ಜಿಎಸ್‌ಟಿಯಿಂದ ಸ್ಯಾನಿಟರಿ ನ್ಯಾಪ್ಕಿನ್ ಔಟ್!

Sanitary Napkins Now Exempt From GST After Year-Long Opposition READ IN
Highlights

ಸ್ಯಾನಿಟರಿ ನ್ಯಾಪ್ಕಿನ್ ಗಳಿಗೆ ಜಿಎಎಸ್ ಟಿ ವಿನಾಯ್ತಿ

ಮಹತ್ವದ ನಿರ್ಧಾರ ಪ್ರಕಟಿಸಿದ ಕೇಂದ್ರ ಸರ್ಕಾರ

ಜಿಎಸ್‌ಟಿಯ 28 ನೇ ಸಭೆಯಲ್ಲಿ ನಿರ್ಧಾರ

ಸ್ಯಾನಿಟರಿ ನ್ಯಾಪ್ಕಿನ್ ಜಿಎಸ್‌ಟಿ ವ್ಯಾಪ್ತಿಯಿಂದ ಹೊರಗೆ

ನವದೆಹಲಿ(ಜು.21): ಮಹತ್ವದ ಬೆಳವಣಿಗೆಯೊಂದರಲ್ಲಿ ಸ್ಯಾನಿಟರಿ ನ್ಯಾಪ್ಕಿನ್ ಮೇಲಿನ ತೆರಿಗೆಯನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ. ಸ್ಯಾನಿಟರಿ ನ್ಯಾಪ್ಕಿನ್ ಮೇಲಿನ ತೆರಿಗೆಯ ನಿರ್ಧಾರಕ್ಕೆ ದೇಶಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿತ್ತು.

ಜಿಎಸ್‌ಟಿಯ 28 ನೇ ಸಭೆಯಲ್ಲಿ ಈ ಪ್ರಮುಖ ನಿರ್ಧಾರ ಕೈಗೊಳ್ಳಲಾಗಿದ್ದು, ಮಹಿಳೆಯರು ಬಳಸುವ ಸ್ಯಾನಿಟರಿ ನ್ಯಾಪ್ಕಿನ್ ನ್ನು ಜಿಎಸ್‌ಟಿ ವ್ಯಾಪ್ತಿಯಿಂದ ಹೊರಗಿಡಲು ನಿರ್ಧರಿಸಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ದೆಹಲಿ ಡಿಸಿಎಂ ಮನೀಶ್ ಸಿಸೋಡಿಯಾ, ದೇಶದ ಮಹಿಳೆಯರ ಬೇಡಿಕೆಗೆ ಸರ್ಕಾರ ಸ್ಪಂದಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು. 

ಈ ಹಿಂದೆ ಸ್ಯಾನಿಟರಿ ನ್ಯಾಪ್ಕಿನ್ಸ್‌ಗೆ ಶೇ.12 ರಷ್ಟು ಜಿಎಸ್ ಟಿ ವಿಧಿಸಲಾಗುತ್ತಿತ್ತು. ಕೇಂದ್ರ ಸರ್ಕಾರದ ಈ ನಿರ್ಧಾರ ಮಹಿಳೆಯರ ಕೆಂಗಣ್ಣಿಗೆ ಗುರಿಯಾಗಿ ತೀವ್ರ ವಿರೋಧ ವ್ಯಕ್ತವಾಗಿತ್ತು.

loader