ಎಚ್‌ಡಿ ಎಫ್ ಸಿ ಬ್ಯಾಂಕ್ ಗ್ರಾಹಕರೇ ಇಲ್ಲೊಮ್ಮೆ ಗಮನಿಸಿ ... ಆರ್‌ಬಿಐ ಕೆಲವೊಂದು ನಿರ್ಬಂಧವನ್ನು ವಿಧಿಸಿದೆ.. ಏನದು
ಮುಂಬೈ/ ನವದೆಹಲಿ (ಡಿ.04): ದೇಶದ ಅತಿದೊಡ್ಡ ಖಾಸಗಿ ಬ್ಯಾಂಕ್ ಎಂಬ ಹೆಗ್ಗಳಿಕೆ ಪಡೆದಿರುವ ಎಚ್‌ಡಿಎಫ್‌ಸಿ ಬ್ಯಾಂಕ್‌ಗೆ ಹೊಸ ಕ್ರೆಡಿಟ್ ಕಾರ್ಡ್‌ಗಳನ್ನು ವಿತರಿಸದಂತೆ ಹಾಗೂ ಹೊಸ ಡಿಜಿಟಲ್ ಬ್ಯಾಂಕಿಂಗ್ ಚಟುವಟಿಕೆಗಳನ್ನು ಆರಂಭಿಸದಂತೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ತಾತ್ಕಾಲಿಕ ತಡೆ ನೀಡಿದೆ. ಆರ್‌ಬಿಐ ಈ ನಿರ್ಬಂಧ ವಿಧಿಸಿದ್ದು, ಗುರುವಾರ ಈ ಕುರಿತು ಷೇರು ಮಾರುಕಟ್ಟೆಗೆ ಎಚ್‌ಡಿಎಫ್‌ಸಿ ಬ್ಯಾಂಕ್ ಮಾಹಿತಿ ನೀಡಿದೆ.
ಎಚ್‌ಡಿಎಫ್‌ಸಿ ಬ್ಯಾಂಕಿನ ಇಂಟರ್ನೆಟ್ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್ ಹಾಗೂ ಇತರ ಪಾವತಿಗಳೂ ಸೇರಿದಂತೆ ಡಿಜಿಟಲ್ ಬ್ಯಾಂಕಿಂಗ್ ಚಾನಲ್‌ಗಳಲ್ಲಿ ಇತ್ತೀಚೆಗೆ ಇದ್ದಕ್ಕಿದ್ದಂತೆ ಸೇವೆ ಸ್ಥಗಿತಗೊಂಡಿದ್ದ ಕಾರಣಕ್ಕೆ ಹಾಗೂ ಆ ಬಗ್ಗೆ ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಆರ್‌ಬಿಐ ಈ ಕ್ರಮ ಕೈಗೊಂಡಿದೆ. ಬ್ಯಾಂಕೊಂದರ ವಿರುದ್ಧ ಇಂತಹ ಕಾರಣಕ್ಕೆ ಈ ರೀತಿಯ ನಿರ್ಬಂಧವನ್ನು ಆರ್‌ಬಿಐ ಹೇರುತ್ತಿರುವುದು ಇದೇ ಮೊದಲು ಎನ್ನಲಾಗಿದೆ. ನ.21ರಂದು ಉಂಟಾಗಿದ್ದ ಸೇವೆ ಸ್ಥಗಿತದ ಹಿನ್ನೆಲೆಯಲ್ಲಿ ಆರ್‌ಬಿಐ ಈ ಕ್ರಮ ಕೈಗೊಂಡಿದ್ದು, ವಿದ್ಯುತ್ ನಿಲುಗಡೆಯಿಂದ ಹಾಗಾಗಿತ್ತು ಎಂದು ಎಚ್‌ಡಿಎಫ್‌ಸಿ ಬ್ಯಾಂಕ್ ಸ್ಪಷ್ಟನೆ ನೀಡಿದೆ.
ಚಿನ್ನದ ದರ ಮತ್ತೆ ಏರಿಕೆ, ಗ್ರಾಹಕರಿಗೆ ಕಹಿ: ಇಲ್ಲಿದೆ ಇಂದಿನ ಗೋಲ್ಡ್ ರೇಟ್! ...
ಎಚ್‌ಡಿಎಫ್‌ಸಿ ಬಾಂಕ್ ‘ಡಿಜಿಟಲ್ 2.0’ ಹೆಸರಿನಲ್ಲಿ ಹೊಸ ಚಟುವಟಿಕೆಗಳನ್ನು ಆರಂಭಿಸಲು ಸಿದ್ಧತೆ ಮಾಡಿಕೊಂಡಿತ್ತು. ಅದಕ್ಕೀಗ ತಾತ್ಕಾಲಿಕ ತಡೆ ಬಿದ್ದಿದ್ದು, ನಿರ್ಬಂಧ ಎಲ್ಲಿಯವರೆಗೆ ಇರಲಿದೆ ಎಂಬ ಬಗ್ಗೆ ಮಾಹಿತಿ ಇಲ್ಲ. 3ರಿಂದ 6 ತಿಂಗಳವರೆಗೆ ನಿರ್ಬಂಧ ಇರುವ ಸಾಧ್ಯತೆ ಇದೆ ಎನ್ನಲಾಗಿದೆ. ಆರ್‌ಬಿಐನ ನಿರ್ಬಂಧದಿಂದ ಹಾಲಿ ಕ್ರೆಡಿಟ್ ಕಾರ್ಡ್ ಬಳಕೆದಾರರಿಗೆ ಹಾಗೂ ಡಿಜಿಟಲ್ ಬ್ಯಾಂಕಿಂಗ್ ಸೌಕರ್ಯಗಳ ಬಳಕೆದಾರರಿಗೆ ಸೇವೆಯಲ್ಲಿ ಯಾವುದೇ ವ್ಯತ್ಯಾಸವಾಗುವುದಿಲ್ಲ ಎಂದು ಎಚ್‌ಡಿಎಫ್‌ಸಿ ಬ್ಯಾಂಕ್ ಹೇಳಿಕೊಂಡಿದೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Dec 4, 2020, 10:55 AM IST