ಪೆಟ್ರೋಲ್ ದರದಲ್ಲಿ ಯಥಾಸ್ಥಿತಿಕಲಬುರಗಿಯಲ್ಲಿ ಪೆಟ್ರೋಲ್ ದರದಲ್ಲಿ ಕೊಂಚ ಏರಿಕೆಫೆ.25 ರಂದು ರಾಜ್ಯಾದ್ಯಂತ ಇರುವ ಇಂಧನ ದರ

ಬೆಂಗಳೂರು (ಫೆ.16): ರಷ್ಯಾ ಹಾಗೂ ಉಕ್ರೇನ್ ನಡುವಿನ ಸಮರ 2ನೇ ದಿನಕ್ಕೆ ಕಾಲಿಟ್ಟಿದೆ. ಇದರ ಬೆನ್ನಲ್ಲಿಯೇ ಕಚ್ಚಾ ತೈಲ ಬೆಲೆಯ ಪ್ರತಿ ಬ್ಯಾರಲ್ ಗೆ ದಾಖಲೆಯ 105 ಡಾಲರ್ ತಲುಪಿದೆ. ಒಂದೇ ದಿನದಲ್ಲಿ ಅಂದಾಜು 7 ಡಾಲರ್ ಏರಿಕೆಯಿಂದಾಗಿ ಇದರ ಪ್ರಭಾವ ದೇಶೀಯ ಮಾರುಕಟ್ಟೆಯ ಮೇಲೂ ಆಗುವ ಸ್ಪಷ್ಟ ಸೂಚನೆ ಸಿಕ್ಕಿದೆ. ಆದರೆ, ಬೆಲೆ ಏರಿಕೆ ಯಾವಾಗ ಆಗಲಿದೆ ಎನ್ನುವ ಮಾಹಿತಿ ಸದ್ಯಕ್ಕಿಲ್ಲ. ಕರೋನಾ ಆತಂಕದಲ್ಲಿ ನಲುಗಿದ್ದ ಜಗತ್ತು ಈಗ ಯುದ್ಧದಿಂದಾಗಿ ಮತ್ತಷ್ಟು ಆತಂಕ್ಕೆ ಈಡಾಗಿದೆ. ಯುದ್ಧಾಂತಕದ ಭೀತಿಯಿಂದಾಗಿ ಕಳೆದ ಕೆಲವು ತಿಂಗಳಿನಿನಿಂದ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯಲ್ಲಿ ವಿಪರೀತವಾಗಿ ಏರಿಕೆಯಾಗಿದೆ. 2014ರ ಬಳಿಕ ಮೊದಲ ಬಾರಿಗೆ ಕಚ್ಚಾತೈಲದ 1 ಬ್ಯಾರಲ್ ಗೆ 100 ಡಾಲರ್ ಗಡಿ ಮುಟ್ಟಿದೆ. ಸರ್ಕಾರ ಹಾಗೂ ತೈಲ ಕಂಪನಿಗಳು ಈ ಹೊರೆಯನ್ನು ಜನತೆಗೆ ನೀಡಿಲ್ಲ. ಆದರೆ, ಈಗಿರುವ ವಿಷಮ ಸ್ಥಿತಿ ಗಮನಿಸಿದರೆ ಮುಂದಿನ ಕೆಲ ದಿನಗಳಲ್ಲೇ ಪೆಟ್ರೋಲ್, ಡೀಸೆಲ್ ದರದಲ್ಲಿ ಏರಿಕೆಯಾಗುವ ಸಂಭವ ಕಾಣಿಸುತ್ತಿದೆ. 

