ಮುಂಬೈ(ಸೆ.04): ದೇಶದ ಅರ್ಥ ವ್ಯವಸ್ಥೆ ಹಳಿ ತಪ್ಪಿದ್ದು, ಈ ಕುರಿತು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನೀಡಿರುವ ಸಲಹೆಗಳನ್ನು ಸ್ವೀಕರಿಸುವಂತೆ ಕೇಂದ್ರ ಸರ್ಕಾರಕ್ಕೆ ಮಿತ್ರಪಕ್ಷ ಶಿವಸೇನೆ ಸಲಹೆ ನೀಡಿದೆ.

ಈ ಕುರಿತು ಪಕ್ಷದ ಮುಖವಾಣಿ ಸಾಮ್ನಾದಲ್ಲಿ ಸಂಪದಕೀಯ ಬರೆಯಲಾಗಿದ್ದು, ಅರ್ಥ ವ್ಯವಸ್ಥೆ ಸುಧಾರಣೆಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನೀಡಿರುವ ಸಲಹೆಗಳು ಅಮೂಲ್ಯವಾದವು ಎಂದು ಶಿವಸೇನೆ ಅಭಿಪ್ರಾಯಪಟ್ಟಿದೆ.

ಭವಿಷ್ಯದಲ್ಲಿ ಆರ್ಥಿಕ ಪರಿಸ್ಥಿತಿ ಮತ್ತಷ್ಟು ಹದಗೆಡಲಿದೆ ಎಂಬ ಡಾ. ಸಿಂಗ್ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿರುವ ಶಿವಸೇನೆ, ಅವರು ನೀಡಿರುವ ಸಲಹೆಗಳನ್ನು ಸ್ವೀಕರಿಸುವಂತೆ ಮೋದಿ ಸರ್ಕಾರಕ್ಕೆ ಮನವಿ ಮಾಡಿದೆ.

ದೇಶದ ಆರ್ಥಿಕ ಕ್ಷೇತ್ರದ ಕುಸಿತಕ್ಕೆ ತೀವ್ರ ಕುಸಿತಕ್ಕೆ ಕಳವಳ ವ್ಯಕ್ತಪಡಿಸಿದ್ದ ಡಾ. ಸಿಂಗ್, ತಪ್ಪು ಆರ್ಥಿಕ ನೀತಿಗಳೇ ಈ ಕುಸಿತಕ್ಕೆ ಕಾರಣ ಎಂದು ಮೋದಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದರು. ಅಲ್ಲದೇ ರಾಜಕೀಯ ಹಗೆತನ ಬದಿಗಿರಿಸಿ ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದ್ದರು.