ದೆಹಲಿ ಹೊರತುಪಡಿಸಿ ದೇಶದ ಪ್ರಮುಖ ನಗರಗಳಲ್ಲಿ ಸುಮಾರು ಎರಡು ತಿಂಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದೆ. ನವೆಂಬರ್ 4ರಂದು ಕೇಂದ್ರ ಸರ್ಕಾರ ಇಂಧನದ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಬಳಿಕ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. 

ಬೆಂಗಳೂರು (ಡಿ.29): ದೇಶದಲ್ಲಿ ಸುಮಾರು ಎರಡು ತಿಂಗಳಿಂದ ಇಂಧನ(Fuel)ದರ ಸ್ಥಿರವಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ (Crude oil)ಬೆಲೆಯಲ್ಲಿ ಏರಿಕೆ ಕಂಡುಬರುತ್ತಿದ್ದರೂ ದೇಶದಲ್ಲಿ ಮಾತ್ರ ತೈಲ ಕಂಪನಿಗಳು ಬೆಲೆಯೇರಿಕೆ ಮಾಡಿಲ್ಲ. ಕೇಂದ್ರ ಸರ್ಕಾರ ನವೆಂಬರ್ 4ರಂದು ಇಂಧನ ಮೇಲಿನ ಅಬಕಾರಿ ಸುಂಕ(excise duty)ಕಡಿತಗೊಳಿಸೋ ಮೂಲಕ ಬೆಲೆಯಲ್ಲಿ ಇಳಿಕೆ ಮಾಡಿತ್ತು. ಇದಕ್ಕೂ ಮುನ್ನ ದೇಶದಲ್ಲಿ ಪೆಟ್ರೋಲ್ ಬೆಲೆ ನಿರಂತರ ಏರಿಕೆ ಕಂಡು ಶತಕದ ಗಡಿದಾಟಿ ವಾಹನ ಸವಾರರಿಗೆ ಶಾಕ್ ನೀಡಿತ್ತು. ನಂತರದ ದಿನಗಳಲ್ಲಿ ದೆಹಲಿ(Delhi) ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ವ್ಯಾಟ್ (VAT) ಕಡಿತಗೊಳಿಸೋ ಮೂಲಕ ಬೆಲೆಯಲ್ಲಿ ಇನ್ನಷ್ಟು ಇಳಿಕೆ ಮಾಡಿತ್ತು. ಆದ್ರೆ ದೇಶದ ಉಳಿದ ರಾಜ್ಯಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ. ರಾಜ್ಯದಲ್ಲಿ ಇಂದಿನ (ಡಿ.29) ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೀಗಿದೆ.

Add Asianetnews Kannada as a Preferred SourcegooglePreferred

ರಾಜ್ಯದ ಪ್ರಮುಖ ನಗರಗಳಲ್ಲಿಇಂಧನ ದರ
ಬೆಂಗಳೂರಿನಲ್ಲಿ( Bengaluru)ಇಂದು ಪೆಟ್ರೋಲ್ ದರ ಲೀಟರ್ ಗೆ 100.58ರೂ. ಇದ್ದು, ಯಾವುದೇ ಬದಲಾವಣೆ ಕಂಡುಬಂದಿಲ್ಲ. ಡೀಸೆಲ್ ದರ ಲೀಟರ್ ಗೆ 85.01ರೂ ಇದೆ. ಹುಬ್ಬಳ್ಳಿಯಲ್ಲಿ (Hubli)ಪೆಟ್ರೋಲ್ ಬೆಲೆ ಇಂದು 100.31ರೂ. ಇದೆ. ನಿನ್ನೆ ಪೆಟ್ರೋಲ್ ಬೆಲೆ 100.30ರೂ. ಇತ್ತು. ಡೀಸೆಲ್ ಬೆಲೆ ಇಂದು 84.79ರೂ. ಇದೆ. ನಿನ್ನೆ 84.78ರೂ. ಇತ್ತು. ಮಂಗಳೂರಿನಲ್ಲಿ (Mangalore) ಪೆಟ್ರೋಲ್ ಬೆಲೆ 99.76 ರೂ. ಹಾಗೂ ಡೀಸೆಲ್ ದರ 84.24ರೂ.ಇದೆ. ಮೈಸೂರಿನಲ್ಲಿ (Mysore)ಪೆಟ್ರೋಲ್ ದರ ಲೀಟರ್ ಗೆ 100.08ರೂ. ಇದೆ. ನಿನ್ನೆ ಪೆಟ್ರೋಲ್ ದರ 100.32ರೂ. ಇತ್ತು. ಇನ್ನು ಡೀಸೆಲ್ ದರ ಇಂದು ಲೀಟರ್ ಗೆ 84.56ರೂ. ಇದೆ. ನಿನ್ನೆ 84.77ರೂ. ಇದೆ. ಕಲಬುರಗಿಯಲ್ಲಿ(Kalburgi)ನಿನ್ನೆ ಪೆಟ್ರೋಲ್ ಬೆಲೆ ಲೀಟರ್ ಗೆ 101.05ರೂ. ಇತ್ತು. ಇಂದು 100.73ರೂ. ಇದೆ. ಡೀಸೆಲ್ ಲೀಟರ್ ಗೆ ನಿನ್ನೆ 85.46ರೂ. ಇತ್ತು. ಇಂದು 85.17ರೂ. ಇದೆ.

