Sovereign Gold Bond:ಚಿನ್ನದ ಮೇಲಿನ ಹೂಡಿಕೆಗೆ ಒಳ್ಳೆಯ ಅವಕಾಶ; ಸೋಮವಾರ ಸಾವರಿನ್ ಗೋಲ್ಡ್ ಬಾಂಡ್ ಬಿಡುಗಡೆ

ನೀವು ಚಿನ್ನದ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿದ್ರೆ, ನಿಮಗೊಂದು ಸದಾವಕಾಶ. 2022-23ನೇ ಸಾಲಿನ ಸಾವರಿನ್ ಗೋಲ್ಡ್ ಬಾಂಡ್ ಯೋಜನೆಯ ಮೊದಲ ಸರಣಿಯ ಚಂದಾದಾರಿಕೆಗೆ ಸೋಮವಾರದಿಂದ 5 ದಿನಗಳ ಕಾಲ ಅವಕಾಶ ಕಲ್ಪಿಸಲಾಗಿದೆ. ಖರೀದಿ ಹೇಗೆ? ಬಡ್ಡಿ ಎಷ್ಟಿದೆ? ಇಲ್ಲಿದೆ ಮಾಹಿತಿ.

Sovereign Gold Bond scheme opens on June 20 Issue price other details here

ನವದೆಹಲಿ (ಜೂ.18): 2022-23ನೇ ಸಾಲಿನ ಸಾವರಿನ್ ಗೋಲ್ಡ್ ಬಾಂಡ್ ಯೋಜನೆಯ (Sovereign Gold Bond Scheme) ಮೊದಲ ಸರಣಿಯ (Series) ಚಂದಾದಾರಿಕೆ (subscription) ಸೋಮವಾರದಿಂದ (ಜೂ.20) ಪ್ರಾರಂಭವಾಗಲಿದೆ. ಜೂನ್ 24ರ ತನಕ ಒಟ್ಟು 5 ದಿನಗಳ ಕಾಲ ಚಂದಾದಾರಿಕೆಗೆ ಅವಕಾಶ ಕಲ್ಪಿಸಲಾಗಿದೆ. ಪ್ರತಿ ಗ್ರಾಂ ಚಿನ್ನಕ್ಕೆ 5,091ರೂ. ನಿಗದಿಪಡಿಸಲಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ತಿಳಿಸಿದೆ. ಹಾಗಾದ್ರೆ ಸಾವರಿನ್‌ ಗೋಲ್ಡ್‌ ಬಾಂಡ್‌ ಅಂದ್ರೇನು? ಹೂಡಿಕೆ ಹೇಗೆ? ಬಡ್ಡಿ ಎಷ್ಟು? ಇಲ್ಲಿದೆ ಮಾಹಿತಿ.

ಡಿಸ್ಕೌಂಟ್ ಸೌಲಭ್ಯ
ಸಾವರಿನ್ ಗೋಲ್ಡ್ ಬಾಂಡ್ ಯೋಜನೆಯಲ್ಲಿ ಪ್ರತಿ ಗ್ರಾಂ ಚಿನ್ನಕ್ಕೆ 5,091ರೂ. ನಿಗದಿಪಡಿಸಲಾಗಿದೆ. ಆದರೆ, ಕೇಂದ್ರ ಸರ್ಕಾರ ಆರ್ ಬಿಐಯೊಂದಿಗೆ ಚರ್ಚಿಸಿ ಆನ್ ಲೈನ್ ನಲ್ಲಿ ಚಂದಾದಾರಿಕೆಗೆ ಅರ್ಜಿ ಸಲ್ಲಿಸೋರಿಗೆ ಹಾಗೂ ಡಿಜಿಟಲ್ ಪಾವತಿ ಮಾಡೋರಿಗೆ ಪ್ರತಿ ಗ್ರಾಂ ಚಿನ್ನದ ಮೇಲೆ 50ರೂ. ಡಿಸ್ಕೌಂಟ್ ನೀಡಲು ಆರ್ ಬಿಐ ನಿರ್ಧರಿಸಲಾಗಿದೆ. ಹೀಗಾಗಿ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವ ಹೂಡಿಕೆದಾರರಿಗೆ ಸಾವರಿನ್ ಗೋಲ್ಡ್ ಬಾಂಡ್ ಪ್ರತಿ ಗ್ರಾಂ ಚಿನ್ನಕ್ಕೆ  5,041ರೂ.ಗೆ ದೊರಕಲಿದೆ ಎಂದು ಆರ್ ಬಿಐ ತಿಳಿಸಿದೆ. ಇನ್ನು 2022-23ನೇ ಸಾಲಿನ ಸಾವರಿನ್ ಗೋಲ್ಡ್ ಬಾಂಡ್ ಯೋಜನೆಯ ದ್ವಿತೀಯ ಸರಣಿಯ ಚಂದಾದಾರಿಕೆಗೆ ಆಗಸ್ಟ್ 22-26ರ ತನಕ ಅವಕಾಶ ನೀಡಲಾಗಿದೆ. 

