ಎಸ್‌ಬಿಐನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ! ಡೆಪ್ಯೂಟಿ ಮ್ಯಾನೇಜರ್ (ಭದ್ರತೆ), ಫೈರ್ ಆಫೀಸರ್! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆ.೨೪

ಬೆಂಗಳೂರು(ಸೆ.8): ಸರ್ಕಾರಿ ಸ್ವಾಮ್ಯದ ಭಾರತೀಯ ಸ್ಟೇಟ್ ಬ್ಯಾಂಕ್ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ವಿಶೇಷ ಕೆಡರ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಜಿರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆ. 24 ಎಂದು ಸ್ಪಷ್ಟಪಡಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಒಟ್ಟು 48 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಡೆಪ್ಯೂಟಿ ಮ್ಯಾನೇಜರ್ (ಭದ್ರತೆ)-27 ಮತ್ತು ಫೈರ್ ಆಫಿಸರ್-21 ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಆಸಕ್ತರು ಎಸ್‌ಬಿಐ ನ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ಕೊಟ್ಟು ಸೆ.24ರೊಳಗಾಗಿ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ದೇಶದ ಯಾವುದಾದರೂ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಸೇನೆ ಅಥವಾ ಪೊಲೀಸ್ ಇಲಾಖೆಯಲ್ಲಿ ಡಿವೈಎಸ್ ಪಿ ದರ್ಜೆಯ ಅಧಿಕಾರಿಯಾಗಿ ಕನಿಷ್ಟ 5 ವರ್ಷ ಸೇವೆ ಸಲ್ಲಿಸಿರಬೇಕು. ಅಥವಾ ಅರೆಸೇನಾ ಪಡೆಗಳಲ್ಲಿ ಕನಿಷ್ಟ 5 ವರ್ಷ ಸೇವೆ ಸಲ್ಲಿಸಿರಬೇಕು.