Asianet Suvarna News Asianet Suvarna News

Petrol Diesel Rate : ಕಲಬುರಗಿ, ಮೈಸೂರಿನಲ್ಲಿ ಪೆಟ್ರೋಲ್, ಡೀಸೆಲ್ ದರದಲ್ಲಿ ಇಳಿಕೆ

ಕಲಬುರಗಿಯಲ್ಲಿ ಪೆಟ್ರೋಲ್, ಡೀಸೆಲ್ ದರದಲ್ಲಿ ಇಳಿಕೆ
ಪೆಟ್ರೋಲ್ ದರದಲ್ಲಿ 74 ಪೈಸೆ ಹಾಗೂ ಡೀಸೆಲ್ ದರದಲ್ಲಿ 66 ಪೈಸೆ ಇಳಿಕೆ
ರಾಜ್ಯದಲ್ಲಿ ಜನವರಿ 21ರ ಪೆಟ್ರೋಲ್, ಡೀಸೆಲ್ ದರ ಹೀಗಿದೆ

petrol diesel price in bengaluru and major cities of karnataka 21 jaunuary 2022 san
Author
Bengaluru, First Published Jan 21, 2022, 11:41 AM IST

ಬೆಂಗಳೂರು (ಜ. 21): ರಾಜ್ಯದಲ್ಲಿ ಕೋವಿಡ್ ನಿಯಮಾವಳಿಗಳನ್ನು ಸರ್ಕಾರ ಸಡಿಲ ಮಾಡುವ ಸೂಚನೆ ಸಿಕ್ಕಿರುವ ಬೆನ್ನಲ್ಲಿಯೇ ಕೆಲವೊಂದು ಜಿಲ್ಲೆಗಳಲ್ಲಿ ಪೆಟ್ರೋಲ್ ದರದಲ್ಲಿ ಕೊಂಚ ಇಳಿಕೆ ಕಂಡಿರುವುದು ಸಮಾಧಾನ ತಂದಿದೆ. ಅದರಲ್ಲೂ ಉತ್ತರ ಕರ್ನಾಟಕದ ಕಲಬುರಗಿಯಲ್ಲಿ ಪೆಟ್ರೋಲ್ ದರದಲ್ಲಿ 74 ಪೈಸೆ ಹಾಗೂ ಡೀಸೆಲ್ ದರದಲ್ಲಿ 66 ಪೈಸೆ ಇಳಿಕೆಯಾಗಿದೆ. ಇನ್ನು ಹುಬ್ಬಳ್ಳಿಯ ಎರಡೂ ಇಂಧನ ದರಗಳಲ್ಲಿ 1 ಪೈಸೆ ಏರಿಕೆಯಾಗಿದೆ. ದೇಶದಲ್ಲಿ ದೆಹಲಿ ಹಾಗೂ ಜಾರ್ಖಂಡ್ ಹೊರತುಪಡಿಸಿ ದೇಶದ ಬಹುತೇಕ ರಾಜ್ಯಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರಗಳಲ್ಲಿ ಕಳೆದ ಕೆಲವು ತಿಂಗಳುಗಳಿಂದ ದೊಡ್ಡ ಮಟ್ಟದ ಬದಲಾವಣೆ ಆಗಿಲ್ಲ. ಇಂಧನ ದರದಲ್ಲಿ ನಿರಂತರವಾಗಿ ಆಗುತ್ತಿದ್ದ ಏರಿಕೆಯಿಂದಾಗಿ ರೋಸಿಹೋಗಿದ್ದ ಜನತೆಗೆ ದೀಪಾವಳಿಯ ಉಡುಗೊರೆ ಎನ್ನುವ ರೀತಿಯಲ್ಲಿ ಕಳೆದ ವರ್ಷದ ನವೆಂಬರ್ ನಲ್ಲಿ ಕೇಂದ್ರ ಸರ್ಕಾರ ಅಬಕಾರಿ ಸುಂಕವನ್ನು (Excise Duty) ಕಡಿತ ಮಾಡಿತ್ತು.  ಕೋವಿಡ್-19 ಹಾಗೂ ಒಮಿಕ್ರಾನ್ ಆತಂಕದಿಂದಾಗಿ ದೇಶದ ಹಲವು ರಾಜ್ಯಗಳಲ್ಲಿ ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ಜಾರಿ ಮಾಡಿರುವುದು ಇಂಧನದ ಬೇಡಿಕೆಯ ಮೇಲೂ ಪರಿಣಾಮ ಬೀರಿದೆ. ದೊಡ್ಡ ಮಟ್ಟದಲ್ಲಿ ಇಂಧನ ದರದಲ್ಲಿ ಏರಿಕೆಯಾಗಿಲ್ಲ. ಜನವರಿ 21 ರಂದು ರಾಜ್ಯದಲ್ಲಿರುವ ಪೆಟ್ರೋಲ್, ಡೀಸೆಲ್ ದರ
"