New wage code: ಜುಲೈ 1 ರಿಂದ ಜಾರಿಯಾಗುವ ಹೊಸ ವೇತನ ಸಂಹಿತೆ ಏನು?

ಏನಿದು ಸಾವರಿನ್ ಗೋಲ್ಡ್ ಬಾಂಡ್ ಯೋಜನೆ?
ಸಾವರಿನ್ ಗೋಲ್ಡ್ ಬಾಂಡ್ ಯೋಜನೆ  ಕೇಂದ್ರ ಸರ್ಕಾರದ ಒಂದು ಯೋಜನೆಯಾಗಿದ್ದು, ಇದು ಭೌತಿಕವಲ್ಲದ ಚಿನ್ನದ ಮೇಲೆ ಹೂಡಿಕೆ (Invest)ಮಾಡಲು ಅವಕಾಶ ಕಲ್ಪಿಸುತ್ತದೆ. ಅಂದರೆ ಚಿನ್ನದ ಗಟ್ಟಿ, ನಾಣ್ಯ ಅಥವಾ ಆಭರಣಗಳ ಮೇಲೆ ಹೂಡಿಕೆ ಮಾಡೋ ಬದಲು ಭೌತಿಕ ಸ್ವರೂಪದಲ್ಲಿರದ ಚಿನ್ನದ ಮೇಲೆ ಹೂಡಿಕೆ ಮಾಡೋದು. ಭೌತಿಕ ಚಿನ್ನದ ಬೇಡಿಕೆಯನ್ನು ತಗ್ಗಿಸೋ ಜೊತೆಗೆ ಸ್ವ ಉಳಿತಾಯದ ಒಂದು ಭಾಗವನ್ನು ಆರ್ಥಿಕ ಉಳಿತಾಯವಾಗಿ ಬದಲಾಯಿಸೋ ಉದ್ದೇಶದಿಂದ ಕೇಂದ್ರ ಸರ್ಕಾರ  2015ರ ನವೆಂಬರ್​ನಲ್ಲಿಸಾವರಿನ್ ಗೋಲ್ಡ್ ಬಾಂಡ್ ಯೋಜನೆಯನ್ನು ಪ್ರಾರಂಭಿಸಿತು. ಸರ್ಕಾರದ ಪರವಾಗಿ ಭಾರತೀಯ ರಿಸರ್ವ್ ಬ್ಯಾಂಕ್ (RBI) ಈ ಬಾಂಡ್ ಗಳನ್ನು ವಿತರಿಸುತ್ತದೆ. 

