ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂದು ಕಚ್ಚಾ ತೈಲ ಬೆಲೆಯಲ್ಲಿ ಇಳಿಕೆಯಾಗಿದೆ. ಆದ್ರೆ ರಾಜ್ಯದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಯಥಾಸ್ಥಿತಿ ಕಾಯ್ದುಕೊಂಡಿದೆ.  

ಬೆಂಗಳೂರು (ಡಿ.21): ಪೆಟ್ರೋಲ್ (Petrol) ಹಾಗೂ ಡೀಸೆಲ್ (Diesel) ಬೆಲೆಯಲ್ಲಿ (Price) ಇಂದು (ಡಿ.21) ಕೂಡ ಸ್ಥಿರತೆ ಮುಂದುವರಿದಿದೆ. ಕಳೆದ ಒಂದೂವರೆ ತಿಂಗಳಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ.ಇದು ಅಡುಗೆ ಅನಿಲ(LPG), ತರಕಾರಿಗಳು(Vegetables), ಹಣ್ಣುಗಳು (Fruits) ಸೇರಿದಂತೆ ನಿತ್ಯ ವಸ್ತುಗಳ ಬೆಲೆಯೇರಿಕೆಯಿಂದ ಕಂಗೆಟ್ಟಿರೋ ಸಾಮಾನ್ಯ ಜನತೆಗೆ ನಿರಾಳತೆ ಒದಗಿಸಿದೆ. ಆದ್ರೂ ಜಾಗತಿಕ ಮಟ್ಟದಲ್ಲಿ ಒಮಿಕ್ರಾನ್(Omicron) ವೈರಸ್ ಪ್ರಕರಣಗಳು ಹೆಚ್ಚುತ್ತಿರೋದು ಸಹಜವಾಗಿ ಎಲ್ಲ ವಸ್ತುಗಳ ಬೆಲೆ ಮೇಲೆ ಪರಿಣಾಮ ಬೀರಬಹುದೆಂಬ ಆತಂಕವಂತೂ ಇದ್ದೇಇದೆ. ದೇಶದಲ್ಲಿ ಸಗಟು ಹಾಗೂ ಚಿಲ್ಲರೆ ಹಣದುಬ್ಬರದಲ್ಲಿ ಏರಿಕೆಯಾಗುತ್ತಿರೋದು ಬೆಲೆಯೇರಿಕೆಯ ಬಿಸಿ ಇನ್ನಷ್ಟು ಹೆಚ್ಚೋ ಸೂಚನೆ ನೀಡಿದೆ. ಈ ಮಧ್ಯೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ (Crude oil) ಬೆಲೆಯಲ್ಲಿ ಇಂದು (ಡಿ.21) ಇಳಿಕೆ ಕಂಡುಬಂದಿದೆ. ದೀಪಾವಳಿ ಸಮಯದಲ್ಲಿ ಕೇಂದ್ರ ಸರ್ಕಾರ ಇಂಧನದ ಮೇಲಿನ ಅಬಕಾರಿ ಸುಂಕ (excise duty)ಕಡಿತಗೊಳಿಸೋ ಮೂಲಕ ಬೆಲೆಯಲ್ಲಿ ಇಳಿಕೆ ಮಾಡಿತ್ತು. ಆ ಬಳಿಕ ದೆಹಲಿ(Delhi) ಹೊರತುಪಡಿಸಿದ್ರೆ ಬೇರೆ ಯಾವ ರಾಜ್ಯಗಳಲ್ಲೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಬದಲಾವಣೆ ಕಂಡುಬಂದಿಲ್ಲ.ಇಂದು (ಡಿ.21) ರಾಜ್ಯದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಹಾಗ ಡೀಸೆಲ್ ಬೆಲೆ ಹೀಗಿದೆ.

Add Asianetnews Kannada as a Preferred SourcegooglePreferred

ರಾಜ್ಯದ ಪ್ರಮುಖ ನಗರಗಳಲ್ಲಿಇಂಧನ ದರ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ(Bengaluru)ಇಂದು ಪೆಟ್ರೋಲ್ ದರ ಲೀಟರ್ ಗೆ 100.58ರೂ. ಹಾಗೂ ಡೀಸೆಲ್ ದರ 85.01 ರೂ.ಇದೆ. ಹುಬ್ಬಳ್ಳಿಯಲ್ಲಿ (Hubli)ಪೆಟ್ರೋಲ್ ಬೆಲೆ 100.30ರೂ. ಹಾಗೂ ಡೀಸೆಲ್ ಬೆಲೆ 84.78 ರೂ.ಇದೆ. ಮಂಗಳೂರಿನಲ್ಲಿ (Mangalore) ಪೆಟ್ರೋಲ್ ಬೆಲೆ 99.76 ರೂ. ಹಾಗೂ ಡೀಸೆಲ್ ದರ 84.24ರೂ.ಇದೆ. ಮೈಸೂರಿನಲ್ಲಿ (Mysore)ಪೆಟ್ರೋಲ್ ದರ ಲೀಟರ್ ಗೆ 100.08ರೂ. ಇದೆ. ಇನ್ನು ಡೀಸೆಲ್ ದರ ಇಂದು ಲೀಟರ್ ಗೆ 84.56ರೂ.ಇದೆ. ನಿನ್ನೆ ಕಲಬುರಗಿಯಲ್ಲಿ(Kalburgi) ಪೆಟ್ರೋಲ್ ಬೆಲೆ ಲೀಟರ್ ಗೆ 100.28ರೂ. ಇತ್ತು. ಇಂದು 0.24ರೂ. ಏರಿಕೆಯಾಗಿ 100.52ರೂ. ಇದೆ. ಡೀಸೆಲ್ ಲೀಟರ್ ಗೆ ನಿನ್ನೆ 84.77ರೂ. ಇತ್ತು. ಇಂದು 84.99ರೂ. ಇದೆ. ಅಂದ್ರೆ 0.22ರೂ. ಏರಿಕೆಯಾಗಿದೆ.

