Petrol Diesel Rate: ವಾರದ ಮೊದಲ ದಿನ ಇಂಧನ ದರ ಚೆಕ್ ಮಾಡಿದ್ದೀರಾ? ರಾಜ್ಯದಲ್ಲಿ ಇಂದು ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?

ದಿನಬಳಕೆ ವಸ್ತುಗಳ ಬೆಲೆಯೇರಿಕೆಯಿಂದ ತತ್ತರಿಸಿರೋ ಜನಸಾಮಾನ್ಯರಿಗೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಕಳೆದ ಕೆಲವು ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿರೋದು ಸ್ವಲ್ಪ ನಿರಾಳತೆ ಒದಗಿಸಿದೆ. 

Petrol Diesel price remains constant in Karnataka check todays fuel rate Dec 27 2021 anu

ಬೆಂಗಳೂರು (ಡಿ.27):  ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ(Crude oil) ನಿರಂತರ ಏರಿಳಿತ ಕಂಡುಬರುತ್ತಿದ್ದರೂ ದೇಶದಲ್ಲಿ ಮಾತ್ರ ಇಂಧನ ದರ ಒಂದೂವರೆ ತಿಂಗಳಿಗೂ ಅಧಿಕ ಸಮಯದಿಂದ ಸ್ಥಿರತೆ ಕಾಯ್ದುಕೊಂಡಿದೆ.  ದೇಶದಲ್ಲಿ ಒಮಿಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರೋ ಹಿನ್ನೆಲೆಯಲ್ಲಿ ಪೆಟ್ರೋಲ್ (Petrol)ಹಾಗೂ ಡೀಸೆಲ್  (Diesel)ದರದಲ್ಲಿ ಏರಿಳಿತ ಕಂಡುಬರಬಹುದು ಎಂದು ನಿರೀಕ್ಷಿಸಲಾಗಿತ್ತು. ಆದ್ರೆ ಈ ತನಕ ಅಂಥ ಯಾವುದೇ ಬದಲಾವಣೆಗಳು ಆಗಿಲ್ಲ. ಅಕ್ಟೋಬರ್ ತಿಂಗಳಲ್ಲಿ ನಿರಂತರ ಏರಿಕೆ ದಾಖಲಿಸಿದ ಪೆಟ್ರೋಲ್ ಬೆಲೆ ಶತಕದ ಗಡಿ ದಾಟೋ ಮೂಲಕ ವಾಹನ ಸವಾರರಿಗೆ ತಲೆನೋವು ತರಿಸಿತ್ತು. ಆದ್ರೆ ನವೆಂಬರ್ 4ರಂದು ಕೇಂದ್ರ ಸರ್ಕಾರ ಇಂಧನದ ಮೇಲಿನ ಅಬಕಾರಿ ಸುಂಕ(excise duty)ಕಡಿತಗೊಳಿಸೋ ಮೂಲಕ ಬೆಲೆಯಲ್ಲಿ ಇಳಿಕೆ ಮಾಡಿತ್ತು. ಈ ನಂತರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಸ್ಥಿರತೆ ಕಂಡುಬಂದಿದೆ.  ಇಂದು (ಡಿ.27) ರಾಜ್ಯದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. 

ರಾಜ್ಯದ ಪ್ರಮುಖ ನಗರಗಳಲ್ಲಿಇಂಧನ ದರ
ಬೆಂಗಳೂರಿನಲ್ಲಿ( Bengaluru)ಇಂದು ಪೆಟ್ರೋಲ್ ದರ ಲೀಟರ್ ಗೆ 100.58ರೂ. ಇದ್ದು, ಯಾವುದೇ ಬದಲಾವಣೆ ಕಂಡುಬಂದಿಲ್ಲ. ಡೀಸೆಲ್ ದರ ಲೀಟರ್ ಗೆ 85.01ರೂ ಇದೆ. ಹುಬ್ಬಳ್ಳಿಯಲ್ಲಿ (Hubli)ಪೆಟ್ರೋಲ್ ಬೆಲೆ ಇಂದು 100.55ರೂ. ಇದೆ. ನಿನ್ನೆ ಪೆಟ್ರೋಲ್ ಬೆಲೆ 100.46ರೂ. ಇದೆ. ಅಂದ್ರೆ ನಿನ್ನೆಗಿಂತ ಇಂದು 0.09ರೂ. ಏರಿಕೆಯಾಗಿದೆ.  ಡೀಸೆಲ್ ಬೆಲೆ ಇಂದು  85.01ರೂ. ಇದೆ. ನಿನ್ನೆ 84.93ರೂ. ಇತ್ತು. ಮಂಗಳೂರಿನಲ್ಲಿ (Mangalore) ಪೆಟ್ರೋಲ್ ಬೆಲೆ 99.76 ರೂ. ಹಾಗೂ ಡೀಸೆಲ್ ದರ 84.24ರೂ.ಇದೆ.  ಮೈಸೂರಿನಲ್ಲಿ (Mysore)ಪೆಟ್ರೋಲ್ ದರ ಲೀಟರ್ ಗೆ 100.38ರೂ. ಇದೆ. ನಿನ್ನೆ ಪೆಟ್ರೋಲ್ ದರ 100.33ರೂ. ಇದ್ದು, ೦.51ರೂ. ಏರಿಕೆಯಾಗಿದೆ.  ಇನ್ನು ಡೀಸೆಲ್ ದರ ಇಂದು ಲೀಟರ್ ಗೆ  84.83ರೂ. ಇದೆ. ನಿನ್ನೆ 84.78ರೂ. ಇದ್ದು, 0.05ರೂ. ಏರಿಕೆಯಾಗಿದೆ. ಕಲಬುರಗಿಯಲ್ಲಿ(Kalburgi)ನಿನ್ನೆ ಪೆಟ್ರೋಲ್  ಬೆಲೆ ಲೀಟರ್ ಗೆ 100.73ರೂ. ಇತ್ತು. ಇಂದು 0.20ರೂ. ಏರಿಕೆಯಾಗಿ 100.93ರೂ. ಇದೆ. ಡೀಸೆಲ್ ಲೀಟರ್ ಗೆ ನಿನ್ನೆ 85.17ರೂ. ಇತ್ತು. ಇಂದು 85.35ರೂ. ಇದೆ. ಅಂದ್ರೆ 0.18ರೂ. ಏರಿಕೆಯಾಗಿದೆ.  

