ಬಿಜೆಪಿ ಸುಳ್ಳು ಹೇಳುವ ಸರ್ಕಾರವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೂಡಾ ಸುಳ್ಳು ಹೇಳಿಕೊಂಡು ಬರುತ್ತಿದ್ದಾರೆ. ಅದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಸುಳ್ಳು ಹೇಳುವ ಪಾಠ ಮಾಡಿದ್ದಾರೆ ಎಂದು ಕಿಡಿ ಕಾರಿದರು. ನಾಲ್ಕು ವರ್ಷದಲ್ಲಿ ಅಭಿವೃದ್ಧಿ ಕೆಲಸಗಳೇ ಆಗಿಲ್ಲ. ಇನ್ನು 20 ದಿನಗಳಲ್ಲಿ ಏನು ಆಗುವುದಿಲ್ಲ ಎಂದ ರಣದೀಪಸಿಂಗ್‌ ಸುರ್ಜೇವಾಲಾ 

ವಿಜಯಪುರ(ಫೆ.18): ರಾಜ್ಯ ಸರ್ಕಾರದ ಬಜೆಟ್‌ ಕಿವಿಯ ಮೇಲೆ ಹೂವು ಇಟ್ಟಂತಾಗಿದೆ ಎಂದು ಕರ್ನಾಟಕ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪಸಿಂಗ್‌ ಸುರ್ಜೇವಾಲಾ ಪ್ರತಿಕ್ರಿಯಿಸಿದರು. ಶುಕ್ರವಾರ ಸಂಜೆ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಬಿಜೆಪಿ ಸುಳ್ಳು ಹೇಳುವ ಸರ್ಕಾರವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಕೂಡಾ ಸುಳ್ಳು ಹೇಳಿಕೊಂಡು ಬರುತ್ತಿದ್ದಾರೆ. ಅದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಸುಳ್ಳು ಹೇಳುವ ಪಾಠ ಮಾಡಿದ್ದಾರೆ ಎಂದು ಕಿಡಿ ಕಾರಿದರು. ನಾಲ್ಕು ವರ್ಷದಲ್ಲಿ ಅಭಿವೃದ್ಧಿ ಕೆಲಸಗಳೇ ಆಗಿಲ್ಲ. ಇನ್ನು 20 ದಿನಗಳಲ್ಲಿ ಏನು ಆಗುವುದಿಲ್ಲ ಎಂದರು.

ಕಳೆದ ಬಜೆಟ್‌ನಲ್ಲಿ ಆರೋಗ್ಯ ಸೇವೆ ಸೇರಿದಂತೆ ಹಲವು ಯೋಜನೆಗಳನ್ನು ಘೋಷಣೆ ಮಾಡಲಾಗಿತ್ತು. ಆದರೆ, ಅವು ಯಾವುದೇ ಯೋಜನೆಗಳು ಜಾರಿಗೆ ಬಂದಿಲ್ಲ. ಇದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೃಷ್ಟಾಚಾರ ಸರ್ಕಾರವಾಗಿದೆ ಎಂದು ಟೀಕಿಸಿದರು.

Karnataka Budget 2023: ಕೊಡಗಿನ ರಸ್ತೆಗಳ ಅಭಿವೃದ್ಧಿಗೆ 100 ಕೋಟಿ ರು. ವಿಶೇಷ ಪ್ಯಾಕೇಜ್‌!

ಬಿಜೆಪಿ ಹಿಂಸಾತ್ಮಕ ವಿಚಾರಧಾರೆ ಹೊಂದಿದೆ. ಇಂತಹ ಹಿಂಸಾತ್ಮಕ ವಿಚಾರಧಾರೆ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ, ರಾಜೀವ ಗಾಂಧಿ, ಪಂಜಾಬ್‌ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ಮುಖಂಡರನ್ನು ಕೊಂದಿದೆ ಎಂದು ಹೇಳಿದರು.

ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ಖಂಡನೀಯ. ಸಚಿವ ಅಶ್ವತ್ಥ ನಾರಾಯಣ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಹಿಂಸೆ ಸೋಲಿನ ಸಂಕೇತ. ಸೋತವರು ಈ ರೀತಿಯ ಹಿಂಸೆಗೆ ಇಳಿಯುತ್ತಾರೆ. ಈ ಬಾರಿ ಜನರ ಆಶೀರ್ವಾದದಿಂದ ಕಾಂಗ್ರೆಸ್‌ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕೋಟ್ಯಂತರ ಹಣ ಕಾರ್ಪೋರೇಟನಲ್ಲಿ ಅಳವಡಿಸಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಹುಲ್‌ ಗಾಂಧಿ ಆರೋಪ ಮಾಡಿದ್ದಾರೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಅವರು ಆಗ್ರಹಿಸಿದರು.