Asianet Suvarna News Asianet Suvarna News

ಟ್ಯಾಕ್ಸ್ ಕಟ್ಟಲು ಆಧಾರ್ ಸಾಕು: ವಿತ್ತ ಸಚಿವರೇ ಥ್ಯಾಂಕ್ಯೂ!

ಲೋಕಸಭೆಯಲ್ಲಿ ಮೋದಿ 2.0 ಸರ್ಕಾರದ ಮೊದಲ ಬಜೆಟ್ ಮಂಡನೆ| ಬಜೆಟ್ ಮಂಡನೆ ಪ್ರಕ್ರಿಯೆ ಪೂರ್ಣಗೊಳಿಸಿದ ಕೇಂದ್ರ ಹಣಕಾಸು ಸಚಿವೆ| ಅರ್ಥ ಪಥದ ನೀಲನಕ್ಷೆ ಬಿಚ್ಚಿಟ್ಟ ನಿರ್ಮಲಾ ಸೀತಾರಾಮನ್| ತೆರಿಗೆ ಪಾವತಿಗೆ ಆಧಾರ್ ಕಾರ್ಡ್ ಇದ್ದರೆ ಸಾಕು ಎಂದ ಕೇಂದ್ರ| ಪ್ಯಾನ್ ಕಾರ್ಡ್ ಬದಲಾಗಿ ಆಧಾರ್ ಕಾರ್ಡ್ ಇದ್ದರೂ ತೆರಿಗೆ ಪಾವತಿ|

Union Budget 2019 IT return Can Be Filed By Aadhar Card Only
Author
Bengaluru, First Published Jul 5, 2019, 4:18 PM IST

ನವದೆಹಲಿ(ಜು.05): ಮೋದಿ 2.0 ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಲೋಕಸಭೆಯಲ್ಲಿ ಮಂಡನೆಯಾಗಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಬುತ್ತಿ ಬಿಚ್ಚಿಟ್ಟಿದ್ದಾರೆ. ಬಜೆಟ್ ಭಾಷಣ ಪೂರ್ಣಗೊಳಿಸಿರುವ ನಿರ್ಮಲಾ ಸೀತಾರಾಮನ್, ದೇಶದ ಆರ್ಥಿಕ ಅಭಿವೃದ್ಧಿಯ ನೀಲನಕ್ಷೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು.

ಈ ವೇಳೆ ಆದಾಯ ತೆರಿಗೆ ಪಾವತಿಗೆ ಪಾನ್ ಕಾರ್ಡ್ ಕಡ್ಡಾಯವಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ.

ತೆರಿಗೆ ಪಾವತಿಗೆ ಪ್ಯಾನ್ ಕಾರ್ಡ್ ಜೋಡಣೆಗೆ ವಿನಾಯಿತಿ ನೀಡಲಾಗಿದ್ದು, ಒಂದು ವೇಳೆ ತೆರಿಗೆ ಪಾವತಿದಾರರು ಪ್ಯಾನ್ ಕಾರ್ಡ್ ಹೊಂದಿಲ್ಲದಿದ್ದರೆ ಆಧಾರ್ ಸಂಖ್ಯೆ ನಮೂದಿಸಿ ತೆರಿಗೆ ಪಾವತಿಸಬಹುದಾಗಿದೆ.

Follow Us:
Download App:
  • android
  • ios