಉತ್ತಮ ವಾತಾವವರಣವಿದ್ದು ಹವಾನಿಯಂತ್ರಿತ ನಗರವಾಗಿದೆ. ಕಾನೂನು ಸುವ್ಯವಸ್ಥೆ ಪಾಲಿಸಲಾಗುತ್ತಿದೆ. ಕರ್ನಾಟಕದಲ್ಲಿ ಕೈಗಾರಿಕೆ ಸ್ಥಾಪಿಸುವುದೇ ಹೆಮ್ಮೆಯಾಗಿದೆ. ಮಹಿಳಾ ಉದ್ಯಮಿಗಳಿಗೆ ವಿಶೇಷ ರಿಯಾಯಿತಿ ನೀಡುವ ಯೋಜನೆಯನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ಭರವಸೆ ನೀಡಿದರು.

ತುಮಕೂರು ರಸ್ತೆಯ ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿ ಲಘು ಉದ್ಯೋಗ ಭಾರತಿ ಮತ್ತು ಕರ್ನಾಟಕ ಐ.ಎಂ.ಎಸ್‌. ಪ್ರತಿಷ್ಠಾನದಿಂದ ಆಯೋಜಿಸಿದ್ದ ಭಾರತೀಯ ತಯಾರಕರ ಪ್ರದರ್ಶನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹಾಜರಿದ್ದರು.
 

Follow Us:
Download App:
  • android
  • ios