ಬೆಂಗಳೂರಿನಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಭೂಮಿಗೆ ಹೆಚ್ಚಿನ ಬೇಡಿಕೆಯಿದೆ. ಆದರೆ, ಬೆಂಗಳೂರು ಹೊರತುಪಡಿಸಿ ಬೇರೆ ನಗರ, ಜಿಲ್ಲೆಗಳಲ್ಲಿ ಕೈಗಾರಿಕೆ ಸ್ಥಾಪನೆಗೆ ಕೈಗಾರಿಕೋದ್ಯಮಿಗಳಲ್ಲಿ ಮನವಿ ಮಾಡಿಕೊಳ್ಳಲಾಗುವುದು. ಪ್ರಮುಖವಾಗಿ ಹುಬ್ಬಳ್ಳಿ, ವಿಜಯಪುರ, ಬಾಗಲಕೋಟೆ ಕಡೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಅವಕಾಶ ಕಲ್ಪಿಸಲಾಗುವುದು ಹಾಗೂ ಅದಕ್ಕೆ ಬೇಕಾದ ಎಲ್ಲ ನೆರವನ್ನೂ ಸರ್ಕಾರ ನೀಡಲಿದೆ: ಎಂ.ಬಿ.ಪಾಟೀಲ್
ಬೆಂಗಳೂರು(ಜೂ.14): ರಾಜ್ಯದಲ್ಲಿ ಕೈಗಾರಿಕಾ ವಲಯಗಳ ಅಭಿವೃದ್ಧಿಗೆ ಪ್ರತ್ಯೇಕ ವಿಷನ್ ಗ್ರೂಪ್ ರಚನೆ ಮಾಡುವ ಕುರಿತು ಚಿಂತನೆ ನಡೆಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಂಗಳವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಇಲಾಖೆ ಅಧೀನದಲ್ಲಿನ ವಿವಿಧ ನಿಗಮ ಮತ್ತು ಪ್ರಾಧಿಕಾರಗಳ ಸಭೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿನ ಕೈಗಾರಿಕಾ ವಲಯಗಳಲ್ಲಿ 7 ಸೆಕ್ಟರ್‌ಗಳನ್ನು ಗುರುತಿಸಲಾಗಿದೆ. ಅವುಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಹೊಸದಾಗಿ ವಿಷನ್ ಗ್ರೂಪ್ ರಚಿಸಿ, ಅದರ ಮೂಲಕ ಯೋಜನೆ ರೂಪಿಸಲಾಗುವುದು ಎಂದರು.
ಕೈಗಾರಿಕೆಗಳ ಅಭಿವೃದ್ಧಿಗೆ ಪೂರಕವಾಗಿ ಹಾಲಿ ಇರುವ ಕೈಗಾರಿಕಾ ನೀತಿಯಲ್ಲೂ ಬದಲಾವಣೆ ತರುವ ಉದ್ದೇಶವಿದೆ. ಕೈಗಾರಿಕೆಗಳ ಬೆಳವಣಿಗೆಗಳ ಅಗತ್ಯಕ್ಕೆ ತಕ್ಕಂತೆ ನೀತಿಯಲ್ಲಿನ ಕೆಲ ಅಂಶಗಳನ್ನು ತೆಗೆದು, ಹೊಸದಾಗಿ ಕೆಲ ಅಂಶಗಳನ್ನು ಸೇರ್ಪಡೆ ಮಾಡಲಾಗುವುದು ಎಂದು ಹೇಳಿದರು.
ಕನ್ನಡಿಗರಿಗೆ ಫೋನ್‌ಪೇ ಬಂಪರ್ ಕೊಡುಗೆ, ಪ್ರಾದೇಶಿಕ ಭಾಷೆಯಲ್ಲಿ ಪಾವತಿ ನೋಟಿಫಿಕೇಶನ್ ಆರಂಭ!
ಬೆಂಗಳೂರಿನಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಭೂಮಿಗೆ ಹೆಚ್ಚಿನ ಬೇಡಿಕೆಯಿದೆ. ಆದರೆ, ಬೆಂಗಳೂರು ಹೊರತುಪಡಿಸಿ ಬೇರೆ ನಗರ, ಜಿಲ್ಲೆಗಳಲ್ಲಿ ಕೈಗಾರಿಕೆ ಸ್ಥಾಪನೆಗೆ ಕೈಗಾರಿಕೋದ್ಯಮಿಗಳಲ್ಲಿ ಮನವಿ ಮಾಡಿಕೊಳ್ಳಲಾಗುವುದು. ಪ್ರಮುಖವಾಗಿ ಹುಬ್ಬಳ್ಳಿ, ವಿಜಯಪುರ, ಬಾಗಲಕೋಟೆ ಕಡೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಅವಕಾಶ ಕಲ್ಪಿಸಲಾಗುವುದು ಹಾಗೂ ಅದಕ್ಕೆ ಬೇಕಾದ ಎಲ್ಲ ನೆರವನ್ನೂ ಸರ್ಕಾರ ನೀಡಲಿದೆ ಎಂದು ತಿಳಿಸಿದರು.
