ದೇಶದಲ್ಲಿ ಹಣದುಬ್ಬರ ಏರಿಕೆ ಹಾದಿಯಲ್ಲಿದ್ದರೂ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿರೋದು ಸದ್ಯದ ಮಟ್ಟಿಗೆ ವಾಹನ ಸವಾರರಿಗೆ ನೆಮ್ಮದಿ ಒದಗಿಸಿದೆ. 

ಬೆಂಗಳೂರು (ಡಿ.23):  ದೇಶದಲ್ಲಿ ಚಿಲ್ಲರೆ ಹಾಗೂ ಸಗಟು ಹಣದುಬ್ಬರ ದರ ಏರಿಕೆಯಾಗುತ್ತಿದೆ. ಪರಿಣಾಮ ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಸಾಮಾನ್ಯ ಜನರು ಪರದಾಡುವಂತಾಗಿದೆ. ಈ ನಡುವೆ ಪೆಟ್ರೋಲ್ (Petrol)ಹಾಗೂ ಡೀಸೆಲ್ (Diesel)ಬೆಲೆಯಲ್ಲಿ (Price)ಯಾವುದೇ ಬದಲಾವಣೆಯಾಗದಿರೋದು ಜನಸಾಮಾನ್ಯರಿಗೆ ಕೊಂಚ ಮಟ್ಟಿಗೆ ನೆಮ್ಮದಿ ನೀಡಿದೆ. ದೀಪಾವಳಿ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಅಬಕಾರಿ ಸುಂಕ(excise duty) ಕಡಿತಗೊಳಿಸಿದ ಪರಿಣಾಮ ಬೆಲೆಯಲ್ಲಿ ಇಳಿಕೆಯಾಗಿತ್ತು. ಅದಕ್ಕೂ ಮುನ್ನ ದೇಶದಲ್ಲಿ ಇಂಧನ ದರ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡಿತ್ತು. ಪ್ರಸ್ತುತ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ (Crude oil)ಬೆಲೆ ಏರಿಕೆಯಾಗುತ್ತಿದ್ದರೂ ದೇಶದಲ್ಲಿ ಮಾತ್ರ ಇಂಧನ ದರ ಸ್ಥಿರತೆ ಕಾಯ್ದುಕೊಂಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು (ಡಿ.23) ಪೆಟ್ರೋಲ್ ಹಾಗ ಡೀಸೆಲ್ ಬೆಲೆ ಎಷ್ಟಿದೆ?

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಜ್ಯದ ಪ್ರಮುಖ ನಗರಗಳಲ್ಲಿಇಂಧನ ದರ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ(Bengaluru)ಇಂದು ಪೆಟ್ರೋಲ್ ದರ ಲೀಟರ್ ಗೆ 100.58ರೂ. ಹಾಗೂ ಡೀಸೆಲ್ ದರ 85.01 ರೂ.ಇದೆ. ಹುಬ್ಬಳ್ಳಿಯಲ್ಲಿ (Hubli)ಪೆಟ್ರೋಲ್ ಬೆಲೆ 100.31ರೂ. ಇದೆ. ಡೀಸೆಲ್ ಬೆಲೆ ಇಂದು 84.79 ರೂ.ಇದೆ. ಮಂಗಳೂರಿನಲ್ಲಿ (Mangalore) ಪೆಟ್ರೋಲ್ ಬೆಲೆ 99.76 ರೂ. ಹಾಗೂ ಡೀಸೆಲ್ ದರ 84.24ರೂ.ಇದೆ. ಮೈಸೂರಿನಲ್ಲಿ (Mysore) ಪೆಟ್ರೋಲ್ ದರ ಲೀಟರ್ ಗೆ 100.08ರೂ. ಇದೆ. ನಿನ್ನೆ 100.32ರೂ.ಇತ್ತು. ಇನ್ನು ಡೀಸೆಲ್ ದರ ಇಂದು ಲೀಟರ್ ಗೆ 84.56ರೂ. ಇದೆ. ನಿನ್ನೆ 84.77ರೂ.ಇತ್ತು. ನಿನ್ನೆ ಕಲಬುರಗಿಯಲ್ಲಿ(Kalburgi) ಪೆಟ್ರೋಲ್ ಬೆಲೆ ಲೀಟರ್ ಗೆ 100.89ರೂ. ಇತ್ತು. ಇಂದು 0.15ರೂ. ಏರಿಕೆಯಾಗಿ 101.04ರೂ. ಇದೆ. ಡೀಸೆಲ್ ಲೀಟರ್ ಗೆ ನಿನ್ನೆ 85.31ರೂ. ಇತ್ತು. ಇಂದು 85.45ರೂ. ಇದೆ. ಅಂದ್ರೆ 0.14ರೂ. ಏರಿಕೆಯಾಗಿದೆ.

