Asianet Suvarna News Asianet Suvarna News

Petrol Diesel Rate:ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯೇರಿಕೆ, ರಾಜ್ಯದಲ್ಲಿ ಪೆಟ್ರೋಲ್ ದರ ಎಷ್ಟಿದೆ?

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಸೋಮವಾರ (ಡಿ.13)  ಮತ್ತೆ ಏರಿಕೆ ದಾಖಲಿಸಿದೆ. ಆದ್ರೆ ರಾಜ್ಯದ ಪ್ರಮುಖ ನಗರಗಳಲ್ಲಿ ಮಾತ್ರ ಪೆಟ್ರೋಲ್ ಹಾಗೂ ಡೀಸೆಲ್ ದರ ಯಥಾಸ್ಥಿತಿ ಕಾಯ್ದುಕೊಂಡಿವೆ.

Rise in Crude oil price check todays Petrol Diesel price in major cities of Karnataka Dec13 2021 anu
Author
Bangalore, First Published Dec 13, 2021, 10:58 AM IST

ಬೆಂಗಳೂರು (ಡಿ.13):  ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ (Crude Oil)ಬೆಲೆಯಲ್ಲಿ ಇಂದು (ಡಿ.13) ಮತ್ತೆ ಏರಿಕೆ ಕಂಡುಬಂದಿದೆ. ಕಳೆದ ಕೆಲವು ದಿನಗಳಿಂದ ಕಚ್ಚಾ ತೈಲದ ಬೆಲೆಯಲ್ಲಿ ಏರಿಕೆಯಾಗುತ್ತಿದ್ದು, ಇದು ದೇಶೀಯ ಮಾರುಕಟ್ಟೆ ಮೇಲೂ ಪರಿಣಾಮ ಬೀರೋ ಸಾಧ್ಯತೆಯಿದೆ. ಆದ್ರೆ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಸೋಮವಾರ (ಡಿ. 13) ಪೆಟ್ರೋಲ್ (Petrol)ಹಾಗೂ ಡೀಸೆಲ್  (Diesel)ಬೆಲೆ (Price) ಯಥಾಸ್ಥಿತಿ ಕಾಯ್ದುಕೊಂಡಿದೆ. ಒಂದು ತಿಂಗಳಿಗೂ ಅಧಿಕ ಸಮಯದಿಂದ ಇಂಧನ ದರದಲ್ಲಿ ಯಾವುದೇ ಗಮನಾರ್ಹ ಬದಲಾವಣೆಯಾಗಿಲ್ಲ. ಇದು ವಾಹನಸವಾರರಿಗೆ ನೆಮ್ಮದಿ ಮೂಡಿಸಿದ್ದರೂ ಒಮಿಕ್ರಾನ್ (Omicron) ವೈರಸ್ ಭೀತಿ ಹಿನ್ನೆಲೆಯಲ್ಲಿ ಮತ್ತೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಬಹುದಾ ಎಂಬ ಅನುಮಾನವಂತೂ ಇದ್ದೇಇದೆ.  ಕೇಂದ್ರ(Central) ಹಾಗೂ ರಾಜ್ಯ (State) ಸರ್ಕಾರಗಳು(Governments) ಕಳೆದ ತಿಂಗಳು ಅಬಕಾರಿ ಸುಂಕ(Excise duty) ಕಡಿತಗೊಳಿಸಿದಂತೆ ಈ ತಿಂಗಳು ಕೂಡ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆಗೆ ಏನಾದ್ರೂ ಕ್ರಮ ಕೈಗೊಳ್ಳಬಹುದೆಂಬ ನಿರೀಕ್ಷೆ ಈ ತಿಂಗಳ ಪ್ರಾರಂಭದಲ್ಲೇ ಇತ್ತು. ಆದ್ರೆ ದೆಹಲಿ (Delhi) ಹೊರತುಪಡಿಸಿದ್ರೆ ದೇಶದ ಬೇರೆ ಯಾವ ರಾಜ್ಯಗಳಲ್ಲಿಯೂ ಪೆಟ್ರೋಲ್ ಬೆಲೆಯಲ್ಲಿ ಇಳಿಕೆಯಾಗಲಿಲ್ಲ. ಹಾಗಾದ್ರೆ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು (ಡಿ.13) ಪೆಟ್ರೋಲ್ ಹಾಗೂ ಡೀಸೆಲ್ ದರ ಎಷ್ಟಿದೆ? ಇಲ್ಲಿದೆ ನೋಡಿ ಮಾಹಿತಿ.

ರಾಜ್ಯದ ಪ್ರಮುಖ ನಗರಗಳಲ್ಲಿಇಂಧನ ದರ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ(Bengaluru)ಇಂದು ಪೆಟ್ರೋಲ್ ದರ ಲೀಟರ್ ಗೆ 100.58ರೂ. ಹಾಗೂ ಡೀಸೆಲ್  ದರ 85.01 ರೂ.ಇದೆ. ಹುಬ್ಬಳ್ಳಿಯಲ್ಲಿ (Hubli)ಪೆಟ್ರೋಲ್ ಬೆಲೆ 100.31ರೂ. ಹಾಗೂ ಡೀಸೆಲ್ ಬೆಲೆ 84.79 ರೂ.ಇದೆ. ಮಂಗಳೂರಿನಲ್ಲಿ (Mangalore)ಪೆಟ್ರೋಲ್ ಬೆಲೆ 99.76 ರೂ. ಹಾಗೂ ಡೀಸೆಲ್ ದರ 84.24ರೂ.ಇದೆ. ಮೈಸೂರಿನಲ್ಲಿ (Mysore)ಪೆಟ್ರೋಲ್ ದರ ಲೀಟರ್ ಗೆ 100.08ರೂ. ಹಾಗೂ ಡೀಸೆಲ್ ದರ ಲೀಟರ್ ಗೆ  84.56ರೂ.ಇದೆ. ಕಲಬುರಗಿಯಲ್ಲಿ(Kalburgi)ಪೆಟ್ರೋಲ್ ಗೆ 101.04ರೂ. ಹಾಗೂ ಡೀಸೆಲ್ ಗೆ 85.45ರೂ.ಇದೆ. 

