ನವದೆಹಲಿ(ಫೆ.01): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಮಧ್ಯಂತರ ಬಜೆಟ್ ನ್ನು ಹಂಗಾಮಿ ವಿತ್ತ ಸಚಿವ ಪಿಯೂಷ್ ಗೋಯೆಲ್ ಮಂಡಿಸುತ್ತಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರ ರಚನೆಯಾದಾಗಿನಿಂದ ದೇಶದ ರಕ್ಷಣಾ ವಲಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ದೇಶದ ಭದ್ರತೆ ಮತ್ತು ಸುರಕ್ಷತೆಗೆ ಹೆಚ್ಚಿನ ಒತ್ತು ಕೊಡಲಾಗುತ್ತಿದೆ.

ಬಜೆಟ್ ಸಂಬಂಧಿ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಎನ್‌ಡಿಎ ಸರ್ಕಾರದ ಮಧ್ಯಂತರ ಬಜೆಟ್‌ನಲ್ಲಿ ರಕ್ಷಣಾ ವಲಯಕ್ಕೆ ಭಾರೀ ಮೊತ್ತವನ್ನು ಮೀಸಲಿರಿಸಲಾಗಿದ್ದು, ದೇಶದ ಸುರಕ್ಷತೆಯಲ್ಲಿ ಯಾವುದೇ ರಾಜಿ ಇಲ್ಲ ಎಂಬ ಸ್ಪಷ್ಟ ಸಂದೇಶ ರವಾನೆಯಾಗಿದೆ.

ಅದರಂತೆ ರಕ್ಷಣಾ ವಲಯಕ್ಕೆ 3 ಲಕ್ಷ ಕೋಟಿ ರೂ.ಗೂ ಅಧಿಕ ಮೊತ್ತ ಮೀಸಲಿರಿಸಲಾಗಿದ್ದು, ಕಳೆದ 2 ವರ್ಷಗಳಲ್ಲಿ ಇಪಿಎಫ್ಒ ಸದಸ್ಯರ ಸಂಖ್ಯೆ 2 ಕೋಟಿಗೆ ಏರಿಕೆಯಾಗಿದೆ ಎಂದು ಹಂಗಾಮಿ ವಿತ್ತ ಸಚಿವ ಪಿಯೂಷ್ ಗೋಯೆಲ್ ತಿಳಿಸಿದ್ದಾರೆ.

ಸೈನ್ಯಕ್ಕೆ ಆಧುನಿಕ ಶಸ್ತ್ರಾಸ್ತ್ರಗಳ ಖರೀದಿ, ಸೈನಿಕರ ಯೋಗಕ್ಷೇಮ ವೃದ್ಧಿಗೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ 3 ಲಕ್ಷ ಕೋಟಿ ರೂ.ಗಳನ್ನು ಬಳಸಲಾಗುವುದು ಎಂದು ಸರ್ಕಾರ ತಿಳಿಸಿದೆ.

ಇದೇ ವೇಳೆ ರಕ್ಷಣಾ ವಲಯದ ಬಹುದಿನಗಳ ಬೇಡಿಕೆಯಾಗಿದ್ದ ಓಆರ್‌ಓಪಿ(ಒನ್ ರ್ಯಾಂಕ್ ಒನ್ ಪೆನ್ಶನ್) ಈಡೇರಿಸಲಾಗಿದ್ದು, ಈ ಯೋಜನೆಯಡಿಯಲ್ಲಿ ಇದುವರೆಗೆ ಸುಮಾರು 35,000 ಕೋಟಿ ರೂ. ವ್ಯಯ ಮಾಡಲಾಗಿದೆ ಎಂದು ಸಚಿವರು ಸದನಕ್ಕೆ ಮಾಹಿತಿ ನೀಡಿದರು.