10:40 PM (IST) Feb 01

ನಿರಾಸದಾಯಕ ಬಜೆಟ್, ರಾಜಸ್ಥಾನಕ್ಕೆ ಭಾರಿ ನಿರಾಸೆ, ಸಿಎಂ ಗೆಹ್ಲೋಟ್

ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್ ನಿರಾಸದಾಯಕವಾಗಿದೆ. ರಾಜಸ್ಥಾನ ಜನರು ಹಲವು ನಿರೀಕ್ಷೆಗಳಿನ್ನಿಟ್ಟುಕೊಂಡಿದ್ದರು. ಆದರೆ ಮೋದಿ ಸರ್ಕಾರ ಎಲ್ಲರಿಗೂ ತಣ್ಣೀರೆರಚಿದೆ ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

09:05 PM (IST) Feb 01

ಕೇಂದ್ರ ಬಜೆಟ್ ಶ್ಲಾಘಿಸಿದ ಒಡಿಶಾ ಸಿಎಂ ನವೀನ್ ಪಟ್ನಾಯಕ್

ಬಂಡವಾಳ ಹೂಡಿಕೆ, ಕುಡಿಯುವ ನೀರಿನ ಯೋಜನೆ, ಗ್ರಾಮೀಣ ವಸತಿಗಳ ಹೆಚ್ಚಳ ಸೇರಿದಂತೆ ಹಲವು ಉತ್ತಮ ಅಂಶಗಳನ್ನು ಬಜೆಟ್ ಹೊಂದಿದೆ. ಈ ಬಜೆಟ್ ಉತ್ತಮ ಸಾಮಾಜಿಕ ಪರಿಣಾಮ ಬೀರಲಿದೆ: ಒಡಿಶಾ ಸಿಎಂ ನವೀನ್ ಪಟ್ನಾಯಕ್

08:10 PM (IST) Feb 01

ಹೊಸ ಭಾರತ ಹಾಗೂ ಸಮೃದ್ಧಿ ಭಾರತದ ಬಜೆಟ್, ಯೋಗಿ ಆದಿತ್ಯಾಥ್

ಕೇಂದ್ರ ಮಂಡಿಸಿದ ಬಜೆಟ್ ಸಮಾಜದ ಎಲ್ಲಾ ವರ್ಗದ ಜನರನ್ನು ಗಮನದಲ್ಲಿಟ್ಟುಕೊಂಡು ತಯಾರಿಸಲಾಗಿದೆ. ಎಲ್ಲಾ ವರ್ಗದಕ್ಕೆ ಕೊಡುಗೆ ಜೊತೆಗೆ ಆರ್ಥಿಕ ಸಬಲೀಕರಣದತ್ತ ಸಾಗಲು ಈ ಬಜೆಟ್ ಅತ್ಯಂತ ಮುಖ್ಯವಾಗಿದೆ. ಈ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಪ್ರಧಾನಿ ನರೇಂದ್ರ ಮೋದಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಯೋಗಿ ಆದಿತ್ಯನಾಥ್ ಹೇಳಿದ್ದಾರೆ

07:38 PM (IST) Feb 01

ಸೀತಾರಾಮನ್ 86 ನಿಮಿಷದ ಬಜೆಟ್ ಮಂಡನೆ ಮೇಳೆ 124 ಬಾರಿ ಮೇಜು ತಟ್ಟಿದ ಮೋದಿ

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಕೇಂದ್ರ ಬಜೆಟ್ ಮಂಡಿಸಿದ್ದಾರೆ. 86 ನಿಮಿಷಗಳಲ್ಲಿ ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣ ಮುಗಿಸಿದ್ದಾರೆ. ಈ ವೇಳೆ ಪ್ರಧಾನಿ ಮೋದಿ 124 ಬಾರಿ ಮೇಜು ತಟ್ಟಿ ಅಭಿನಂದಿಸಿದ್ದಾರೆ. 