Crypto Users in India: ಕ್ರಿಪ್ಟೋಕರೆನ್ಸಿ ವ್ಯವಹಾರದಲ್ಲಿ 28 ವರ್ಷಕ್ಕಿಂತ ಚಿಕ್ಕವರೇ ಜಾಸ್ತಿ!

ಪೆಟ್ರೋಲ್ ದರ ಪರಿಷ್ಕರಣೆ ಹೇಗೆ? 
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರ್ಧರಣೆಯಲ್ಲಿಅನೇಕ ಅಂಶಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಮೊದಲನೆಯದಾಗಿ ಕಚ್ಚಾ ತೈಲದ ಬೆಲೆ, ಎರಡನೆಯದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುತ್ತಿರೋ ತೆರಿಗೆಗಳು. ಇವೆರಡರ ಜೊತೆಗೆ ಡೀಲರ್‌ಗಳ ಕಮೀಷನ್ ಹಾಗೂ ವ್ಯಾಟ್(VAT) ಕೂಡ ಬೆಲೆ ಮೇಲೆ ಪರಿಣಾಮ ಬೀರುತ್ತವೆ. ಪೆಟ್ರೋಲ್‌ ಹಾಗೂ ಡೀಸೆಲ್ ದುಬಾರಿಯಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸೋ ತೆರಿಗೆಗಳೇ ಕಾರಣ.ಇಂಧನಗಳ ಮೇಲೆ ವಿಧಿಸೋ ತೆರಿಗೆಗಳಿಂದ ಸರ್ಕಾರಕ್ಕೆ ದೊಡ್ಡ ಮೊತ್ತದ ಆದಾಯ ಸೃಷ್ಟಿಯಾಗುತ್ತದೆ. ಇದೇ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿತಗೊಳಿಸಲು ಹಿಂದೇಟು ಹಾಕೋದು.ಅಂತಾರಾಷ್ಟ್ರೀಯ ಕಚ್ಚಾ ತೈಲಗಳ ಮಾರುಕಟ್ಟೆಯಲ್ಲಿ ದರಗಳ ಏರಿಳಿತವಾಗುತ್ತಿರೋ ಕಾರಣ ಪ್ರತಿದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಈ ಹಿಂದೆ ಪೆಟ್ರೋಲ್ ದರವನ್ನು ಪ್ರತಿ 15 ದಿನಗಳಿಗೊಮ್ಮೆ ಬದಲಾಯಿಸಲಾಗುತ್ತಿತ್ತು. ಅಂದ್ರೆ ಪ್ರತಿ ತಿಂಗಳು 1 ಹಾಗೂ 16ನೇ ತಾರೀಖಿನಂದು ದರ ಬದಲಾವಣೆ ಮಾಡಲಾಗುತ್ತಿತ್ತು. ಆದ್ರೆ 2017ರ ಜೂನ್ 16ರಿಂದ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಯಿತು. ಅದರಡಿಯಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. 

Income Tax Return: ಇ-ಫೈಲಿಂಗ್ ಫೋರ್ಟಲ್ ತಾಂತ್ರಿಕ ಸಮಸ್ಯೆಗಳ ವಿರುದ್ಧ ತೆರಿಗೆದಾರರ ದೂರು; ಗಡುವು ವಿಸ್ತರಣೆಗೆ ಒತ್ತಾಯ

GST ಇಲ್ಲ
ಪೆಟ್ರೋಲ್ ಹಾಗೂ ಡೀಸೆಲ್ ಸರಕು ಹಾಗೂ ಸೇವಾ ತೆರಿಗೆ (GST) ವ್ಯಾಪ್ತಿಗೆ ಬಾರದಿದ್ರೂ ಕೂಡ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನೇಕ ತೆರಿಗೆಗಳನ್ನು ವಿಧಿಸುತ್ತವೆ. ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಿದಾಗ ಅದರ ಮೇಲಿನ ಸುಂಕವನ್ನು ಸರ್ಕಾರ ಕಡಿತಗೊಳಿಸುತ್ತಿತ್ತು.ಆದ್ರೆ 2014ರಿಂದ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಬಿಟ್ಟಿದೆ. 

"