Asianet Suvarna News Asianet Suvarna News

Petrol Rate: ಪೆಟ್ರೋಲ್,ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ

ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಇಂದು ( (ಡಿ.1) ಯಾವುದೇ ಬದಲಾವಣೆಯಾಗಿಲ್ಲ.ಕಳೆದ 27 ದಿನಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸ್ಥಿರತೆ ಕಾಯ್ದುಕೊಂಡಿದೆ. ಓಮಿಕ್ರಾನ್ ವೈರಸ್ ಹಾವಳಿ ಹೆಚ್ಚಿರೋ ಹಿನ್ನೆಲೆಯಲ್ಲಿ ಇಂಧನ ದರದಲ್ಲಿ ಇಳಿಕೆಯಾಗೋ ನಿರೀಕ್ಷೆಯಿದೆ.

Petrol Diesel price remains Constant Dec 1 2021 anu
Author
Bangalore, First Published Dec 1, 2021, 10:18 AM IST

ಬೆಂಗಳೂರು (ಡಿ.1): ಪೆಟ್ರೋಲ್ (Petrol) ಹಾಗೂ ಡೀಸೆಲ್ (Diesel)  ಬೆಲೆಯಲ್ಲಿ ಇಂದು (ಡಿ.1) ಕೂಡ ಯಾವುದೇ ಬದಲಾವಣೆಯಾಗಿಲ್ಲ. ಸತತ 27 ದಿನಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸ್ಥಿರತೆ ಕಾಯ್ದುಕೊಂಡಿದೆ. ಇಂದು (ಡಿ.1) ಇಂಧನ ದರದಲ್ಲಿ ಬದಲಾವಣೆಯಾಗಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ,ಯಾವುದೇ ಬದಲಾವಣೆ ಕಂಡುಬಂದಿಲ್ಲ.   ಕೊರೋನಾ(Coronavirus) ಹೊಸ ರೂಪಾಂತರಿ ಓಮಿಕ್ರಾನ್ (Omicron) ವೈರಸ್ (Virus) ಭೀತಿ ಹಿನ್ನೆಲೆಯಲ್ಲಿ ವಿಶ್ವಾದ್ಯಂತ ಅನೇಕ ರಾಷ್ಟ್ರಗಳು ನಿರ್ಬಂಧ ಹೆಚ್ಚಿಸುತ್ತಿರೋ ಕಾರಣ ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಇಳಿಕೆಯಾಗೋ ನಿರೀಕ್ಷೆಯನ್ನು ತಜ್ಞರು ವ್ಯಕ್ತಪಡಿಸುತ್ತಿದ್ದಾರೆ. ಕಳೆದ ತಿಂಗಳು ಗಣನೀಯ ಏರಿಕೆ ಕಂಡಿದ್ದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಕಳೆದ ಕೆಲವು ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿರೋದು ಜನಸಾಮಾನ್ಯರಿಗೆ ಸ್ವಲ್ಪ ಮಟ್ಟಿಗೆ ನೆಮ್ಮದಿ ನೀಡಿದೆ. ಹಾಗಾದ್ರೆ ರಾಜ್ಯದ ಪ್ರಮುಖ ನಗರಗಳಲ್ಲಿ(Cities) ಇಂದು (ಡಿ.1) ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? ಇಲ್ಲಿದೆ ಮಾಹಿತಿ.

ರಾಜ್ಯದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಬೆಲೆ ಎಷ್ಟಿದೆ?
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ(Bangalore) ಇಂದು ಪೆಟ್ರೋಲ್ ದರ ಲೀಟರ್ ಗೆ 100.58ರೂ. ಹಾಗೂ ಡೀಸೆಲ್  ದರ 85.01 ರೂ.ಇದೆ. ಕಳೆದ 8 ದಿನಗಳಿಂದ ಇದೇ ದರವಿದ್ದು, ಯಾವುದೇ ಬದಲಾವಣೆಯಾಗಿಲ್ಲ. ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ (Hubli) ಪೆಟ್ರೋಲ್ ಬೆಲೆ 100.62ರೂ. ಹಾಗೂ ಡೀಸೆಲ್ ಬೆಲೆ 85.07 ರೂ.ಇದೆ. ಪೆಟ್ರೋಲ್ ದರದಲ್ಲಿ ನಿನ್ನೆಗಿಂತ 0.31 ರೂ. ಏರಿಕೆಯಾಗಿದ್ರೆ, ಡೀಸೆಲ್ ಬೆಲೆಯಲ್ಲಿ 0.28 ರೂ. ಹೆಚ್ಚಳ ಕಂಡುಬಂದಿದೆ. ಮಂಗಳೂರಿನಲ್ಲಿ (Mangalore) ಪೆಟ್ರೋಲ್ ಬೆಲೆ 99.76 ರೂ. ಹಾಗೂ ಡೀಸೆಲ್ ದರ 84.24ರೂ.ಇದ್ದರೆ, ಸಾಂಸ್ಕ್ರತಿಕ ನಗರಿ ಮೈಸೂರಿನಲ್ಲಿ (Mysore) ಪೆಟ್ರೋಲ್ ಗೆ 100.51 ರೂ. ಹಾಗೂ ಡೀಸೆಲ್ ಗೆ 84.77ರೂ. ಇದೆ.  ಪೆಟ್ರೋಲ್ ದರದಲ್ಲಿ ನಿನ್ನೆಗಿಂತ 0.27ರೂ. ಹಾಗೂ ಡೀಸೆಲ್ ಬೆಲೆಯಲ್ಲಿ 0.68ರೂ. ಏರಿಕೆಯಾಗಿದೆ. ಬಿಸಿಲ ನಗರಿ ಕಲಬುರಗಿಯಲ್ಲಿ (Kalburgi) ಪೆಟ್ರೋಲ್ ಗೆ 100.93 ರೂ. ಹಾಗೂ ಡೀಸೆಲ್ ಗೆ 85.35ರೂ.ಇದೆ. ಪೆಟ್ರೋಲ್ ದರದಲ್ಲಿ ನಿನ್ನೆಗಿಂತ 0.67ರೂ. ಹಾಗೂ ಡೀಸೆಲ್ ಬೆಲೆಯಲ್ಲಿ 0.68ರೂ. ಏರಿಕೆಯಾಗಿದೆ.

