ನಿಮ್ಮೂರಲ್ಲಿ ಪೆಟ್ರೋಲ್, ಡಿಸೆಲ್ ಬೆಲೆ ಇಳಿಕೆಯಾಗಿದೆ! ಸತತ 9ನೇ ದಿನವೂ ಇಳಿಕೆಯತ್ತ ಮುಖ ಮಾಡಿದ ತೈಲದರ! ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದರದಲ್ಲಿ ಇಳಿಕೆ! ಡಾಲರ್ ಎದುರು ಚೇತರಿಕೆ ಕಂಡ ಭಾರತದ ರೂಪಾಯಿ ಮೌಲ್ಯ

ನವದೆಹಲಿ(ಅ.26): ಸತತ ೯ನೇ ದಿನವೂ ತೈಲದರದಲ್ಲಿ ಇಳಿಕೆ ಕಂಡು ಬಂದಿದ್ದು, ದೇಶದ ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಗಮನಾರ್ಹ ಇಳಿಕೆಯಾಗಿದೆ.

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದರದಲ್ಲಿ ಇಳಿಕೆ ಮತ್ತು ಡಾಲರ್ ಎದುರು ಭಾರತದ ರೂಪಾಯಿ ಮೌಲ್ಯ ಚೇತರಿಕೆ ಕಂಡು ಬಂದ ಪರಿಣಾಮ ತೈಲದರದಲ್ಲಿ ಇಳಿಕೆ ಕಂಡು ಬರುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Scroll to load tweet…

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಪೆಟ್ರೋಲ್ ಬೆಲೆ 80.85 ರೂ. ಆಗಿದ್ದು, ಡೀಸೆಲ್ ಬೆಲೆ 74.73 ರೂ. ಆಗಿದೆ. ಅದರಂತೆ ವಾಣಿಜ್ಯ ನಗರಿ ಮುಂಬೈನಲ್ಲಿ 86.33 ರೂ. ಇದ್ದು, ಡೀಸೆಲ್ ಬೆಲೆ 78.33 ರೂ. ಆಗಿದೆ.

ಇನ್ನು ಚೆನ್ನೈನಲ್ಲಿ ಪೆಟ್ರೋಲ್ 84.02 ರೂ. ಮತ್ತು ಡೀಸೆಲ್ 79.02 ರೂ. ದರದಲ್ಲಿ ಮಾರಾಟವಾಗುತ್ತಿದೆ. ಪ.ಬಂಗಾಳ ರಾಜಧಾನಿ ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 82.71 ರೂ. ಮತ್ತು ಡೀಸೆಲ್ ಬೆಲೆ 76.58 ರೂ. ಆಗಿದೆ.

ಇನ್ನು ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 81.74ರೂ. ಮತ್ತು ಡೀಸೆಲ್ ಬೆಲೆ 75.24 ರೂ. ಇದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತೀ ಬ್ಯಾರೆಲ್ ಕಚ್ಚಾ ತೈಲ ಬೆಲೆಯಲ್ಲಿ 10 ಯುಎಸ್ ಡಾಲರ್ ಇಳಿಕೆಯಾಗಿರುವುದು ಸಹ ತೈಲದರ ಇಳಿಕೆಗೆ ಕಾರಣ ಎನ್ನಲಾಗಿದೆ.