ರಾಜ್ಯದ ಪ್ರಮುಖ ನಗರಗಳಲ್ಲಿ ಇಂಧನ ದರ ಎಷ್ಟಿದೆ?
- ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bangalore) ಇಂಧನ ದರದಲ್ಲಿ ಯಥಾಸ್ಥಿತಿ ಉಳಿದುಕೊಂಡಿದೆ. ಪೆಟ್ರೋಲ್ ಲೀಟರ್ ಗೆ 100.58 ರೂಪಾಯಿ ಆಗಿದ್ದರೆ, ಡೀಸೆಲ್ 85.01 ರೂಪಾಯಿ ಆಗಿದೆ.
- ಹುಬ್ಬಳ್ಳಿಯಲ್ಲಿ (Hubli) ಪೆಟ್ರೋಲ್ ಬೆಲೆ 100.31ರೂ. ಹಾಗೂ ಡೀಸೆಲ್ ಬೆಲೆ 84.79 ರೂ.ಇದೆ. ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ತಲಾ 1 ಪೈಸೆ ಏರಿಕೆಯಾಗಿದೆ.
- ಕರಾವಳಿ ಮಂಗಳೂರಿನಲ್ಲಿ(Mangalore) ಪೆಟ್ರೋಲ್ ಬೆಲೆ 99.76 ರೂ. ಹಾಗೂ ಡೀಸೆಲ್ ದರ 84.24ರೂ.ಇದೆ. 
- ಮೈಸೂರಿನಲ್ಲಿ(Mysore) ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಸ್ವಲ್ಪ ಇಳಿಕೆಯಾಗಿದೆ. ಪೆಟ್ರೋಲ್ ದರದಲ್ಲಿ 25 ಪೈಸೆ ಇಳಿಕೆಯಾಗಿದ್ದು 100.08 ರೂಪಾಯಿಗೆ ತಲುಪಿದೆ. ಡೀಸೆಲ್ ದರದಲ್ಲಿ 22 ಪೈಸೆ ಇಳಿಕೆಯಾಗಿದ್ದು ಲೀಟರ್ ಗೆ 84.56 ರೂಪಾಯಿಗೆ ತಲುಪಿದೆ. 
- ಕಲಬುರಗಿಯಲ್ಲಿ(Kalburgi) ಪೆಟ್ರೋಲ್  ದರ ಲೀಟರ್ ಗೆ 100.28ರೂ. ಹಾಗೂ ಡೀಸೆಲ್ ಗೆ 84.77ರೂ. ಇದೆ. ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಸತತ 4ನೇ ದಿನ ಇಳಿಕೆಯಾಗಿದೆ. ಪೆಟ್ರೋಲ್ ದರದಲ್ಲಿ 74 ಪೈಸೆ ಹಾಗೂ ಡೀಸೆಲ್ ದರದಲ್ಲಿ 66 ಪೈಸೆ ಇಳಿಕೆ ಕಂಡಿದೆ.

