4 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಹಠಾತ್ ಬಡ್ಡಿ ದರ ಏರಿಕೆ ಮಾಡಿದ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಕ್ರಮದ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇದೇ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.
ಮುಂಬೈ (ಮೇ.09): 4 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಹಠಾತ್ ಬಡ್ಡಿ ದರ ಏರಿಕೆ ಮಾಡಿದ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಕ್ರಮದ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಇದೇ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ. ಬಡ್ಡಿ ದರ ಹೆಚ್ಚಳ ಮಾಡಿದ ಸಮಯ ನನಗೆ ಅಚ್ಚರಿ ಉಂಟು ಮಾಡಿತೇ ವಿನಃ ಬಡ್ಡಿ ದರ ಏರಿಕೆಯಲ್ಲ ಎಂದು ಅವರು ಪ್ರತಿಕ್ರಿಯಿಸಿದ್ದಾರೆ. ಆರ್‌ಬಿಐನ (ಋಭೀ) ಈ ಕ್ರಮದಿಂದ ಸರ್ಕಾರದ ಯೋಜಿತ ಮೂಲಸೌಕರ್ಯ ಹೂಡಿಕೆ ಮೇಲೆ ಯಾವುದೇ ಪರಿಣಾಮವೂ ಆಗುವುದಿಲ್ಲ ಎಂದು ಭರವಸೆ ನೀಡಿದ್ದಾರೆ.
ಶನಿವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಬಡ್ಡಿ ದರ ಏರಿಕೆ ಮಾಡಿದ ಸಮಯ ಅಚ್ಚರಿ ತಂದಿತು. 2 ದ್ವೈಮಾಸಿಕ ಹಣಕಾಸು ನೀತಿ ಸಭೆಗಳ ಮಧ್ಯದಲ್ಲಿ ಆರ್‌ಬಿಐ ಈ ಏರಿಕೆಯನ್ನು ಮಾಡಿರುವುದು ಆಶ್ಚರ್ಯಕ್ಕೆ ಕಾರಣ. ಬಡ್ಡಿ ದರ ಏರಿಕೆ ಬಗ್ಗೆ ಅಮೆರಿಕ ಹೇಳುತ್ತಲೇ ಬಂದಿತ್ತು ಎಂದು ತಿಳಿಸಿದ್ದಾರೆ. ಕಳೆದ ಬಾರಿ ನಡೆದ ದ್ವೈಮಾಸಿಕ ಹಣಕಾಸು ನೀತಿ ಸಭೆಯಲ್ಲೂ ಬಡ್ಡಿ ದರ ಏರಿಕೆ ಕುರಿತಂತೆ ಆರ್‌ಬಿಐ ಸುಳಿವು ನೀಡಿತ್ತು. ಆಸ್ಪ್ರೇಲಿಯಾ, ಅಮೆರಿಕ ಕೂಡ ಬಡ್ಡಿ ದರ ಏರಿಕೆ ಮಾಡಿವೆ. ಅಲ್ಲಿನ ಕೇಂದ್ರ ಬ್ಯಾಂಕುಗಳಂತೆ ರಿಸರ್ವ್ ಬ್ಯಾಂಕ್ ಕೂಡ ಇಲ್ಲೂ ಬಡ್ಡಿ ದರ ಹೆಚ್ಚಳ ಮಾಡಿದೆ. ಇತ್ತೀಚಿನ ದಿನಗಳಲ್ಲಿ ಕೇಂದ್ರೀಯ ಬ್ಯಾಂಕುಗಳ ನಡುವೆ ವಿಶಾಲ ಒಮ್ಮತ ಮೂಡಿದೆ ಎಂದು ತಿಳಿಸಿದರು.
ಶ್ರೀಲಂಕಾಗೆ ಎಲ್ಲಾ ರೀತಿಯಲ್ಲೂ ಆರ್ಥಿಕ ನೆರವಿನ ಭರವಸೆ ನೀಡಿದ ನಿರ್ಮಲಾ ಸೀತಾರಾಮನ್!
ಇಂಧನ ಬೆಲೆ ಏರಿಕೆಗೆ ಏನು ಕಾರಣ?: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 137 ದಿನಗಳ ಕಾಲ ಪರಿಷ್ಕರಣೆಯಾಗದಿರುವುದನ್ನು (Price Hike) ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಮರ್ಥಿಸಿಕೊಂಡಿದ್ದಾರೆ. ಇಂಧನ ಪೂರೈಕೆ ಸರಪಳಿಯಲ್ಲಿನ ಅಡಚಣೆ, ಉಕ್ರೇನ್ ಯುದ್ಧದಿಂದಾಗಿ ಜಾಗತಿಕ ತೈಲ ಬೆಲೆಯಲ್ಲಿ ಏರಿಕೆಯಾಗಿರುವುದರಿಂದ ಕಳೆದ ವಾರದಿಂದ ಇಂಧನ ಬೆಲೆ ಏರಿಕೆಯಾಗುತ್ತಿದೆ ಎಂದು ಅವರು ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಜಾಗತಿಕ ತೈಲ ಬೆಲೆಯಲ್ಲಿ ಏರಿಕೆ ಮತ್ತು ಅಡಚಣೆ ಒಂದೆರಡು ವಾರಗಳ ಹಿಂದಿನಿಂದ ನಡೆಯುತ್ತಿದೆ.
Nirmala Sitharaman: 370ನೇ ವಿಧಿ ರದ್ದು ಬಳಿಕ ಕಾಶ್ಮೀರದಲ್ಲಿ ಹಿಂಸೆ ಇಳಿಕೆ, ಹೂಡಿಕೆ ಪರಿಸರ ನಿರ್ಮಾಣ
ಅದಕ್ಕೆ ಪ್ರತಿಯಾಗಿ ಬೆಲೆ ಏರಿಕೆಯಾಗುತ್ತಿದೆ. ಆದರೆ ಚುನಾವಣೆಗಾಗಿ ಇಂಧನ ಬೆಲೆ ಪರಿಷ್ಕರಣೆ ನಿಲ್ಲಿಸಲಾಗಿತ್ತು ಎಂಬುದು ಸುಳ್ಳು ಎಂದು ಹೇಳಿದರು. ರಷ್ಯಾ ಆಕ್ರಮಣಕ್ಕೂ ಮೊದಲೇ ಅಂತಾರಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿತ್ತು. ಈ ಸಮಯದಲ್ಲಿ ಭಾರತ ಒಂದು ಬ್ಯಾರಲ್‌ಗೆ 100.71 ಡಾಲರ್ ನೀಡಿ ಖರೀದಿಸುತ್ತಿತ್ತು. ಆದರೆ ಕಳೆದ ನವೆಂಬರ್‌ನಲ್ಲಿ ಒಂದು ಬ್ಯಾರಲ್ ಕಚ್ಚಾ ತೈಲದ ಬೆಲೆ ಬ್ಯಾರಲ್‌ಗೆ 82 ಡಾಲರ್ ಇತ್ತು. ಪಂಚರಾಜ್ಯ ಚುನಾವಣೆಗಳು ಘೊಷಣೆಯಾದ ನಂತರ ಇಂಧನ ಬೆಲೆ ಪರಿಷ್ಕರಣೆಯನ್ನು ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ನಿಲ್ಲಿಸಿದ್ದವು.
