ಇನ್ನೂ 9,760 ಕೋಟಿ ರೂ. ಮೌಲ್ಯದ 2,000ರೂ. ನೋಟುಗಳು ಹಿಂತಿರುಗಲು ಬಾಕಿ: ಆರ್ ಬಿಐ

2,000ರೂ. ಮುಖಬೆಲೆಯ ನೋಟುಗಳನ್ನು ಆರ್ ಬಿಐ ಪ್ರಾದೇಶಿಕ ಕಚೇರಿಗಳಲ್ಲಿ ವಿನಿಮಯ ಅಥವಾ ಠೇವಣಿಗೆ ಅವಕಾಶ ನೀಡಲಾಗಿದೆ. ಆದರೆ, ಇನ್ನೂ ಇನ್ನೂ 9760 ಕೋಟಿ ರೂ. ಮೌಲ್ಯದ 2,000ರೂ. ನೋಟುಗಳು ಹಿಂತಿರುಗಲು ಬಾಕಿಯಿವೆ ಎಂದು ಆರ್ ಬಿಐ ಮಾಹಿತಿ ನೀಡಿದೆ. 

RBI says Rs 2000 notes totalling Rs 9760 crore still with public anu

ಮುಂಬೈ (ಡಿ.1):  2,000ರೂ. ಮುಖಬೆಲೆಯ ಅಂದಾಜು ಶೇ.97.26ರಷ್ಟು ನೋಟುಗಳನ್ನು ಇಲ್ಲಿಯ ತನಕ ಬ್ಯಾಂಕುಗಳಿಗೆ ಹಿಂತಿರುಗಿಸಲಾಗಿದ್ದು, ಕೇವಲ 9,760 ಕೋಟಿ ರೂ. ಮೌಲ್ಯದ ನೋಟುಗಳು ಸಾರ್ವಜನಿಕರ ಬಳಿಯಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಶುಕ್ರವಾರ ಮಾಹಿತಿ ನೀಡಿದೆ. ಮೇ 19ರಂದು ಆರ್ ಬಿಐ 2,000ರೂ. ಮುಖಬೆಲೆಯ ನೋಟುಗಳನ್ನು ವಿತ್ ಡ್ರಾ ಮಾಡೋದಾಗಿ ಮಾಹಿತಿ ನೀಡಿತ್ತು. ಆದರೆ, ಸಾರ್ವಜನಿಕರಿಗೆ ಬ್ಯಾಂಕ್ ಗಳಲ್ಲಿ ಠೇವಣಿಯಿಡಲು ಅಥವಾ ವಿನಿಮಯ ಮಾಡಲು ಸೆಪ್ಟೆಂಬರ್ 30ರ ತನಕ ನಾಲ್ಕು ತಿಂಗಳ ಕಾಲಾವಕಾಶ ನೀಡಿತ್ತು. ಆದರೆ, ಆ ಬಳಿಕ ಈ ಗಡುವನ್ನು ಅಕ್ಟೋಬರ್ 7ರ ತನಕ ವಿಸ್ತರಿಸಲಾಗಿತ್ತು. ಈ ಅಂತಿಮ ಗಡುವಿನ ಬಳಿಕ ಈ ನೋಟುಗಳನ್ನು ಆರ್ ಬಿಐಯ 19 ಪ್ರಾದೇಶಿಕ ವಿತರಣ ಕಚೇರಿಗಳಲ್ಲಿ ಮಾತ್ರ ವಿನಿಮಯ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಅಲ್ಲದೆ, ಸಮೀಪದ ಬ್ಯಾಂಕ್ ಗಳಲ್ಲಿ ಈ ಸೌಲಭ್ಯವನ್ನು ಸ್ಥಗಿತಗೊಳಿಸಲಾಗಿದೆ.

