Asianet Suvarna News Asianet Suvarna News

ನೀತಿ ಸಂಹಿತೆ ಜಾರಿಯಲ್ಲಿದೆ: ಸರ್ಕಾರಿ ನೌಕರರಿಗೆ ರಾಜ್ಯ ಗಿಫ್ಟ್ ನೀಡಿದೆ!

ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ| ಮಹತ್ವದ ಆದೇಶ ಹೊರಡಿಸಿದ ರಾಜ್ಯ ಸರ್ಕಾರ| ಚುನಾವಣೆ ನೀತಿ ಸಂಹಿತೆ ಜಾರಿ ನಡುವೆಯೂ ಆದೇಶ| 2018ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ವೇತನ ಹೆಚ್ಚಳ| 1 ನೇ ಜನೆವರಿ 2019ರಿಂದ ಜಾರಿಗೆ ಬರುವಂತೆ ವೇತನ ಹೆಚ್ಚಳದ ಆದೇಶ| ಮೂಲ ವೇತನ ಶೇ 3.75ರಿಂದ ಶೇ 6.50ಗೆ ಹೆಚ್ಚಿಸಿ ಸರ್ಕಾರದ ಆದೇಶ|

Salary Hiked For Govt  Employees Amid Election Code of Conduct
Author
Bengaluru, First Published Mar 28, 2019, 5:26 PM IST

ಬೆಂಗಳೂರು(ಮಾ.28): ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಚುನಾವಣೆ ನೀತಿ ಸಂಹಿತೆ ಜಾರಿ ಇರುವಾಗ ರಾಜ್ಯ ಸರ್ಕಾರಿ ನೌಕರರಿಗೆ 2018ರ ಪರಿಷ್ಕೃತ ವೇತನ ಶ್ರೇಣಿಯಲ್ಲಿ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ.

1 ನೇ ಜನೆವರಿ 2019ರಿಂದ ಜಾರಿಗೆ ಬರುವಂತೆ ವೇತನ ಹೆಚ್ಚಳದ ಆದೇಶ ಹೊರಡಿಸಲಾಗಿದ್ದು, ತುಟ್ಟಿಭತ್ಯೆಯ ಮೂಲ ವೇತನ ಶೇ 3.75ರಿಂದ ಶೇ 6.50ಗೆ ಹೆಚ್ಚಿಸಿ ಸರ್ಕಾರದ ಆದೇಶ ಹೊರಡಿಸಿದೆ.

ಸರ್ಕಾರದ ಮತ್ತು ಜಿಲ್ಲಾ ಪಂಚಾಯ್ತಿ ಪೂರ್ಣ ನೌಕರರಿಗೆ ಮತ್ತು ಅರೆಕಾಲಿಕ ನೌಕರಿ ವೇತನ ಶ್ರೇಣಿಯಲ್ಲಿರುವ, ಪೂರ್ಣ ಅವಧಿ ವರ್ಕ್ ಚಾರ್ಜ್ ನೌಕರರಿಗೆ ಹಾಗು ಸರ್ಕಾರದಿಂದ ಸಹಾಯಧನ ಪಡೆಯುತ್ತಿರುವ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ವಿಶ್ವವಿದ್ಯಾಲಯದಲ್ಲಿ ಅರೆಕಾಲಿಕ ವೇತನ ಶ್ರೇಣಿಗಳಲ್ಲಿರುವ ಪೂರ್ಣಾವಧಿ ನೌಕರುಗಳಿಗೆ ಈ ಆದೇಶ ಅನ್ವಯವಾಗಲಿದೆ.

ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವಾಗ ಈ ಆದೇಶ ಹೊರಡಿಸಲಾಗಿದ್ದು, ಇದು ವಿವಾದಕ್ಕೀಡಾಗುವ ಸಾಧ್ಯತೆ ಎಂಬ ಮಾತುಗಳೂ ಕೇಳಿ ಬರುತ್ತಿವೆ.

Follow Us:
Download App:
  • android
  • ios