PM Modi meets top CEOs ಬಜೆಟ್‌ಗೂ ಮುನ್ನ ಪ್ರಮುಖ ಖಾಸಗಿ ಕಂಪನಿ ಸಿಇಒ ಜೊತೆ ಪ್ರಧಾನಿ ಮೋದಿ ಸಂವಾದ!

ಪೆಟ್ರೋಲ್ ದರ ಪರಿಷ್ಕರಣೆ ಹೇಗೆ? 
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರ್ಧರಣೆಯಲ್ಲಿಅನೇಕ ಅಂಶಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಮೊದಲನೆಯದಾಗಿ ಕಚ್ಚಾ ತೈಲದ ಬೆಲೆ, ಎರಡನೆಯದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುತ್ತಿರೋ ತೆರಿಗೆಗಳು. ಇವೆರಡರ ಜೊತೆಗೆ ಡೀಲರ್‌ಗಳ ಕಮೀಷನ್ ಹಾಗೂ ವ್ಯಾಟ್(VAT) ಕೂಡ ಬೆಲೆ ಮೇಲೆ ಪರಿಣಾಮ ಬೀರುತ್ತವೆ. ಪೆಟ್ರೋಲ್‌ ಹಾಗೂ ಡೀಸೆಲ್ ದುಬಾರಿಯಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸೋ ತೆರಿಗೆಗಳೇ ಕಾರಣ.ಇಂಧನಗಳ ಮೇಲೆ ವಿಧಿಸೋ ತೆರಿಗೆಗಳಿಂದ ಸರ್ಕಾರಕ್ಕೆ ದೊಡ್ಡ ಮೊತ್ತದ ಆದಾಯ ಸೃಷ್ಟಿಯಾಗುತ್ತದೆ. ಇದೇ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿತಗೊಳಿಸಲು ಹಿಂದೇಟು ಹಾಕೋದು.ಅಂತಾರಾಷ್ಟ್ರೀಯ ಕಚ್ಚಾ ತೈಲಗಳ ಮಾರುಕಟ್ಟೆಯಲ್ಲಿ ದರಗಳ ಏರಿಳಿತವಾಗುತ್ತಿರೋ ಕಾರಣ ಪ್ರತಿದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಈ ಹಿಂದೆ ಪೆಟ್ರೋಲ್ ದರವನ್ನು ಪ್ರತಿ 15 ದಿನಗಳಿಗೊಮ್ಮೆ ಬದಲಾಯಿಸಲಾಗುತ್ತಿತ್ತು. ಅಂದ್ರೆ ಪ್ರತಿ ತಿಂಗಳು 1 ಹಾಗೂ 16ನೇ ತಾರೀಖಿನಂದು ದರ ಬದಲಾವಣೆ ಮಾಡಲಾಗುತ್ತಿತ್ತು. ಆದ್ರೆ 2017ರ ಜೂನ್ 16ರಿಂದ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಯಿತು. ಅದರಡಿಯಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. 

GST On Food Delivery Apps:ಜ.1ರಿಂದ ಬದಲಾಗಲಿದೆ Swiggy, Zomato ಮೇಲಿನ ತೆರಿಗೆ ನೀತಿ

GST ಇಲ್ಲ
ಪೆಟ್ರೋಲ್ ಹಾಗೂ ಡೀಸೆಲ್ ಸರಕು ಹಾಗೂ ಸೇವಾ ತೆರಿಗೆ (GST) ವ್ಯಾಪ್ತಿಗೆ ಬಾರದಿದ್ರೂ ಕೂಡ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನೇಕ ತೆರಿಗೆಗಳನ್ನು ವಿಧಿಸುತ್ತವೆ. ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಿದಾಗ ಅದರ ಮೇಲಿನ ಸುಂಕವನ್ನು ಸರ್ಕಾರ ಕಡಿತಗೊಳಿಸುತ್ತಿತ್ತು.ಆದ್ರೆ 2014ರಿಂದ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಬಿಟ್ಟಿದೆ. 

"