06:58 PM (IST) Feb 01

ಬಜೆಟ್‌ನಲ್ಲಿ ಸಹಕಾರಿ ಸಂಘಟಗಳ ಉತ್ಪಾದನಾ ವಲಯಕ್ಕೆ ಉತ್ತೇಜನ, ಅಮಿತ್ ಶಾ ಧನ್ಯವಾದ

ಟಿಡಿಎಸ್ ಗರಿಷ್ಠ ಮಿತಿಯನ್ನು 3 ಕೋಟಿ ರೂಪಾಯಿ ಹೆಚ್ಚಿಸುವ ನಿರ್ಧಾರವನ್ನು ಬಜೆಟ್‌ನಲ್ಲಿ ಕೈಗೊಳ್ಳಲಾಗಿದೆ. ಪಿಎಸಿಎಸ್ ಮತ್ತು ಪಿಸಿಆರ್‌ಡಿಬಿಗಳಿಂದ ನಗದು ಠೇವಣಿ ವಲಯದಲ್ಲಿ ಮಾಡಿದ ಬದಲಾವಣೆಯಿಂದ ಸಕ್ಕರೆ ಸಹಕಾರಿ ಸಂಘಗಳ ಕಾರ್ಖಾನೆಗಳಿಗೆ ಸರಿಸುಮಾರು 10,000 ಕೋಟಿ ರೂಪಾಯಿ ಪರಿಹಾರ ಪಡೆಯಲಿದೆ. ಇದು ಮಹತ್ವದ ನಿರ್ಧಾರ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಣ್ಣಿಸಿದ್ದಾರೆ. 

06:43 PM (IST) Feb 01

ನಿರುದ್ಯೋಗ, ಹಣದುಬ್ಬರ ನಿಯಂತ್ರಣಕ್ಕಿಲ್ಲ ಕ್ರಮ, ಇದು ಭವಿಷ್ಯದ ಮಾರಕ ಬಜೆಟ್, ರಾಹುಲ್ ಗಾಂಧಿ!

ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ನಿರುದ್ಯೋಗ ಸಮಸ್ಯೆಗೆ ಪರಿಹಾರ ನೀಡುವ ಯಾವುದೇ ಕ್ರಮ ಇಲ್ಲ. ಹಣದುಬ್ಬ ಹಾಗೂ ಅಸಮಾನತೆ ಹೋಗಲಾಡಿಸಲು ಯಾವುದೇ ಯೋಜನೆಗಳಿಲ್ಲ. ದೇಶದ 1 ಶೇಕಡಾ ಶ್ರೀಮಂತರ ಶೇಕಡಾ 40 ರಷ್ಟು ಸಂಪತ್ತು ಹೊಂದಿದ್ದರೆ, ಶೇಕಡಾ 50 ರಷ್ಟು ಬಡವರು ಶೇಕಡಾ 64ರಷ್ಟು ಜಿಎಸ್‌ಟಿ ಪಾವತಿಸುತ್ತಿದ್ದಾರೆ. ಶೇಕಡಾ 42 ರಷ್ಟು ಯುವ ಸಮೂಹ ನಿರುದ್ಯೋಗಿಗಳಾಗಿದ್ದಾರೆ ಎಂದು ರಾಹುಲ್ ಗಾಂಧಿ ಬಜೆಟ್ ವಿರುದ್ಧ ಹರಿಹಾಯ್ದಿದ್ದಾರೆ. 

Scroll to load tweet…

06:39 PM (IST) Feb 01

Union Budget 2023: ಕೊಟ್ಟ ಮಾತಿನಂತೆ ನಡೆದುಕೊಂಡ ಮೋದಿ, ಉತ್ತಮ ಬಜೆಟ್ ಎಂದ ಯಡಿಯೂರಪ್ಪ!

ಕೇಂದ್ರ ಬಿಜೆಪಿ ಮಹತ್ವದ ಬಜೆಟ್ ಮಂಡಿಸಿದೆ. ಆರ್ಥಿಕ ಹಿಂಜರಿತ, ಕೋವಿಡ್ ಸಂಕಷ್ಟದಿಂದ ಹೊರಬಂದು ಮೈಕೊಡವಿ ನಿಂತಿರುವ ಭಾರತದ ಅಭಿವೃದ್ಧಿ ವೇಗ ಹೆಚ್ಚಿಸಲಿದೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಆದರೆ ವಿಪಕ್ಷ ನಾಯಕರು ಇದು ಪೊಳ್ಳು ಬಜೆಟ್ ಎಂದು ಟೀಕಿಸಿದ್ದಾರೆ. ಪ್ರಧಾನಿ ಮೋದಿ ಕರ್ನಾಟಕಕ್ಕೆ ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಾರೆ ಎಂದು ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ. 

