Asianet Suvarna News Asianet Suvarna News

ಸಾವರಿನ್ ಗೋಲ್ಡ್ ಬಾಂಡ್ ನಾಲ್ಕನೇ ಸರಣಿ ಇಂದಿನಿಂದ ಪ್ರಾರಂಭ; ಆನ್ ಲೈನ್ ಖರೀದಿ ಹೇಗೆ? ಇಲ್ಲಿದೆ ಮಾಹಿತಿ

ಸಾವರಿನ್ ಗೋಲ್ಡ್ ಬಾಂಡ್ ನಾಲ್ಕನೇ ಸರಣಿ ಚಂದಾದಾರಿಕೆ ಇಂದಿನಿಂದ ಫೆ.16 ತನಕ ನಡೆಯಲಿದೆ. ಬೆಲೆ, ಖರೀದಿ, ಬಡ್ಡಿ ಮಾಹಿತಿ ಇಲ್ಲಿದೆ. 

Sovereign Gold Bond 2024 Opens Today Step By Step Guide To Buy SGBs Online anu
Author
First Published Feb 12, 2024, 3:46 PM IST

ನವದೆಹಲಿ (ಫೆ.12):  2023-24ನೇ  ಸಾಲಿನ ಸಾವರಿನ್ ಗೋಲ್ಡ್ ಬಾಂಡ್ ನಾಲ್ಕನೇ ಸರಣಿಯ ಚಂದಾದಾರಿಕೆ ಸೋಮವಾರದಿಂದ (ಫೆ.12) ಪ್ರಾರಂಭವಾಗಲಿದ್ದು, ಶುಕ್ರವಾರ (ಫೆ.16) ತನಕ ನಡೆಯಲಿದೆ. ಇನ್ನು ಸಾವರಿನ್ ಗೋಲ್ಡ್ ಬಾಂಡ್ ವಿತರಣೆ ಫೇ.21ರಂದು ನಡೆಯಲಿದೆ. ಸಾವರಿನ್ ಗೋಲ್ಡ್ ಬಾಂಡ್ ಅನ್ನು ಸರ್ಕಾರದ ಪರವಾಗಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ವಿತರಿಸುತ್ತದೆ. 2023-24ನೇ ಸಾಲಿನ ನಾಲ್ಕನೇ ಸರಣಿ  ಸಾವರಿನ್  ಗೋಲ್ಡ್ ಬಾಂಡ್ ವಿತರಣೆ ಬೆಲೆಯನ್ನು ಪ್ರತಿ ಗ್ರಾಂಗೆ 6,263 ರೂ.ಗೆ ನಿಗದಿಪಡಿಸಲಾಗಿದೆ.ಇನ್ನು ಸಾವರಿನ್  ಗೋಲ್ಡ್ ಬಾಂಡ್ ಗೆ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹಾಗೂ ಡಿಜಿಟಲ್ ಪಾವತಿ ಮಾಡುವ ಹೂಡಿಕೆದಾರರಿಗೆ ಪ್ರತಿ ಗ್ರಾಂಗೆ 50ರೂ. ಡಿಸ್ಕೌಂಟ್ ಸಿಗಲಿದೆ.  ಅಂದರೆ ಈ ಹೂಡಿಕೆದಾರರು ಪ್ರತಿ ಗ್ರಾಂ ಚಿನ್ನವನ್ನು  6,149 ರೂ. ವಿತರಣಾ ಬೆಲೆಗೆ ಖರೀದಿಸಬಹುದು. ಒಬ್ಬ ವ್ಯಕ್ತಿ ಅಥವಾ ಹಿಂದೂ ಅವಿಭಕ್ತ ಕುಟುಂಬ ವಾರ್ಷಿಕ ಗರಿಷ್ಠ 4ಕೆ.ಜಿ.ಮೌಲ್ಯದ ಸಾವರಿನ್ ಗೋಲ್ಡ್ ಬಾಂಡ್ ಖರೀದಿಸಬಹುದು. ಟ್ರಸ್ಟ್ ಹಾಗೂ ಅದೇ ಮಾದರಿಯ ಇತರ ಸಂಸ್ಥೆಗಳು ಗರಿಷ್ಠ 20ಕೆ.ಜಿ  ಸಾವರಿನ್ ಗೋಲ್ಡ್ ಬಾಂಡ್ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ. ಕನಿಷ್ಠ 1ಗ್ರಾಂ ಚಿನ್ನವಾದ್ರೂ ಖರೀದಿಸಬೇಕು. ಅದಕ್ಕೆ ಕಡಿಮೆ ಚಿನ್ನ ಖರೀದಿಸಲು ಅವಕಾಶವಿಲ್ಲ.  

