ಮಹಿಳೆಯರ ದಿನದಂದೇ ನಾರಿಶಕ್ತಿಗೆ ಬಲ ತುಂಬಿದ ಪ್ರಧಾನಿ: ಎಲ್‌ಪಿಜಿ ದರ 100 ರೂ ಇಳಿಕೆ
ಅಂತಾರಾಷ್ಟ್ರೀಯ ಮಹಿಳಾ ದಿನದಂದೆ ಎಲ್‌ಪಿಜಿ ದರವನ್ನು 100 ರೂಪಾಯಿ ಇಳಿಕೆ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಮಹಿಳೆಯರಿಗೆ ವಿಶೇಷ ಕೊಡುಗೆ ನೀಡಿದ್ದಾರೆ.
ನವದೆಹಲಿ: ಅಂತಾರಾಷ್ಟ್ರೀಯ ಮಹಿಳಾ ದಿನದಂದೆ ಎಲ್‌ಪಿಜಿ ದರವನ್ನು 100 ರೂಪಾಯಿ ಇಳಿಕೆ ಮಾಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಮಹಿಳೆಯರಿಗೆ ವಿಶೇಷ ಕೊಡುಗೆ ನೀಡಿದ್ದಾರೆ. ಸರ್ಕಾರದ ಈ ನಿರ್ಧಾರವನ್ನು ಪ್ರಧಾನಿ ಮಹಿಳಾ ದಿನದಂದೇ ಘೋಷಣೆ ಮಾಡಿದ್ದಾರೆ. ಮನೆ ಬಳಕೆಯ ಸಿಲಿಂಡರ್ ದರದಲ್ಲಿ 100 ರೂಪಾಯಿ ಕಡಿತ ಮಾಡಲಾಗಿದೆ. ಸರ್ಕಾರದ ಈ ನಿರ್ಧಾರವು ಲಕ್ಷಾಂತರ ಕುಟುಂಬಗಳ ಮೇಲಿನ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ ಎಂದು ಪ್ರಧಾನಿ ಹೇಳಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ಪ್ರಧಾನಿ ಮೋದಿ ಸರ್ಕಾರದ ಈ ಕ್ರಮವು ವಿಶೇಷವಾಗಿ ದೇಶದ ಮಹಿಳೆಯರಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಹೇಳಿದ್ದಾರೆ. ಮಹಿಳಾ ದಿನದಂದು, ನಮ್ಮ ಸರ್ಕಾರವು ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ರೂ. 100. ಗೆ ಇಳಿಕೆ ಮಾಡಿದೆ. ಇದು ದೇಶದಾದ್ಯಂತ ಲಕ್ಷಾಂತರ ಕುಟುಂಬಗಳ ಮೇಲೆ ಆರ್ಥಿಕ ಹೊರೆಯನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ, ವಿಶೇಷವಾಗಿ ನಮ್ಮ ನಾರಿ ಶಕ್ತಿಗೆ ಪ್ರಯೋಜನವನ್ನು ನೀಡುತ್ತದೆ ಎಂದು ಪ್ರಧಾನಿ ಮೋದಿ ಟ್ವಿಟ್ ಮಾಡಿದ್ದಾರೆ.