Union Budget 2023: ಕೊಟ್ಟ ಮಾತಿನಂತೆ ನಡೆದುಕೊಂಡ ಮೋದಿ, ಉತ್ತಮ ಬಜೆಟ್ ಎಂದ ಯಡಿಯೂರಪ್ಪ!

06:38 PM (IST) Feb 01

ರೈತರ ಗೊಬ್ಬರಕ್ಕೆ 50 ಸಾವಿರ ಕೋಟಿ ಸಬ್ಸಿಡಿ ಕಡಿತ: ನಿರಾಶಾದಾಯಕ ಬಜೆಟ್‌ ಎಂದ ಸಿದ್ದರಾಮಯ್ಯ

ದೇಶದ ಆರ್ಥಿಕ ಮಂಡಿಸಿರುವ ಬಜೆಟ್‌ನಲ್ಲಿ ರೈತರಿಗೆ, ಕೃಷಿ ಕಾರ್ಮಿಕರಿಗೆ ದ್ರೋಹ ಮಾಡಲಾಗಿದೆ. ರಸಗೊಬ್ಬರಕ್ಕೆ ನೀಡಲಾಗುತ್ತಿದ್ದ 50 ಸಾವಿರ ಕೋಟಿ ಸಬ್ಸಿಡಿ ಕಡಿಮೆ ಮಾಡಿದ್ದಾರೆ. ಹೀಗಾದರೆ ರೈತರಿಗೆ ನ್ಯಾಯಯುತವಾಗಿ ಬೆಲೆ ಹೇಗೆ ಸಿಗುತ್ತದೆ. ಅತ್ಯಂತ ನಿರಾಶಾದಾಯಕ ಬಜೆಟ್‌ ಆಗಿದೆ ಎಂದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಮಾಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Union Budget :ರೈತರ ಗೊಬ್ಬರಕ್ಕೆ 50 ಸಾವಿರ ಕೋಟಿ ಸಬ್ಸಿಡಿ ಕಡಿತ: ನಿರಾಶಾದಾಯಕ ಬಜೆಟ್‌ ಎಂದ ಸಿದ್ದರಾಮಯ್ಯ

06:21 PM (IST) Feb 01

ವಿಶ್ವಕರ್ಮರ ಬೆನ್ನಿಗೆ ನಿಂತ ಮೋದಿ, ವಿಕಾಸಕ್ಕೆ ಆದಿ!

ದೇಶದಲ್ಲಿನ ಸಾವಿರಾರು ಕುಶಲಕರ್ಮಿಗಳು ಹಾಗೂ ಕರಕುಶಲತೆಯಲ್ಲಿ ತೊಡಗಿಸಿಕೊಂಡಿರುವ ವ್ಯಕ್ತಿಗಳ ಸಾಮರ್ಥ್ಯವನ್ನು ಅನಾವರಣಗೊಳಿಸುವ ಉದ್ದೇಶದಲ್ಲಿ ಪಿಎಂ ವಿಕಾಸ್‌ ಯೋಜನೆ ಜಾರಿ ಮಾಡಲಾಗಿದೆ. ಪಿಎಂ ವಿಕಾಸ್‌ ಯೋಜನೆಯ ಮೂಲಕ ವಿಶ್ವಕರ್ಮರು ಭಾರತದ ಪ್ರಗತಿಯಲ್ಲಿ ಸೇರಿಕೊಳ್ಳುವುದಲ್ಲದೆ ದೇಶದ ಬೆಳವಣಿಗೆ ಪ್ರಬಲ ಜನಾಂಗವಾಗಲಿದ್ದಾರೆ ಎಂದು ಮೋದಿ ತಿಳಿಸಿದ್ದಾರೆ.

Budget 2023: ವಿಶ್ವಕರ್ಮರ ಬೆನ್ನಿಗೆ ನಿಂತ ಮೋದಿ, ವಿಕಾಸಕ್ಕೆ ಆದಿ!

04:48 PM (IST) Feb 01

ಇದೇ ಮೊದಲ ಬಾರಿಗೆ ಬಜೆಟ್‌ನಲ್ಲಿ ಮಹಿಳೆಯರಿಗೆ ಹೊಸ ಯೋಜನೆ!

