ನವದೆಹಲಿ(ಏ.26): 'ನಾನು ರಾಜಕೀಯಕ್ಕೆ ಸೇರಿದರೆ ನನ್ನ ಹೆಂಡತಿ ನನ್ನನ್ನು ಬಿಟ್ಟು ಹೋಗುತ್ತಾಳೆ..' ಎಂದು ಆರ್‌ಬಿಐ ಮಾಜಿ ಗರ್ವನರ್ ರಘುರಾಮ್ ರಾಜನ್ ಹಾಸ್ಯ ಚಟಾಕಿ ಹಾರಿಸಿದ್ದಾರೆ.

ಖಾಸಗಿ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ರಘುರಾಮ್ ರಾಜನ್, ರಾಜಕಾರಣದಲ್ಲಿ ಆಸಕ್ತಿ ಇಲ್ಲದಿರುವ ಕಾರಣ ಯಾವುದೇ ರಾಜಕೀಯ ಪಕ್ಷ ಸೇರುವ ಪ್ರಮೇಯವೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ರಾಜಕೀಯ ಕ್ಷೇತ್ರದಲ್ಲಿ ತುಂಬ ಅಸಹನೀಯ ಭಾವ ಮನೆ ಮಾಡಿದ್ದು, ಈ ಕ್ಷೇತ್ರಕ್ಕೆ ಕಾಲಿಟ್ಟರೆ ನನ್ನ ಪತ್ನಿ ನನ್ನನ್ನು ಬಿಟ್ಟು ಹೊಗುವುದಾಗಿ ಬೆದರಿಕೆ ಹಾಕಿರುವುದಾಗಿ ರಘುರಾಮ್ ರಾಜನ್ ಹೇಳಿದ್ದಾರೆ.

ಒಂದು ವೇಳೆ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಘುರಾಮ್ ರಾಜನ್ ಸಚಿವರಾಗಲಿದ್ದಾರೆ ಎಂಬುದು ಕೇವಲ ಊಹಾಪೋಹ ಎಂದು ಅವರು ಸ್ಪಷ್ಟವಾಗಿ ತಳ್ಳಿ ಹಾಕಿದರು.

ದೇಶದಲ್ಲಿ ಏ.11ರಿಂದ ಮೇ.19ರವರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏ.18ರಂದು ಮುಗಿದಿದ್ದು, ಏ.23ರಂದು ಎರಡನೇ ಹಂತದ ಮತದಾನ ಮಯಕ್ತಾಯ ಕಂಡಿದೆ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ. ಕರ್ನಾಟಕದಲ್ಲಿ 28.