ದೇಶದ ಆರ್ಥಿಕತೆ ದ್ವಿಗುಣಕ್ಕೆ ಮೋದಿ ಪ್ಲ್ಯಾನ್ ಸಿದ್ಧ! ಆರ್ಥಿಕತೆ 5 ಟ್ರಿಲಿಯನ್ ಡಾಲರ್‌ಗೆ ಏರಿಸುವ ಗುರಿ! ಉದ್ಯಮ ಸ್ಥಾಪನೆ ಪ್ರಕ್ರಿಯೆ ಸರಳೀಕರಣಕ್ಕೆ ಮೋದಿ ಬದ್ಧ! ಜಾಗತಿಕ ಮಟ್ಟದಲ್ಲಿ ಭಾರತದ ಮೇಲಿನ ವಿಶ್ವಾಸ ದ್ವಿಗುಣ

ನವದೆಹಲಿ(ನ.20): ದೇಶದ ಆರ್ಥಿಕತೆ ದ್ವಿಗುಣಗೊಳಿಸಲು ಯೋಜನೆ ಸಿದ್ಧಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಆರ್ಥಿಕತೆಯನ್ನು 5 ಟ್ರಿಲಿಯನ್ ಡಾಲರ್‌ಗೆ ಏರಿಸುವ ಗುರಿ ಹೊಂದಿದ್ದಾರೆ. 

ಆರ್ಥಿಕತೆಯನ್ನು ದ್ವಿಗುಣಗೊಳಿಸುವುದಕ್ಕೆ ಸಂಬಂಧಿಸಿದಂತೆ ಸರ್ಕಾರದ ಕ್ರಮಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮುಖ್ಯವಾಗಿ ಉದ್ಯಮ ಸ್ಥಾಪನೆ ಪ್ರಕ್ರಿಯೆ ಸರಳಗೊಳಿಸಿ ವಿಶ್ವದ ಟಾಪ್ 50 ರಾಷ್ಟ್ರಗಳ ಪಟ್ಟಿಯಲ್ಲಿ ಭಾರತದ ಹೆಸರು ಇರುವಂತೆ ಮಾಡಲು ಗುರಿ ಹೊಂದಿರುವುದಾಗಿ ಹೇಳಿದ್ದಾರೆ.

ಉದ್ಯಮ ಸ್ಥಾಪನೆ ಪ್ರಕ್ರಿಯೆ ಸರಳೀಕರಣದ ಕುರಿತಾದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ, ಸುಧಾರಣಾ ನೀತಿಗಳಿಗೆ ಎದುರಾಗಿದ್ದ ಅಡೆತಡೆಗಳನ್ನು ತಮ್ಮ ಸರ್ಕಾರ ನಿವಾರಿಸಿದ್ದು ನೀತಿ ಕೇಂದ್ರಿತ ಆಡಳಿತ ನೀಡುತ್ತಿದೆ ಎಂದು ಹೇಳಿದರು. 

Scroll to load tweet…

ಭಾರತ ಉದ್ಯಮ ಸ್ಥಾಪನೆ ಪ್ರಕ್ರಿಯೆ ಸರಳಗೊಳಿಸಿರುವ ರಾಷ್ಟ್ರಗಳ ಪಟ್ಟಿಯಲ್ಲಿ 142 ನೇ ಸ್ಥಾನದಿಂದ 77 ನೇ ಸ್ಥಾನಕ್ಕೆ ಸುಧಾರಣೆ ಕಂಡಿದೆ ಎಂದು ಪ್ರಧಾನಿ ಈ ವೇಳೆ ಮಾಹಿತಿ ನೀಡಿದರು.

ಉದ್ಯಮ ಸ್ಥಾಪನೆಗೆ ಸಂಬಂಧಿಸಿದಂತೆ ಸುಧಾರಣಾ ಕ್ರಮಗಳನ್ನು ಮತ್ತಷ್ಟು ಕೈಗೊಂಡು ದೇಶದಲ್ಲಿ ಉದ್ಯಮ ಸ್ಥಾಪಿಸಲು ಮುಂದಾಗುವ ಸಂಸ್ಥೆಗಳಿಗೆ ಪ್ರಕ್ರಿಯೆಗಳನ್ನು ಮತ್ತಷ್ಟು ಸರಳೀಕರಣಗೊಳಿಸುವುದಾಗಿ ಮೋದಿ ಇದೇ ವೇಳೆ ಭರವಸೆ ನೀಡಿದರು.

ಭಾರತವನ್ನು 5 ಟ್ರಿಲಿಯನ್ ಡಾಲರ್ ಗಾತ್ರದ ಆರ್ಥಿಕತೆಯನ್ನಾಗಿ ಮಾಡುವ ಗುರಿ ಹೊಂದಲಾಗಿದ್ದು, ಈ ನಿಟ್ಟಿನಲ್ಲಿ ತಮ್ಮ ಸರ್ಕಾರ ಕಾರ್ಯೋನ್ಮುಖವಾಗಿದೆ ಎಂದು ಮೋದಿ ತಿಳಿಸಿದರು. 

ಭಾರತ ನಿರಂತರ ಸುಧಾರಣಾ ಕ್ರಮಗಳಿಗೆ ತೆರೆದುಕೊಳ್ಳುತ್ತಿರುವುದರಿಂದಾಗಿ ಜಾಗತಿಕ ಮಟ್ಟದಲ್ಲಿ ಹೆಚ್ಚಿನ ವಿಶ್ವಾಸ ಗಳಿಸುತ್ತಿದ್ದು, ಐಎಂಎಫ್, ವಿಶ್ವ ಆರ್ಥಿಕ ವೇದಿಕೆ, ಯುಎನ್ ಸಿಟಿಎಡಿಗಳಲ್ಲಿ ಹೆಚ್ಚು ಗುರುತಿಸಿಕೊಳ್ಳುತ್ತಿದೆ ಎಂದು ಮೋದಿ ಸಂತಸ ವ್ಯಕ್ತಪಡಿಸಿದರು.