ಉಪನಗರ ರೈಲು ವಿಸ್ತರಣೆ:
ಉಪನಗರ ರೈಲು ಯೋಜನೆ ವಿಸ್ತರಣೆ ಮಾಡುವ ಕುರಿತಂತೆ ಮೂಲಸೌಕರ್ಯ ಇಲಾಖೆ ಅಧಿಕಾರಿಗಳ ಜತೆಗೆ ಚರ್ಚಿಸಲಾಗಿದೆ. ಮೈಸೂರು ಮತ್ತು ದಾಬಸ್‌ಪೇಟೆ ಸೇರಿದಂತೆ ವಿವಿಧ ಕಡೆಗಳಿಗೆ ಯೋಜನೆಯ ಮಾರ್ಗ ವಿಸ್ತರಿಸಲು ನಿರ್ಧರಿಸಲಾಗಿದೆ. ಎರಡು ಹಂತಗಳಲ್ಲಿ ವಿಸ್ತರಣೆ ಯೋಜನೆ ಅನುಷ್ಠಾನಗೊಳಿಸಲಾಗುವುದು ಎಂದು ಎಂ.ಬಿ.ಪಾಟೀಲ್ ತಿಳಿಸಿದರು.
Zomato ನೂತನ ಜಾಹೀರಾತಿನಲ್ಲಿ ದಲಿತರಿಗೆ ನಿಂದನೆ, ರಾಷ್ಟ್ರೀಯ ಆಯೋಗದಿಂದ ನೋಟಿಸ್!
ಚಾಣಕ್ಯ ವಿವಿ ಭೂಮಿ ಸದ್ಯಕ್ಕೆ ಹಿಂಪಡೆಯಲ್ಲ
ಚಾಣಕ್ಯ ವಿಶ್ವವಿದ್ಯಾಲಯಕ್ಕೆ ಹಿಂದಿನ ಬಿಜೆಪಿ ಸರ್ಕಾರ ಕೆಐಎಡಿಬಿ ಮೂಲಕ ನೀಡಿರುವ ಭೂಮಿಯನ್ನು ವಾಪಸ್ ಪಡೆಯುವ ವಿಚಾರ ಸದ್ಯಕ್ಕೆ ನಮ್ಮ ಮುಂದಿಲ್ಲ. ಆದರೆ, ಹಿಂದಿನ ಸರ್ಕಾರದ ಅವಧಿಯಲ್ಲಿ ಭೂಮಿ ಪಡೆದು ದುರ್ಬಳಕೆ ಮಾಡಿಕೊಂಡಿರುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಪ್ರತಿಯೊಂದು ಭೂಮಿ ಹಂಚಿಕೆಯನ್ನೂ ಪರಿಶೀಲಿಸಲಾಗುವುದು. ಯಾವುದೇ ಜಾಗ ಕೊಟ್ಟಉದ್ದೇಶಕ್ಕೆ ಬಳಕೆಯಾಗದಿದ್ದರೆ ವಾಪಸ್ ಪಡೆಯಲಾಗುವುದು. ಅಂತಿಮವಾಗಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಸಚಿವ ಸಂಪುಟ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದರು.
ಶೆಟ್ಟರ್‌ಗೆ ಸೂಕ್ತ ಸ್ಥಾನಮಾನ
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ನೀಡಲಾಗುವುದು. ಅವರು ಪಕ್ಷಕ್ಕೆ ಬರುವಾಗಲೇ ಗೌರವಯುತವಾಗಿ ನಡೆಸಿಕೊಳ್ಳಿ ಎಂದು ಹೇಳಿದ್ದರು. ಅದಕ್ಕೆ ತಕ್ಕಂತೆ ನಾವು ಅವರಿಗೆ ಸೂಕ್ತ ಸ್ಥಾನಮಾನ ನೀಡುತ್ತೇವೆ. ಪಕ್ಷದ ಹೈಕಮಾಂಡ್ ಎಲ್ಲವನ್ನೂ ಗಮನಿಸಿದೆ. ಸಮಯ ಬಂದಾಗ ಅವರಿಗೆ ಉತ್ತಮ ಸ್ಥಾನ ದೊರೆಯಲಿದೆ ಎಂದು ಎಂ.ಬಿ.ಪಾಟೀಲ್ ಹೇಳಿದರು.