ಇಂಧನ ದರದಲ್ಲಿ ನಿರಂತರವಾಗಿ ಆಗುತ್ತಿದ್ದ ಏರಿಕೆಯಿಂದಾಗಿ ರೋಸಿಹೋಗಿದ್ದ ಜನತೆಗೆ ದೀಪಾವಳಿಯ ಉಡುಗೊರೆ ಎನ್ನುವ ರೀತಿಯಲ್ಲಿ ಕಳೆದ ವರ್ಷದ ನವೆಂಬರ್ ನಲ್ಲಿ ಕೇಂದ್ರ ಸರ್ಕಾರ ಅಬಕಾರಿ ಸುಂಕವನ್ನು (Excise Duty) ಕಡಿತ ಮಾಡಿತ್ತು. ದೇಶದ ಸಾಮಾನ್ಯ ಜನತೆ ಪೆಟ್ರೋಲ್ ಹಾಗೂ ಡೀಸೆಲ್ ದರ ಇನ್ನಷ್ಟು ತಗ್ಗಬೇಕು ಎಂದು ಬಯಸಿದ್ದರೂ, ಯಥಾಸ್ಥಿತಿ ಕಾಯ್ದುಕೊಂಡಿರುವುದರಿಂದ ಅಲ್ಪ ಸಮಾಧಾನ ಕಂಡಿದ್ದಾರೆ.

Add Asianetnews Kannada as a Preferred SourcegooglePreferred

ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು (ಫೆ.25) ಪೆಟ್ರೋಲ್ ಹಾಗೂ ಡೀಸೆಲ್ ದರದ ವಿವರ.

ರಾಜ್ಯದ ಪ್ರಮುಖ ನಗರಗಳಲ್ಲಿ ಇಂಧನ ದರ ಎಷ್ಟಿದೆ?
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bangalore) ಇಂಧನ ದರದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಪೆಟ್ರೋಲ್ ದರ 100.58 ರೂಪಾಯಿ ಆಗಿದೆ. ಡೀಸೆಲ್ ದರದಲ್ಲೂ ಯಾವುದೇ ಬದಲಾವಣೆ ಇಲ್ಲದೆ 85.01 ರೂಪಾಯಿ ಆಗಿದೆ.

*ಹುಬ್ಬಳ್ಳಿಯಲ್ಲಿ (Hubli) ಪೆಟ್ರೋಲ್ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ. ಒಂದು ಲೀಟರ್ ಪೆಟ್ರೋಲ್ ಬೆಲೆ 100.30 ರೂಪಾಯಿ ಆಗಿದ್ದರೆ, ಡೀಸೆಲ್ ದರದಲ್ಲೂ ಬದಲಾವಣೆ ಆಗದೇ 84.78 ರೂಪಾಯಿ ಉಳಿದುಕೊಂಡಿದೆ.

*ಕರಾವಳಿ ಮಂಗಳೂರಿನಲ್ಲಿ(Mangalore) ಪೆಟ್ರೋಲ್ ಬೆಲೆ 99.76 ರೂ. ಹಾಗೂ ಡೀಸೆಲ್ ದರ 84.24ರೂ.ಇದೆ. 

*ಮೈಸೂರಿನಲ್ಲಿ(Mysore) ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ತಲಾ 6 ಪೈಸೆ ಏರಿಕೆಯಾಗಿದೆ. ಮೈಸೂರಿನಲ್ಲಿ ಇಂದಿನ ಪೆಟ್ರೋಲ್ ದರ 100.38 ರೂಪಾಯಿ ಆಗಿದ್ದರೆ, ಡೀಸೆಲ್ ದರ 84.83 ರೂಪಾಯಿ ಆಗಿದೆ.

*ಕಲಬುರಗಿಯಲ್ಲಿ(Kalburgi) ಪೆಟ್ರೋಲ್ ದರದ ಮೇಲೆ 16 ಪೈಸೆ ಏರಿಕೆಯಾಗಿದ್ದರೆ, ಡೀಸೆಲ್ ದರದಲ್ಲಿ 15 ಪೈಸೆ ಏರಿಕೆ ಕಂಡಿದೆ. ಪೆಟ್ರೋಲ್ ದರ ಲೀಟರ್ ಗೆ 101.05ರೂ. ಹಾಗೂ ಡೀಸೆಲ್ ಗೆ 85.46 ರೂಪಾಯಿ ಆಗಿದೆ. 

