ರಾಷ್ಟ್ರೀಯ ಜನತಾ ದಳ (RJD) ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್(Lalu prasad Yadav) ಅವರ ಆರೋಗ್ಯ ಏಕಾಏಕಿ ಹದಗೆಟ್ಟಿದ್ದು, ಅವರನ್ನು ಪಾಟ್ನಾದ ಇಂದಿರಾ ಗಾಂಧಿ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (IGIMS) ಆಸ್ಪತ್ರೆಗೆ ದಾಖಲಿಸಲಾಗಿದೆ

ಪಾಟ್ನಾ (ಜು.17): ರಾಷ್ಟ್ರೀಯ ಜನತಾ ದಳ (RJD) ಮುಖ್ಯಸ್ಥ ಹಾಗೂ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್(Lalu prasad Yadav) ಅವರ ಆರೋಗ್ಯ ಏಕಾಏಕಿ ಹದಗೆಟ್ಟಿದ್ದು, ಅವರನ್ನು ಪಾಟ್ನಾದ ಇಂದಿರಾ ಗಾಂಧಿ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (IGIMS) ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎಬಿಪಿ ನ್ಯೂಸ್ ವರದಿ ಮಾಡಿದೆ.

ಲಾಲು ಯಾದವ್ ಆರೋಗ್ಯ ಸ್ಥಿತಿ

ಲಾಲು ಯಾದವ್ ಅವರ ಆರೋಗ್ಯದಲ್ಲಿ ಏಕಾಏಕಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ಮತ್ತು ಪಕ್ಷದ ನಾಯಕರು ಅವರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಲಾಲು ಯಾದವ್ ಆಸ್ಪತ್ರೆಗೆ ದಾಖಲಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಆರ್‌ಜೆಡಿ ಕಾರ್ಯಕರ್ತರು ಹಾಗೂ ಬೆಂಬಲಿಗರಲ್ಲಿ ಆತಂಕ ಮನೆ ಮಾಡಿದೆ. ಅವರ ಆರೋಗ್ಯ ಸ್ಥಿತಿಯ ಕುರಿತು ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಆಸ್ಪತ್ರೆ ಅಧಿಕೃತ ವೈದ್ಯಕೀಯ ಬುಲೆಟಿನ್ ಬಿಡುಗಡೆ ಮಾಡುವ ಸಾಧ್ಯತೆ ಇದೆ.

ಲಾಲು ಯಾದವ್‌ಗೆ ಹಲವಾರು ಆರೋಗ್ಯ ಸಮಸ್ಯೆ

ಲಾಲು ಪ್ರಸಾದ್ ಯಾದವ್ ವಯೋಸಹಜ ಕಾಯಿಲೆಗಳಲ್ಲದೆ ದೀರ್ಘಕಾಲದಿಂದಲೂ ಹಲವಾರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು, ಈ ಹಿಂದೆ ಮೂತ್ರಪಿಂಡ ಕಸಿ ಚಿಕಿತ್ಸೆಗೆ ಒಳಗಾಗಿದ್ದರು. ಇದರೊಂದಿಗೆ ರಕ್ತದಲ್ಲಿನ ಸಕ್ಕರೆ ಪ್ರಮಾಣವು ಆಗಾಗ ಏರಿಳಿಗೊಳ್ಳುತ್ತಿದೆ. ಹೀಗಾಗಿ ಆರೋಗ್ಯ ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.