ಸಾವರಿನ್ ಗೋಲ್ಡ್ ಬಾಂಡ್ ಅಂದ್ರೇನು?
ಸಾವರಿನ್ ಗೋಲ್ಡ್ ಬಾಂಡ್ ಯೋಜನೆ  ಕೇಂದ್ರ ಸರ್ಕಾರದ ಒಂದು ಯೋಜನೆಯಾಗಿದ್ದು, ಇದು ಭೌತಿಕವಲ್ಲದ ಚಿನ್ನದ ಮೇಲೆ ಹೂಡಿಕೆ (Invest) ಮಾಡಲು ಅವಕಾಶ ಕಲ್ಪಿಸುತ್ತದೆ. ಅಂದರೆ ಚಿನ್ನದ ಗಟ್ಟಿ, ನಾಣ್ಯ ಅಥವಾ ಆಭರಣಗಳ ಮೇಲೆ ಹೂಡಿಕೆ ಮಾಡೋ ಬದಲು ಭೌತಿಕ ಸ್ವರೂಪದಲ್ಲಿರದ ಚಿನ್ನದ ಮೇಲೆ ಹೂಡಿಕೆ ಮಾಡೋದು. ಭೌತಿಕ ಚಿನ್ನದ ಬೇಡಿಕೆಯನ್ನು ತಗ್ಗಿಸೋ ಜೊತೆಗೆ ಸ್ವ ಉಳಿತಾಯದ ಒಂದು ಭಾಗವನ್ನು ಆರ್ಥಿಕ ಉಳಿತಾಯವಾಗಿ ಬದಲಾಯಿಸೋ ಉದ್ದೇಶದಿಂದ ಕೇಂದ್ರ ಸರ್ಕಾರ  2015ರ ನವೆಂಬರ್​ನಲ್ಲಿಸಾವರಿನ್ ಗೋಲ್ಡ್ ಬಾಂಡ್ ಯೋಜನೆಯನ್ನು ಪ್ರಾರಂಭಿಸಿತು. ಸರ್ಕಾರದ ಪರವಾಗಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ಈ ಬಾಂಡ್ ಗಳನ್ನು ವಿತರಿಸುತ್ತದೆ. 

ಸಾವರಿನ್ ಗೋಲ್ಡ್ ಬಾಂಡ್ ಅವಧಿಪೂರ್ವ ವಿತ್ ಡ್ರಾಗೆ ಅವಕಾಶ; ವೇಳಾಪಟ್ಟಿ ಬಿಡುಗಡೆ ಮಾಡಿದ ಆರ್ ಬಿಐ

ಯಾರು ಖರೀದಿಸಬಹುದು?
ಭಾರತದಲ್ಲಿ ವಾಸಿಸುವ ವ್ಯಕ್ತಿಗಳು, ಅವಿಭಜಿತ ಹಿಂದೂ ಕುಟುಂಬಗಳು, ಟ್ರಸ್ಟ್‌ಗಳು, ವಿಶ್ವವಿದ್ಯಾಲಯಗಳು ಮತ್ತು ದತ್ತಿ ಸಂಸ್ಥೆಗಳು ಸಾವರಿನ್ ಗೋಲ್ಡ್ ಬಾಂಡ್ ಗಳನ್ನು ಖರೀದಿಸಬಹುದು ಎಂದು ಆರ್ ಬಿಐ ತಿಳಿಸಿದೆ.

ಬಡ್ಡಿ ಎಷ್ಟು? 
ಸಾವರಿನ್ ಗೋಲ್ಡ್ ಬಾಂಡ್ ಮೇಲೆ ಹೂಡಿಕೆದಾರರು ವಾರ್ಷಿಕ ಶೇ.2.5 ರಷ್ಟು ಬಡ್ಡಿ (Interest) ಗಳಿಸಲಿದ್ದಾರೆ.  6 ತಿಂಗಳಿಗೊಮ್ಮೆ ಬಡ್ಡಿ ಪಾವತಿಸಲಾಗುತ್ತದೆ. ಈ ಯೋಜನೆಯಲ್ಲಿ ಕ್ಯಾಪಿಟಲ್ ಗೇನ್ಸ್ (Capital gains) ತೆರಿಗೆ ವಿನಾಯಿತಿಯೂ ಲಭ್ಯವಿದೆ. ಈ ಯೋಜನೆಯಡಿ ಚಿನ್ನವನ್ನು ಖರೀದಿಸಲು ಯಾವುದೇ ಜಿಎಸ್‌ಟಿ (GST) ಮತ್ತು ಮೇಕಿಂಗ್ ಶುಲ್ಕಗಳನ್ನು (Making Charges) ವಿಧಿಸಲಾಗೋದಿಲ್ಲ.