RBI action against RBL Bank : ಮುಂಬೈ ಮೂಲದ ಬ್ಯಾಂಕ್ ವಿರುದ್ಧ ಆರ್ ಬಿಐ ಹಠಾತ್ ಕ್ರಮ, ಕಾರಣವೇನು?

ಪೆಟ್ರೋಲ್ ದರ ಪರಿಷ್ಕರಣೆ ಹೇಗೆ? 
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರ್ಧರಣೆಯಲ್ಲಿಅನೇಕ ಅಂಶಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಮೊದಲನೆಯದಾಗಿ ಕಚ್ಚಾ ತೈಲದ ಬೆಲೆ, ಎರಡನೆಯದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುತ್ತಿರೋ ತೆರಿಗೆಗಳು. ಇವೆರಡರ ಜೊತೆಗೆ ಡೀಲರ್‌ಗಳ ಕಮೀಷನ್ ಹಾಗೂ ವ್ಯಾಟ್(VAT) ಕೂಡ ಬೆಲೆ ಮೇಲೆ ಪರಿಣಾಮ ಬೀರುತ್ತವೆ. ಪೆಟ್ರೋಲ್‌ ಹಾಗೂ ಡೀಸೆಲ್ ದುಬಾರಿಯಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸೋ ತೆರಿಗೆಗಳೇ ಕಾರಣ.ಇಂಧನಗಳ ಮೇಲೆ ವಿಧಿಸೋ ತೆರಿಗೆಗಳಿಂದ ಸರ್ಕಾರಕ್ಕೆ ದೊಡ್ಡ ಮೊತ್ತದ ಆದಾಯ ಸೃಷ್ಟಿಯಾಗುತ್ತದೆ. ಇದೇ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿತಗೊಳಿಸಲು ಹಿಂದೇಟು ಹಾಕೋದು.ಅಂತಾರಾಷ್ಟ್ರೀಯ ಕಚ್ಚಾ ತೈಲಗಳ ಮಾರುಕಟ್ಟೆಯಲ್ಲಿ ದರಗಳ ಏರಿಳಿತವಾಗುತ್ತಿರೋ ಕಾರಣ ಪ್ರತಿದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಈ ಹಿಂದೆ ಪೆಟ್ರೋಲ್ ದರವನ್ನು ಪ್ರತಿ 15 ದಿನಗಳಿಗೊಮ್ಮೆ ಬದಲಾಯಿಸಲಾಗುತ್ತಿತ್ತು. ಅಂದ್ರೆ ಪ್ರತಿ ತಿಂಗಳು 1 ಹಾಗೂ 16ನೇ ತಾರೀಖಿನಂದು ದರ ಬದಲಾವಣೆ ಮಾಡಲಾಗುತ್ತಿತ್ತು. ಆದ್ರೆ 2017ರ ಜೂನ್ 16ರಿಂದ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಯಿತು. ಅದರಡಿಯಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. 

Switch To Electric Vehicles : ಓಲಾ, ಉಬರ್, ಜೊಮೊಟೊಗೆ ದೆಹಲಿ ಸರ್ಕಾರ ನೀಡಲಿದೆ ಖಡಕ್ ಸೂಚನೆ!

GST ಇಲ್ಲ
ಪೆಟ್ರೋಲ್ ಹಾಗೂ ಡೀಸೆಲ್ ಸರಕು ಹಾಗೂ ಸೇವಾ ತೆರಿಗೆ (GST) ವ್ಯಾಪ್ತಿಗೆ ಬಾರದಿದ್ರೂ ಕೂಡ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನೇಕ ತೆರಿಗೆಗಳನ್ನು ವಿಧಿಸುತ್ತವೆ. ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಿದಾಗ ಅದರ ಮೇಲಿನ ಸುಂಕವನ್ನು ಸರ್ಕಾರ ಕಡಿತಗೊಳಿಸುತ್ತಿತ್ತು.ಆದ್ರೆ 2014ರಿಂದ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಬಿಟ್ಟಿದೆ. 

"


 

Latest Videos
Follow Us:
Download App:
  • android
  • ios