Russia Ukraine Crisis: ಯುದ್ಧದಿಂದ ಗ್ಲೋಬಲ್‌ ಎಕಾನಾಮಿ ತಲ್ಲಣ: ಭಾರತದ ಆರ್ಥಿಕತೆಗೂ ಭಾರೀ ಹೊಡೆತ!
ಪೆಟ್ರೋಲ್ ದರ ಪರಿಷ್ಕರಣೆ ಹೇಗೆ?
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರ್ಧರಣೆಯಲ್ಲಿಅನೇಕ ಅಂಶಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಮೊದಲನೆಯದಾಗಿ ಕಚ್ಚಾ ತೈಲದ ಬೆಲೆ, ಎರಡನೆಯದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುತ್ತಿರೋ ತೆರಿಗೆಗಳು. ಇವೆರಡರ ಜೊತೆಗೆ ಡೀಲರ್‌ಗಳ ಕಮೀಷನ್ ಹಾಗೂ ವ್ಯಾಟ್(VAT) ಕೂಡ ಬೆಲೆ ಮೇಲೆ ಪರಿಣಾಮ ಬೀರುತ್ತವೆ. ಪೆಟ್ರೋಲ್‌ ಹಾಗೂ ಡೀಸೆಲ್ ದುಬಾರಿಯಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸೋ ತೆರಿಗೆಗಳೇ ಕಾರಣ.ಇಂಧನಗಳ ಮೇಲೆ ವಿಧಿಸೋ ತೆರಿಗೆಗಳಿಂದ ಸರ್ಕಾರಕ್ಕೆ ದೊಡ್ಡ ಮೊತ್ತದ ಆದಾಯ ಸೃಷ್ಟಿಯಾಗುತ್ತದೆ. ಇದೇ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿತಗೊಳಿಸಲು ಹಿಂದೇಟು ಹಾಕೋದು.ಅಂತಾರಾಷ್ಟ್ರೀಯ ಕಚ್ಚಾ ತೈಲಗಳ ಮಾರುಕಟ್ಟೆಯಲ್ಲಿ ದರಗಳ ಏರಿಳಿತವಾಗುತ್ತಿರೋ ಕಾರಣ ಪ್ರತಿದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಈ ಹಿಂದೆ ಪೆಟ್ರೋಲ್ ದರವನ್ನು ಪ್ರತಿ 15 ದಿನಗಳಿಗೊಮ್ಮೆ ಬದಲಾಯಿಸಲಾಗುತ್ತಿತ್ತು. ಅಂದ್ರೆ ಪ್ರತಿ ತಿಂಗಳು 1 ಹಾಗೂ 16ನೇ ತಾರೀಖಿನಂದು ದರ ಬದಲಾವಣೆ ಮಾಡಲಾಗುತ್ತಿತ್ತು. ಆದ್ರೆ 2017ರ ಜೂನ್ 16ರಿಂದ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಯಿತು. ಅದರಡಿಯಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. 

Russia Ukraine Crisis: ಷೇರು ಮಾರುಕಟ್ಟೆ ಮೇಲೆ ಸಂಘರ್ಷದ ಕರಿನೆರಳು; 2,702 ಪಾಯಿಂಟ್ಸ್ ಭಾರೀ ಕುಸಿತ ದಾಖಲಿಸಿದ ಸೆನ್ಸೆಕ್ಸ್
GST ಇಲ್ಲ
ಪೆಟ್ರೋಲ್ ಹಾಗೂ ಡೀಸೆಲ್ ಸರಕು ಹಾಗೂ ಸೇವಾ ತೆರಿಗೆ (GST) ವ್ಯಾಪ್ತಿಗೆ ಬಾರದಿದ್ರೂ ಕೂಡ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನೇಕ ತೆರಿಗೆಗಳನ್ನು ವಿಧಿಸುತ್ತವೆ. ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಿದಾಗ ಅದರ ಮೇಲಿನ ಸುಂಕವನ್ನು ಸರ್ಕಾರ ಕಡಿತಗೊಳಿಸುತ್ತಿತ್ತು.ಆದ್ರೆ 2014ರಿಂದ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಬಿಟ್ಟಿದೆ.