ಅವಧಿ ಎಷ್ಟು?
ಸಾವರಿನ್ ಗೋಲ್ಡ್ ಬಾಂಡ್ ಗಳು ಎಂಟು ವರ್ಷಗಳ ಅವಧಿಯದ್ದಾಗಿವೆ. ಆದರೆ, ಐದು ವರ್ಷಗಳ ಬಳಿ ಅವಧಿಗೂ ಮುನ್ನ ವಿತ್ ಡ್ರಾ ಮಾಡಲು ಅವಕಾಶವಿದೆ. 

ಎಲ್ಲಿ ಸಿಗುತ್ತೆ?
ಆರ್ ಬಿಐ ನೀಡಿರುವ ಮಾಹಿತಿ ಪ್ರಕಾರ ಸಾವರಿನ್ ಗೋಲ್ಡ್ ಬಾಂಡ್ ಗಳನ್ನು ಸಾರ್ವಜನಿಕ ವಲಯದ ಬ್ಯಾಂಕ್ ಗಳು, ವಾಣಿಜ್ಯ ಬ್ಯಾಂಕ್ ಗಳು, ಸ್ಟಾಕ್ ಹೋಲ್ಡಿಂಗ್ ಕಾರ್ಪೋರೇಷನ್ ಆಫ್ ಇಂಡಿಯಾ  (SHCIL),ಕ್ಲಿಯರಿಂಗ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ (CCIL),ಅಂಚೆ ಕಚೇರಿಗಳು ಹಾಗೂ ಸ್ಟಾಕ್ ಎಕ್ಸ್ ಚೇಂಜ್ ಗಳು, ಎನ್ ಎಸ್ ಇ ಹಾಗೂ ಬಿಎಸ್ ಇ ಮೂಲಕ ಸಾವರಿನ್ ಗೋಲ್ಡ್ ಬಾಂಡ್ ಗಳನ್ನು ಮಾರಾಟ ಮಾಡಲಾಗುತ್ತಿದೆ. 

ಡಿಜಿಟಲ್ ಚಿನ್ನದ ಮೇಲೆ ಹೂಡಿಕೆ ಮಾಡ್ತಿದ್ದೀರಾ? ಸಾವರಿನ್ ಗೋಲ್ಡ್ ಬಾಂಡ್ ಅಥವಾ ಚಿನ್ನದ ಇಟಿಎಫ್, ಯಾವುದು ಉತ್ತಮ?

ಆನ್ ಲೈನ್ ನಲ್ಲಿ ಖರೀದಿ ಹೇಗೆ?
ಹಂತ 1: ನಿಮ್ಮ ನೆಟ್ ಬ್ಯಾಂಕಿಂಗ್ ಖಾತೆಗೆ ಲಾಗಿನ್ ಆಗಿ.
ಹಂತ 2: 'eServices'ವಿಭಾಗಕ್ಕೆ ತೆರಳಿ ಹಾಗೂ 'Sovereign Gold Bond' ಆಯ್ಕೆ ಮಾಡಿ.
ಹಂತ 3: ನೀಡಿರುವ ನಿಯಮಗಳು ಹಾಗೂ ಷರತ್ತುಗಳನ್ನು ಪರಿಷ್ಕರಿಸಿ. ಆ ಬಳಿಕ 'Proceed'ಆಯ್ಕೆ ಮಾಡಿ.
ಹಂತ 4: ನೋಂದಣಿ ಅರ್ಜಿಯನ್ನು ಅಗತ್ಯ ಮಾಹಿತಿಗಳೊಂದಿಗೆ ಭರ್ತಿ ಮಾಡಿ ಹಾಗೂ 'Submit'ಮೇಲೆ ಕ್ಲಿಕ್ ಮಾಡಿ.
ಹಂತ 5: ಖರೀದಿ ಅರ್ಜಿಯಲ್ಲಿ ಚಂದಾದಾರಿಕೆ ಪ್ರಮಾಣ ನಮೂದಿಸಿ. ನಾಮನಿರ್ದೇಶನದ ಮಾಹಿತಿ ನೀಡಿ.
ಹಂತ 6: ಅಗತ್ಯ ಮಾಹಿತಿಗಳನ್ನು ನೀಡಿದ ಬಳಿಕ ಖರೀದಿ ಮುಂದುವರಿಸಲು 'Submit'ಆಯ್ಕೆ ಮಾಡಿ. 
 

Follow Us:
Download App:
  • android
  • ios