CPI Forecast:ಗ್ರಾಹಕ ದರ ಸೂಚ್ಯಂಕ 150 ಬೇಸಿಸ್ ಪಾಯಿಂಟ್ಸ್ ಏರಿಕೆ ಸಾಧ್ಯತೆ: ಸ್ಟ್ಯಾಂಡರ್ಡ್ ಚಾರ್ಟರಡ್ ಬ್ಯಾಂಕ್

ಪೆಟ್ರೋಲ್ ದರ ಪರಿಷ್ಕರಣೆ ಹೇಗೆ? 
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರ್ಧರಣೆಯಲ್ಲಿಅನೇಕ ಅಂಶಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಮೊದಲನೆಯದಾಗಿ ಕಚ್ಚಾ ತೈಲದ ಬೆಲೆ, ಎರಡನೆಯದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುತ್ತಿರೋ ತೆರಿಗೆಗಳು. ಇವೆರಡರ ಜೊತೆಗೆ ಡೀಲರ್‌ಗಳ ಕಮೀಷನ್ ಹಾಗೂ ವ್ಯಾಟ್(VAT) ಕೂಡ ಬೆಲೆ ಮೇಲೆ ಪರಿಣಾಮ ಬೀರುತ್ತವೆ. ಪೆಟ್ರೋಲ್‌ ಹಾಗೂ ಡೀಸೆಲ್ ದುಬಾರಿಯಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸೋ ತೆರಿಗೆಗಳೇ ಕಾರಣ.ಇಂಧನಗಳ ಮೇಲೆ ವಿಧಿಸೋ ತೆರಿಗೆಗಳಿಂದ ಸರ್ಕಾರಕ್ಕೆ ದೊಡ್ಡ ಮೊತ್ತದ ಆದಾಯ ಸೃಷ್ಟಿಯಾಗುತ್ತದೆ. ಇದೇ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿತಗೊಳಿಸಲು ಹಿಂದೇಟು ಹಾಕೋದು.ಅಂತಾರಾಷ್ಟ್ರೀಯ ಕಚ್ಚಾ ತೈಲಗಳ ಮಾರುಕಟ್ಟೆಯಲ್ಲಿ ದರಗಳ ಏರಿಳಿತವಾಗುತ್ತಿರೋ ಕಾರಣ ಪ್ರತಿದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಈ ಹಿಂದೆ ಪೆಟ್ರೋಲ್ ದರವನ್ನು ಪ್ರತಿ 15 ದಿನಗಳಿಗೊಮ್ಮೆ ಬದಲಾಯಿಸಲಾಗುತ್ತಿತ್ತು. ಅಂದ್ರೆ ಪ್ರತಿ ತಿಂಗಳು 1 ಹಾಗೂ 16ನೇ ತಾರೀಖಿನಂದು ದರ ಬದಲಾವಣೆ ಮಾಡಲಾಗುತ್ತಿತ್ತು. ಆದ್ರೆ 2017ರ ಜೂನ್ 16ರಿಂದ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಯಿತು. ಅದರಡಿಯಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. 

Tokenization:ಗಡುವು ವಿಸ್ತರಣೆ ಕೋರಿ RBIಗೆ ಆನ್ಲೈನ್ ವರ್ತಕರ ಮನವಿ

GST ಇಲ್ಲ
ಪೆಟ್ರೋಲ್ ಹಾಗೂ ಡೀಸೆಲ್ ಸರಕು ಹಾಗೂ ಸೇವಾ ತೆರಿಗೆ (GST) ವ್ಯಾಪ್ತಿಗೆ ಬಾರದಿದ್ರೂ ಕೂಡ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನೇಕ ತೆರಿಗೆಗಳನ್ನು ವಿಧಿಸುತ್ತವೆ. ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಿದಾಗ ಅದರ ಮೇಲಿನ ಸುಂಕವನ್ನು ಸರ್ಕಾರ ಕಡಿತಗೊಳಿಸುತ್ತಿತ್ತು.ಆದ್ರೆ 2014ರಿಂದ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಬಿಟ್ಟಿದೆ. 

"