Anand Mahindra Journey ನಿರ್ದೇಶಕನಾಗಲು ಹೊರಟಿದ್ದ ಆನಂದ್ ಮಹೀಂದ್ರ, ದಶಕದ ಹಿಂದಿನ ಸಿನಿ ಪಯಣ!
ಪೆಟ್ರೋಲ್ ದರ ಪರಿಷ್ಕರಣೆ ಹೇಗೆ?
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರ್ಧರಣೆಯಲ್ಲಿಅನೇಕ ಅಂಶಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಮೊದಲನೆಯದಾಗಿ ಕಚ್ಚಾ ತೈಲದ ಬೆಲೆ, ಎರಡನೆಯದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುತ್ತಿರೋ ತೆರಿಗೆಗಳು. ಇವೆರಡರ ಜೊತೆಗೆ ಡೀಲರ್‌ಗಳ ಕಮೀಷನ್ ಹಾಗೂ ವ್ಯಾಟ್(VAT) ಕೂಡ ಬೆಲೆ ಮೇಲೆ ಪರಿಣಾಮ ಬೀರುತ್ತವೆ. ಪೆಟ್ರೋಲ್‌ ಹಾಗೂ ಡೀಸೆಲ್ ದುಬಾರಿಯಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸೋ ತೆರಿಗೆಗಳೇ ಕಾರಣ.ಇಂಧನಗಳ ಮೇಲೆ ವಿಧಿಸೋ ತೆರಿಗೆಗಳಿಂದ ಸರ್ಕಾರಕ್ಕೆ ದೊಡ್ಡ ಮೊತ್ತದ ಆದಾಯ ಸೃಷ್ಟಿಯಾಗುತ್ತದೆ. ಇದೇ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿತಗೊಳಿಸಲು ಹಿಂದೇಟು ಹಾಕೋದು.ಅಂತಾರಾಷ್ಟ್ರೀಯ ಕಚ್ಚಾ ತೈಲಗಳ ಮಾರುಕಟ್ಟೆಯಲ್ಲಿ ದರಗಳ ಏರಿಳಿತವಾಗುತ್ತಿರೋ ಕಾರಣ ಪ್ರತಿದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಈ ಹಿಂದೆ ಪೆಟ್ರೋಲ್ ದರವನ್ನು ಪ್ರತಿ 15 ದಿನಗಳಿಗೊಮ್ಮೆ ಬದಲಾಯಿಸಲಾಗುತ್ತಿತ್ತು. ಅಂದ್ರೆ ಪ್ರತಿ ತಿಂಗಳು 1 ಹಾಗೂ 16ನೇ ತಾರೀಖಿನಂದು ದರ ಬದಲಾವಣೆ ಮಾಡಲಾಗುತ್ತಿತ್ತು. ಆದ್ರೆ 2017ರ ಜೂನ್ 16ರಿಂದ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಯಿತು. ಅದರಡಿಯಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. 

Vehicle Insurance: ವಾಹನ ಕಳವಾಗಿದ್ರೂ, ಅನ್ಯ ವ್ಯಕ್ತಿ ಚಲಾಯಿಸಿದ್ರೂ ವಿಮಾ ಕಂಪನಿ ಪರಿಹಾರ ನೀಡಬೇಕು: ದೆಹಲಿ ಹೈಕೋರ್ಟ್
GST ಇಲ್ಲ
ಪೆಟ್ರೋಲ್ ಹಾಗೂ ಡೀಸೆಲ್ ಸರಕು ಹಾಗೂ ಸೇವಾ ತೆರಿಗೆ (GST) ವ್ಯಾಪ್ತಿಗೆ ಬಾರದಿದ್ರೂ ಕೂಡ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನೇಕ ತೆರಿಗೆಗಳನ್ನು ವಿಧಿಸುತ್ತವೆ. ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಿದಾಗ ಅದರ ಮೇಲಿನ ಸುಂಕವನ್ನು ಸರ್ಕಾರ ಕಡಿತಗೊಳಿಸುತ್ತಿತ್ತು.ಆದ್ರೆ 2014ರಿಂದ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಬಿಟ್ಟಿದೆ. 

Follow Us:
Download App:
  • android
  • ios