2023ರ ಮೇ 19ರಂದು ಒಟ್ಟು  3.56 ಲಕ್ಷ ಕೋಟಿ ರೂ. ಮೌಲ್ಯದ 2,000ರೂ. ನೋಟುಗಳು ಚಲಾವಣೆಯಲ್ಲಿದ್ದವು. 2023ರ ನವೆಂಬರ್ 30ರಂದು ಇದರ ಪ್ರಮಾಣ 9,760ಕೋಟಿ ರೂ.ಗೆ ಇಳಿಕೆಯಾಗಿದೆ' ಎಂದು ಆರ್ ಬಿಐ ಹೇಳಿಕೆಯೊಂದರಲ್ಲಿ ತಿಳಿಸಿದೆ. 

2,000ರೂ. ನೋಟು ಬದಲಾವಣೆ ಗಡುವು ಅಕ್ಟೋಬರ್ 7ರ ತನಕ ವಿಸ್ತರಣೆ;ಆ ಬಳಿಕ ಏನಾಗುತ್ತದೆ? ಆರ್ ಬಿಐ ಮಾಹಿತಿ ಇಲ್ಲಿದೆ

2,000ರೂ. ನೋಟು ವಿನಿಮಯ ಹೇಗೆ?
2,000ರೂ. ನೋಟುಗಳನ್ನು ವ್ಯಕ್ತಿಗಳು ಅಥವಾ ಸಂಸ್ಥೆಗಳು 19 ಆರ್ ಬಿಐ ಪ್ರಾದೇಶಿಕ ವಿತರಣ ಕಚೇರಿಗಳಲ್ಲಿ ಒಮ್ಮೆಗೆ  20,000ರೂ. ತನಕ ವಿನಿಮಯ ಮಾಡಬಹುದು. ವ್ಯಕ್ತಿಗಳು ಅಥವಾ ಸಂಸ್ಥೆಗಳು 2,000ರೂ. ನೋಟುಗಳನ್ನು 19 ಆರ್ ಬಿಐ ವಿತರಣ ಕಚೇರಿಗಳಲ್ಲಿ ಭಾರತದಲ್ಲಿನ ತಮ್ಮ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡುವಂತೆ ಕೋರಬಹುದು. ಇದಕ್ಕೆ ಯಾವುದೇ ಮಿತಿಯಿಲ್ಲ.ದೇಶದೊಳಗಿನ ವ್ಯಕ್ತಿಗಳು ಅಥವಾ ಸಂಸ್ಥೆಗಳು  2,000ರೂ. ನೋಟುಗಳನ್ನು ಭಾರತೀಯ ಅಂಚೆ ಮೂಲಕ 19 ಆರ್ ಬಿಐ ವಿತರಣಾ ಕಚೇರಿಗಳಲ್ಲಿ ಯಾವುದಕ್ಕೆ ಬೇಕಾದರೂ ಕಳುಹಿಸಬಹುದು ಹಾಗೂ ಭಾರತದಲ್ಲಿನ ತಮ್ಮ ಬ್ಯಾಂಕ್ ಖಾತೆಗೆ ಜಮೆ ಮಾಡುವಂತೆ ಕೋರಬಹುದು. ಈ ರೀತಿಯ ವಿನಿಮಯ ಅಥವಾ ಕ್ರೆಡಿಟ್ ಆರ್ ಬಿಐ ಅಥವಾ ಸರ್ಕಾರದ ಸಂಬಂಧಪಟ್ಟ ನಿಯಮಗಳಿಗೊಳಪಡುತ್ತವೆ. ಹಾಗೆಯೇ ಈ ಸಮಯದಲ್ಲಿ ಅರ್ಹ ಗುರುತು ದಾಖಲೆಗಳನ್ನು ಒದಗಿಸೋದು ಅಗತ್ಯ.