ಪೆಟ್ರೋಲ್‌, ಡೀಸೆಲ್‌ ಸುಂಕದಿಂದ ಕೇಂದ್ರ ಸರ್ಕಾರಕ್ಕೆ ಡಬಲ್‌ ಆದಾಯ!

ಪೆಟ್ರೋಲ್ ದರ ಪರಿಷ್ಕರಣೆ ಹೇಗೆ?
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರ್ಧರಣೆಯಲ್ಲಿಅನೇಕ ಅಂಶಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಮೊದಲನೆಯದಾಗಿ ಕಚ್ಚಾ ತೈಲದ ಬೆಲೆ, ಎರಡನೆಯದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುತ್ತಿರೋ ತೆರಿಗೆಗಳು. ಇವೆರಡರ ಜೊತೆಗೆ ಡೀಲರ್‌ಗಳ ಕಮೀಷನ್ ಹಾಗೂ ವ್ಯಾಟ್(VAT) ಕೂಡ ಬೆಲೆ ಮೇಲೆ ಪರಿಣಾಮ ಬೀರುತ್ತವೆ. ಪೆಟ್ರೋಲ್‌ ಹಾಗೂ ಡೀಸೆಲ್ ದುಬಾರಿಯಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸೋ ತೆರಿಗೆಗಳೇ ಕಾರಣ.ಇಂಧನಗಳ ಮೇಲೆ ವಿಧಿಸೋ ತೆರಿಗೆಗಳಿಂದ ಸರ್ಕಾರಕ್ಕೆ ದೊಡ್ಡ ಮೊತ್ತದ ಆದಾಯ ಸೃಷ್ಟಿಯಾಗುತ್ತದೆ. ಇದೇ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿತಗೊಳಿಸಲು ಹಿಂದೇಟು ಹಾಕೋದು.ಅಂತಾರಾಷ್ಟ್ರೀಯ ಕಚ್ಚಾ ತೈಲಗಳ ಮಾರುಕಟ್ಟೆಯಲ್ಲಿ ದರಗಳ ಏರಿಳಿತವಾಗುತ್ತಿರೋ ಕಾರಣ ಪ್ರತಿದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಈ ಹಿಂದೆ ಪೆಟ್ರೋಲ್ ದರವನ್ನು ಪ್ರತಿ 15 ದಿನಗಳಿಗೊಮ್ಮೆ ಬದಲಾಯಿಸಲಾಗುತ್ತಿತ್ತು. ಅಂದ್ರೆ ಪ್ರತಿ ತಿಂಗಳು 1 ಹಾಗೂ 16ನೇ ತಾರೀಖಿನಂದು ದರ ಬದಲಾವಣೆ ಮಾಡಲಾಗುತ್ತಿತ್ತು. ಆದ್ರೆ 2017ರ ಜೂನ್ 16ರಿಂದ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಯಿತು. ಅದರಡಿಯಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. 

ಭಾರತದ್ದು ಈಗ ವಿಶ್ವದಲ್ಲೇ ವೇಗದ ಜಿಡಿಪಿ!

GST ಇಲ್ಲ
ಪೆಟ್ರೋಲ್ ಹಾಗೂ ಡೀಸೆಲ್ ಸರಕು ಹಾಗೂ ಸೇವಾ ತೆರಿಗೆ (GST) ವ್ಯಾಪ್ತಿಗೆ ಬಾರದಿದ್ರೂ ಕೂಡ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನೇಕ ತೆರಿಗೆಗಳನ್ನು ವಿಧಿಸುತ್ತವೆ. ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಿದಾಗ ಅದರ ಮೇಲಿನ ಸುಂಕವನ್ನು ಸರ್ಕಾರ ಕಡಿತಗೊಳಿಸುತ್ತಿತ್ತು.ಆದ್ರೆ 2014ರಿಂದ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಬಿಟ್ಟಿದೆ. 

"

Follow Us:
Download App:
  • android
  • ios