ಕರ್ನಾಟಕದ ಪ್ರಮುಖ ನಗರಗಳಲ್ಲಿ ಬದಲಾವಣೆ ಕಾಣದ ಪೆಟ್ರೋಲ್, ಡೀಸೆಲ್ ದರ ಕಲಬುರಗಿಯಲ್ಲಿ ಅಲ್ಪ ಏರಿಕೆ ಕಂಡ ಪೆಟ್ರೋಲ್, ಡೀಸೆಲ್ಇಲ್ಲಿದೆ ಬುಧವಾರದ ಪೆಟ್ರೋಲ್, ಡೀಸೆಲ್ ದರ
ಬೆಂಗಳೂರು(ಜ.04): ದೊಡ್ಡ ಮಟ್ಟದ ಏರಿಕೆ ಕಂಡಿದ್ದ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಮತ್ತೊಮ್ಮೆ ಯಾವುದೇ ಬದಲಾವಣೆಯಾಗಿಲ್ಲ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಪೆಟ್ರೋಲ್ ಡೀಸೇಲ್ ದರದಲ್ಲಿ ಬದಲಾವಣೆಯಾಗಿಲ್ಲ. ಮೈಸೂರು ಹಾಗೂ ಕಲಬುರಗಿಯಲ್ಲಿ ಮಾತ್ರವೇ ದರಗಳಲ್ಲಿ ಬದಲಾವಣೆ ಕಂಡಿದೆ. ಸಾಂಸ್ಕೃತಿಕ ನಗರಿಯಲ್ಲಿ ಪೆಟ್ರೋಲ್ ದರದ ಮೇಲೆ 14 ಪೈಸೆ ಕಡಿಮೆಯಾಗಿದ್ದರೆ, ಡೀಸೆಲ್ ದರದಲ್ಲಿ 12 ಪೈಸೆ ಕಡಿಮೆಯಾಗಿದೆ. ಇನ್ನು ಕಲಬುರಗಿಯಲ್ಲಿ ಪೆಟ್ರೋಲ್ ದರದ ಮೇಲೆ 30 ಪೈಸೆ ಏರಿಕೆಯಾಗಿದ್ದರೆ, ಡೀಸೆಲ್ ದರದ ಮೇಲೆ 27 ಪೈಸೆ ಏರಿಕೆ ಕಂಡಿದೆ."
ರಾಜ್ಯದ ಪ್ರಮುಖ ನಗರಗಳಲ್ಲಿ ಹೀಗಿದೆ ಇಂಧನ ದರ
* ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಪೆಟ್ರೋಲ್ ದರ 100.58 ರೂ. ಹಾಗೂ ಡೀಸೆಲ್ ದರ 85.01ರೂ. ಆಗಿದೆ.
* ಹುಬ್ಬಳ್ಳಿಯಲ್ಲಿ (Hubballi) ಪೆಟ್ರೋಲ್ ದರ 100.31 ರೂ. ಆಗಿದ್ದರೆ, ಡೀಸೆಲ್ ದರ 84.79ರೂ. ಆಗಿದೆ.
* ಅತ್ತ ಕರಾವಳಿ ನಾಡು ಮಂಗಳೂರಿನಲ್ಲಿ (Mangaluru) ಪೆಟ್ರೋಲ್ ದರ 99.76 ರೂ ಹಾಗೂ ಡೀಸೆಲ್ ದರ 84.24 ರೂಪಾಯಿ ಆಗಿದೆ.
* ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ (Mysore) ಪೆಟ್ರೋಲ್ ದರ 100.08ರೂ. ಆದರೆ ಡಿಸೆಲ್ ದರ 84.56 ರೂಪಾಯಿ ಆಗಿದೆ. ಪೆಟ್ರೋಲ್ ದರದಲ್ಲಿ 14 ಪೈಸೆ ಹಾಗೂ ಡಿಸೇಲ್ ದರದಲ್ಲಿ 12 ಪೈಸೆ ಕಡಿಮೆಯಾಗಿದೆ
* ಕಲಬುರಗಿಯಲ್ಲಿ (Kalaburagi) ಮಾತ್ರ ಇಂಧನ ದರ ಏರಿಕೆ ಕಂಡಿದೆ. ಇಲ್ಲಿ ಪೆಟ್ರೋಲ್ ದರ 100.58 ರೂಪಾಯಿ ಆಗಿದ್ದರೆ, ಡೀಸೆಲ್ ದರ 85.04 ಆಗಿದೆ. ಪೆಟ್ರೋಲ್ ದರದಲ್ಲಿ 30 ಪೈಸೆ ಹಾಗೂ ಡೀಸೆಲ್ ದರದಲ್ಲಿ 27 ಪೈಸೆ ಏರಿಕೆ ಕಂಡಿದೆ.