ಇನ್ನು ಯಾವುದೇ ಅಂಚೆ ಕಚೇರಿಯಿಂದ ಅಂಚೆ ಮೂಲಕ 2,000ರೂ. ನೋಟುಗಳನ್ನು  ತಮ್ಮ ಬ್ಯಾಂಕ್ ಖಾತೆಗಳಿಗೆ ಜಮೆ ಮಾಡುವಂತೆ ಆರ್ ಬಿಐ ವಿತರಣಾ ಕಚೇರಿಗಳಿಗೆ ಕಳುಹಿಸಬಹುದು. 

ಆರ್ ಬಿಐ ಪ್ರಾದೇಶಿಕ ಕಚೇರಿಗಳಲ್ಲಿ ಸಾಲು
ಆರ್ ಬಿಐ ಪ್ರಾದೇಶಿಕ ಕಚೇರಿಗಳಲ್ಲಿ 2,000ರೂ. ಮುಖಬೆಲೆಯ ನೋಟುಗಳ ವಿನಿಮಯ ಅಥವಾ ಠೇವಣಿಗೆ ದೊಡ್ಡ ಸಂಖ್ಯೆಯಲ್ಲಿ ಸರದಿ ಸಾಲು ನಿರ್ಮಾಣವಾಗಿದೆ. ಅಹಮದಾಬಾದ್, ಬೆಂಗಳೂರು, ಬೆಲ್ಪುರ್, ಭೋಪಾಲ್, ಭುವನೇಶ್ವರ್, ಚಂಢೀಗಢ, ಚೆನ್ನೈ, ಗುವಹಟಿ, ಹೈದರಾಬಾದ್, ಜೈಪುರ, ಜಮ್ಮು, ಕಾನ್ಪುರ, ಕೋಲ್ಕತ್ತ, ಲಖ್ನೋ, ಮುಂಬೈ, ನಾಗ್ಪುರ, ನವದೆಹಲಿ, ಪಟ್ನಾ ಹಾಗೂ ತಿರುವನಂತಪುರಂ ನಲ್ಲಿರುವ ಆರ್ ಬಿಐ ವಿತರಣ ಕಚೇರಿಗಳಲ್ಲಿ 2,000ರೂ. ಮುಖಬೆಲೆಯ ನೋಟುಗಳ ವಿನಿಮಯಕ್ಕೆ ಅವಕಾಶ ಕಲ್ಪಿಸಲಾಗಿದೆ. 

ನಿಮ್ಮಲ್ಲಿ ಇನ್ನೂ ಇದೆಯಾ 2000 ರೂ ನೋಟು, ವಿನಿಮಯಕ್ಕಿರುವ ನಿಯಮವೇನು?

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಳೆಯ 500 ರೂ. ಹಾಗೂ 1,000 ರೂ. ನೋಟುಗಳನ್ನು ಬ್ಯಾನ್‌ ಮಾಡಿದ ಬಳಿಕ 2016 ರಲ್ಲಿ ಹೊಸ 500 ರೂ. ನೋಟುಗಳ ಜತೆಗೆ 2 ಸಾವಿರ ರೂ. ನೋಟುಗಳನ್ನು ದೇಶದಲ್ಲಿ ಪರಿಚಯಿಸಲಾಯ್ತು. ಕಪ್ಪು ಹಣ, ಭಯೋತ್ಪಾದನೆ ಹಾಗೂ ಇತರೆ ಗುರಿಗಳನ್ನು ಈಡೇರಿಸಲು ಈ ರೀತಿ ಮಾಡಲಾಗಿತ್ತು ಎಂದು ಆಗ ವರದಿಯಾಗಿತ್ತು. ಕ್ಲೀನ್ ನೋಟ್ ಪಾಲಿಸಿ ಅಡಿಯಲ್ಲಿ 2 ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವ ತೀರ್ಮಾನವನ್ನು ಕೈಗೊಂಡಿರೋದಾಗಿ  ಆರ್ ಬಿಐ ತಿಳಿಸಿತ್ತು. 

Latest Videos
Follow Us:
Download App:
  • android
  • ios