ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 2 ನೇ ಅವಧಿಗೆ ಅಧಿಕಾರದ ಚುಕ್ಕಾಣಿ ಹಿಡಿದ ಬಳಿಕ ಮೊದಲ ಬಾರಿಗೆ ಪ್ರಕಟಗೊಳ್ಳಲಿರುವ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ದ್ವೈಮಾಸಿಕ ಹಣಕಾಸು ನೀತಿಯಲ್ಲಿ ಬ್ಯಾಂಕುಗಳ ಬಡ್ಡಿ ದರವನ್ನು ಶೇ.0.25ರಷ್ಟು ಕಡಿತಗೊಳಿಸುವ ನಿರೀಕ್ಷೆ ಇದೆ. 

ಆರ್ಥಿಕಾಭಿವೃದ್ಧಿ 5 ವರ್ಷಗಳ ಕನಿಷ್ಠ ಮಟ್ಟಕ್ಕೆ ಕುಸಿದಿರುವ ಹಿನ್ನೆಲೆಯಲ್ಲಿ ಗುರುವಾರ ನಡೆಯಲಿರುವ ದ್ವೈಮಾಸಿಕ ಹಣಕಾಸು ನೀತಿ ಸಭೆಯಲ್ಲಿ ಬಡ್ಡಿ ದರ ಕಡಿತ ಕುರಿತು ನಿರ್ಧಾರ ಕೈಗೊಳ್ಳುವ ಸಂಭವವಿದೆ ಎಂದು ತಜ್ಞರು ತಿಳಿಸಿದ್ದಾರೆ.