ಪೆಟ್ರೋಲ್ ದರ ಪರಿಷ್ಕರಣೆ ಹೇಗೆ?
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರ್ಧರಣೆಯಲ್ಲಿಅನೇಕ ಅಂಶಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಮೊದಲನೆಯದಾಗಿ ಕಚ್ಚಾ ತೈಲದ ಬೆಲೆ, ಎರಡನೆಯದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುತ್ತಿರೋ ತೆರಿಗೆಗಳು. ಇವೆರಡರ ಜೊತೆಗೆ ಡೀಲರ್‌ಗಳ ಕಮೀಷನ್ ಹಾಗೂ ವ್ಯಾಟ್(VAT) ಕೂಡ ಬೆಲೆ ಮೇಲೆ ಪರಿಣಾಮ ಬೀರುತ್ತವೆ. ಪೆಟ್ರೋಲ್ ಹಾಗೂ ಡೀಸೆಲ್ ದುಬಾರಿಯಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸೋ ತೆರಿಗೆಗಳೇ ಕಾರಣ.ಇಂಧನಗಳ ಮೇಲೆ ವಿಧಿಸೋ ತೆರಿಗೆಗಳಿಂದ ಸರ್ಕಾರಕ್ಕೆ ದೊಡ್ಡ ಮೊತ್ತದ ಆದಾಯ ಸೃಷ್ಟಿಯಾಗುತ್ತದೆ. ಇದೇ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿತಗೊಳಿಸಲು ಹಿಂದೇಟು ಹಾಕೋದು.ಅಂತಾರಾಷ್ಟ್ರೀಯ ಕಚ್ಚಾ ತೈಲಗಳ ಮಾರುಕಟ್ಟೆಯಲ್ಲಿ ದರಗಳ ಏರಿಳಿತವಾಗುತ್ತಿರೋ ಕಾರಣ ಪ್ರತಿದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಈ ಹಿಂದೆ ಪೆಟ್ರೋಲ್ ದರವನ್ನು ಪ್ರತಿ 15 ದಿನಗಳಿಗೊಮ್ಮೆ ಬದಲಾಯಿಸಲಾಗುತ್ತಿತ್ತು. ಅಂದ್ರೆ ಪ್ರತಿ ತಿಂಗಳು 1 ಹಾಗೂ 16ನೇ ತಾರೀಖಿನಂದು ದರ ಬದಲಾವಣೆ ಮಾಡಲಾಗುತ್ತಿತ್ತು. ಆದ್ರೆ 2017ರ ಜೂನ್ 16ರಿಂದ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಯಿತು. ಅದರಡಿಯಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ನಿಗದಿಪಡಿಸುತ್ತವೆ.
GST ಇಲ್ಲ
ಪೆಟ್ರೋಲ್ ಹಾಗೂ ಡೀಸೆಲ್ ಸರಕು ಹಾಗೂ ಸೇವಾ ತೆರಿಗೆ (GST) ವ್ಯಾಪ್ತಿಗೆ ಬಾರದಿದ್ರೂ ಕೂಡ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನೇಕ ತೆರಿಗೆಗಳನ್ನು ವಿಧಿಸುತ್ತವೆ. ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಿದಾಗ ಅದರ ಮೇಲಿನ ಸುಂಕವನ್ನು ಸರ್ಕಾರ ಕಡಿತಗೊಳಿಸುತ್ತಿತ್ತು.ಆದ್ರೆ 2014ರಿಂದ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಬಿಟ್ಟಿದೆ.