Bank Deposit Insurance: ಬ್ಯಾಂಕ್‌ಗಳು ನಷ್ಟಕ್ಕೆ ಒಳಗಾದರೂ ಠೇವಣಿ ಹಣ ಸುರಕ್ಷಿತ: ಮೋದಿ

ಪೆಟ್ರೋಲ್ ದರ ಪರಿಷ್ಕರಣೆ ಹೇಗೆ?
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರ್ಧರಣೆಯಲ್ಲಿಅನೇಕ ಅಂಶಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ಮೊದಲನೆಯದಾಗಿ ಕಚ್ಚಾ ತೈಲದ ಬೆಲೆ, ಎರಡನೆಯದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸುತ್ತಿರೋ ತೆರಿಗೆಗಳು. ಇವೆರಡರ ಜೊತೆಗೆ ಡೀಲರ್‌ಗಳ ಕಮೀಷನ್ ಹಾಗೂ ವ್ಯಾಟ್(VAT) ಕೂಡ ಬೆಲೆ ಮೇಲೆ ಪರಿಣಾಮ ಬೀರುತ್ತವೆ. ಪೆಟ್ರೋಲ್‌ ಹಾಗೂ ಡೀಸೆಲ್ ದುಬಾರಿಯಾಗಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಧಿಸೋ ತೆರಿಗೆಗಳೇ ಕಾರಣ.ಇಂಧನಗಳ ಮೇಲೆ ವಿಧಿಸೋ ತೆರಿಗೆಗಳಿಂದ ಸರ್ಕಾರಕ್ಕೆ ದೊಡ್ಡ ಮೊತ್ತದ ಆದಾಯ ಸೃಷ್ಟಿಯಾಗುತ್ತದೆ. ಇದೇ ಕಾರಣಕ್ಕೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಇಂಧನದ ಮೇಲಿನ ತೆರಿಗೆ ಕಡಿತಗೊಳಿಸಲು ಹಿಂದೇಟು ಹಾಕೋದು.ಅಂತಾರಾಷ್ಟ್ರೀಯ ಕಚ್ಚಾ ತೈಲಗಳ ಮಾರುಕಟ್ಟೆಯಲ್ಲಿ ದರಗಳ ಏರಿಳಿತವಾಗುತ್ತಿರೋ ಕಾರಣ ಪ್ರತಿದಿನ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಗಳನ್ನು ಪರಿಷ್ಕರಿಸಲಾಗುತ್ತದೆ. ಈ ಹಿಂದೆ ಪೆಟ್ರೋಲ್ ದರವನ್ನು ಪ್ರತಿ 15 ದಿನಗಳಿಗೊಮ್ಮೆ ಬದಲಾಯಿಸಲಾಗುತ್ತಿತ್ತು. ಅಂದ್ರೆ ಪ್ರತಿ ತಿಂಗಳು 1 ಹಾಗೂ 16ನೇ ತಾರೀಖಿನಂದು ದರ ಬದಲಾವಣೆ ಮಾಡಲಾಗುತ್ತಿತ್ತು. ಆದ್ರೆ 2017ರ ಜೂನ್ 16ರಿಂದ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಯಿತು. ಅದರಡಿಯಲ್ಲಿ ಪ್ರತಿದಿನ ಬೆಳಗ್ಗೆ 6 ಗಂಟೆಗೆ ಬೆಲೆ ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಪ್ರತಿದಿನ ಬೆಳಗ್ಗೆ ತೈಲ ಕಂಪನಿಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. 

Sudha Murthy Retires: ಇನ್ಫಿ ಪ್ರತಿಷ್ಠಾನದೊಂದಿಗಿನ 25 ವರ್ಷಗಳ ಪಯಣಕ್ಕೆ ಸುಧಾ ಮೂರ್ತಿ ವಿದಾಯ

GST ಇಲ್ಲ
ಪೆಟ್ರೋಲ್ ಹಾಗೂ ಡೀಸೆಲ್ ಸರಕು ಹಾಗೂ ಸೇವಾ ತೆರಿಗೆ (GST) ವ್ಯಾಪ್ತಿಗೆ ಬಾರದಿದ್ರೂ ಕೂಡ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನೇಕ ತೆರಿಗೆಗಳನ್ನು ವಿಧಿಸುತ್ತವೆ. ಈ ಹಿಂದೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಹೆಚ್ಚಿದಾಗ ಅದರ ಮೇಲಿನ ಸುಂಕವನ್ನು ಸರ್ಕಾರ ಕಡಿತಗೊಳಿಸುತ್ತಿತ್ತು.ಆದ್ರೆ 2014ರಿಂದ ಕೇಂದ್ರ ಸರ್ಕಾರ ಈ ಕ್ರಮವನ್ನು ಕೈಬಿಟ್ಟಿದೆ. 

"


 

Follow Us:
Download App:
  • android
  • ios