ಬಡ್ಡಿ ಎಷ್ಟು? 
ಈ ಯೋಜನೆಯಲ್ಲಿ ಹೂಡಿಕೆದಾರರು ವಾರ್ಷಿಕ ಶೇ.2.5 ರಷ್ಟು ಬಡ್ಡಿ (Interest) ಗಳಿಸಲಿದ್ದಾರೆ.  6 ತಿಂಗಳಿಗೊಮ್ಮೆ ಬಡ್ಡಿ ಪಾವತಿಸಲಾಗುತ್ತದೆ. ಈ ಯೋಜನೆಯಲ್ಲಿ ಕ್ಯಾಪಿಟಲ್ ಗೇನ್ಸ್ (Capital gains)ತೆರಿಗೆ ವಿನಾಯಿತಿಯೂ ಲಭ್ಯವಿದೆ. ಈ ಯೋಜನೆಯಡಿ ಚಿನ್ನವನ್ನು ಖರೀದಿಸಲು ಯಾವುದೇ ಜಿಎಸ್‌ಟಿ (GST) ಮತ್ತು ಮೇಕಿಂಗ್ ಶುಲ್ಕಗಳನ್ನು (Making Charges) ವಿಧಿಸಲಾಗೋದಿಲ್ಲ.

ಎಷ್ಟು ಅವಧಿ?
ಸಾವರಿನ್ ಗೋಲ್ಡ್ ಬಾಂಡ್ ಯೋಜನೆ 8 ವರ್ಷಗಳ ಅವಧಿಯದ್ದಾಗಿದೆ. 5 ವರ್ಷದ ಬಳಿಕ ಬಡ್ಡಿಪಾವತಿ ದಿನಾಂಕಗಳಂದು ನಿರ್ಗಮನ ಆಯ್ಕೆಯನ್ನು ಆರಿಸಿಕೊಳ್ಳಬಹುದಾಗಿದೆ. ಹೂಡಿಕೆದಾರರು ಈ ಚಿನ್ನದ ಬಾಂಡ್ ಮೇಲೆ ಸಾಲ (Loan) ಪಡೆಯಲು ಕೂಡ ಅವಕಾಶವಿದೆ. 

Personal Finance: ಉಳಿತಾಯ ಖಾತೆ ಹೊಂದಿದ್ರೆ ಈ ವಿಷ್ಯ ಗಮನದಲ್ಲಿರಲಿ

ಎಷ್ಟು ಬಾಂಡ್ ಖರೀದಿಸಬಹುದು?
ಒಬ್ಬ ವ್ಯಕ್ತಿ  ಅಥವಾ ಹಿಂದೂ ಅವಿಭಕ್ತ ಕುಟುಂಬ ವಾರ್ಷಿಕ ಗರಿಷ್ಠ 4ಕೆ.ಜಿ.ಮೌಲ್ಯದ ಸಾವರಿನ್ ಗೋಲ್ಡ್ ಬಾಂಡ್ ಖರೀದಿಸಬಹುದು. ಟ್ರಸ್ಟ್ (Trust) ಹಾಗೂ ಅದೇ ಮಾದರಿಯ ಇತರ ಸಂಸ್ಥೆಗಳು ಗರಿಷ್ಠ 20ಕೆ.ಜಿ  ಸಾವರಿನ್ ಗೋಲ್ಡ್ ಬಾಂಡ್ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ. 

ಎಲ್ಲಿ ಖರೀದಿಸಬಹುದು?
ಹೂಡಿಕೆದಾರರು (Investors) ಬ್ಯಾಂಕುಗಳು (Banks), ನಿಗದಿತ ಅಂಚೆ ಕಚೇರಿಗಳು (Post offices), ಸ್ಟಾಕ್ ಹೋಲ್ಡಿಂಗ್ ಕಾರ್ಪೋರೇಷನ್ ಆಫ್ ಇಂಡಿಯಾ ಲಿಮಿಟೆಡ್ (SHCIL), ನ್ಯಾಷನಲ್ ಸ್ಟಾಕ್ ಎಕ್ಸ್ ಚೇಂಜ್ (NSE) ಹಾಗೂ ಬಾಂಬೆ ಸ್ಟಾಕ್ ಎಕ್ಸ್ ಚೇಂಜ್ ಗಳಲ್ಲಿ (BSE)ಸಾವರಿನ್ ಗೋಲ್ಡ್ ಬಾಂಡ್ ಗಳನ್ನು ಖರೀದಿಸಬಹುದು . 


 

Latest Videos
Follow Us:
Download App:
  • android
  • ios