Asianet Suvarna News Asianet Suvarna News

ರಕ್ಷಣೆಗೆ ಒತ್ತು: ಕಸ್ಟಮ್ ತೆರಿಗೆ ವಿನಾಯ್ತಿಯ ಕರಾಮತ್ತು!

ಲೋಕಸಭೆಯಲ್ಲಿ ಮೋದಿ 2.0 ಸರ್ಕಾರದ ಮೊದಲ ಬಜೆಟ್ ಮಂಡನೆ| ಬಜೆಟ್ ಮಂಡನೆ ಪ್ರಕ್ರಿಯೆ ಪೂರ್ಣಗೊಳಿಸಿದ ಕೇಂದ್ರ ಹಣಕಾಸು ಸಚಿವೆ| ಅರ್ಥ ಪಥದ ನೀಲನಕ್ಷೆ ಬಿಚ್ಚಿಟ್ಟ ನಿರ್ಮಲಾ ಸೀತಾರಾಮನ್| ರಕ್ಷಣಾ ಸಾಮಗ್ರಿಗಳ ಮೇಲಿನ ಕಸ್ಟಮ್ ತೆರಿಗೆ ರದ್ದು| ಗಡಿ ಸುರಕ್ಷತೆ ಮತ್ತು ಆರ್ಥಿಕ ಅಭಿವೃದ್ಧಿ ಮೋದಿ ಸರ್ಕಾರದ ಮಂತ್ರ|

Union Budget 2019 No Custom Duty On Defence Equipment
Author
Bengaluru, First Published Jul 5, 2019, 3:16 PM IST

ನವದೆಹಲಿ(ಜು.05): ಮೋದಿ 2.0 ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಲೋಕಸಭೆಯಲ್ಲಿ ಮಂಡನೆಯಾಗಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಬುತ್ತಿ ಬಿಚ್ಚಿಟ್ಟಿದ್ದಾರೆ. ಬಜೆಟ್ ಭಾಷಣ ಪೂರ್ಣಗೊಳಿಸಿರುವ ನಿರ್ಮಲಾ ಸೀತಾರಾಮನ್, ದೇಶದ ಆರ್ಥಿಕ ಅಭಿವೃದ್ಧಿಯ ನೀಲನಕ್ಷೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು.

ಗಡಿ ಸುರಕ್ಷತೆ ಮತ್ತು ಆರ್ಥಿಕ ಅಭಿವೃದ್ಧಿಯನ್ನೇ ಮಂತ್ರವನ್ನಾಗಿಸಿಕೊಂಡಿರುವ ಮೋದಿ ಸರ್ಕಾರ, ಈ ಬಾರಿ ರಕ್ಷಣಾ ವಲಯಕ್ಕೆ ಗಮನಾರ್ಹ ಕೊಡುಗೆ ನೀಡಿದ್ದಾರೆ.

ರಕ್ಷಣಾ ಸಾಮಗ್ರಿಗಳ ಮೇಲಿನ ಕಸ್ಟಮ್ ತೆರಿಗೆಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರ, ರಕ್ಷಣಾ ಸಾಮಗ್ರಿಗಳ ಉತ್ಪಾದನೆ ಮತ್ತು ಅದರ ವಿಲೇವಾರಿಗೆ ಇದ್ದ ಅಡೆತಡೆಗಳನ್ನು ನಿವಾರಿಸಲು ಮುಂದಾಗಿದೆ.

Follow Us:
Download App:
  • android
  • ios