2023-24ನೇ ಸಾಲಿನ ಬಜೆಟ್ ನಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೆಚ್ಚಿನ ಒತ್ತು ನೀಡಿದ್ದಾರೆ. ಮಹಿಳೆಯರಲ್ಲಿ ಉಳಿತಾಯದ ಗುಣವನ್ನು ಉತ್ತೇಜಿಸಲು ಹೆಚ್ಚಿನ ಬಡ್ಡಿದರ ನೀಡುವ ಮಹಿಳಾ ಸಮ್ಮಾನ್​ ಉಳಿತಾಯ ಪತ್ರ ಎಂಬ ಹೊಸ ಯೋಜನೆಯನ್ನು ಪರಿಚಯಿಸಿದ್ದಾರೆ. 

Union Budget 2023:ಮಹಿಳಾ ಆರ್ಥಿಕ ಸಬಲೀಕರಣಕ್ಕೆ ಆದ್ಯತೆ; ಉಳಿತಾಯ ಉತ್ತೇಜಿಸಲು ಹೊಸ ಯೋಜನೆ ಘೋಷಣೆ

04:32 PM (IST) Feb 01

ಪ್ರತಿಯೊಬ್ಬನಿಗೂ ಸೂರು, ಆವಾಸ್‌ ಯೋಜನೆಗೆ ಹಣ ಜೋರು!

2022ರ ಬಜೆಟ್‌ನಲ್ಲಿ ಪ್ರಧಾನಮಂತ್ರಿ ಆವಾಸ್‌ ಯೋಜನೆಯ ಅಡಿಯಲ್ಲಿ 80 ಲಕ್ಷ ಮನೆಗಳ ನಿರ್ಮಾಣಕ್ಕೆ 48 ಸಾವಿರ ಕೋಟಿ ರೂಪಾಯಿಯನ್ನು ಮೀಸಲಿಡಲಾಗಿತ್ತು. ಈ ಮೊತ್ತದಲ್ಲಿ ಶೇ. 66ರಷ್ಟು ಏರಿಕೆಯಾಗಿದೆ. ನಗರ ಮೂಲಸೌಕರ್ಯ ಅಭಿವೃದ್ಧಿ ನಿಧಿಗೆ ವಾರ್ಷಿಕ ₹ 10,000 ಕೋಟಿ ವಿನಿಯೋಗಿಸುವ ಮೂಲಕ ಎಲ್ಲರಿಗೂ ಕೈಗೆಟುಕುವ ವಸತಿ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿರುವುದಾಗಿ ಹೇಳಿದೆ.

Budget 2023: ಪ್ರತಿಯೊಬ್ಬನಿಗೂ ಸೂರು, ಆವಾಸ್‌ ಯೋಜನೆಗೆ ಹಣ ಜೋರು!

04:19 PM (IST) Feb 01

ಕೈಗೆಟುಕುವ ದರದಲ್ಲಿ ಸಿಗಲಿದೆ ಎಲೆಕ್ಟ್ರಿಕ್ ವಾಹನ!

ಈ ಬಾರಿಯ ಬಜೆಟ್ ಭಾರತದಲ್ಲಿ ಎಲೆಕ್ಟ್ರಿಕ್ ವಾಹನ ಬಳಕೆಗೆ ಮತ್ತಷ್ಟು ಉತ್ತೇಜನ ನೀಡಲಿದೆ. ಇಷ್ಟೇ ಅಲ್ಲ ಲಿಥಿಂಯ ಹಾಗೂ ಐಯಾನ್ ಬ್ಯಾಟರಿ ಮೇಲಿನ ಸುಂಕ ಕಡಿತಗೊಳಿಸಿರುವ ಕಾರಣ ಭಾರತದಲ್ಲಿ ಎಲೆಕ್ಟ್ರಿಕ್ ವಾಹನ ಬೆಲೆ ಮತ್ತಷ್ಟು ಕಡಿಮೆಯಾಗಲಿದೆ. ಇದರ ಜೊತೆಗೆ ಭಾರತೀಯ ಆಟೋಮೊಬೈಲ್ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ನೀಡಿರುವ ಕೊಡುಗೆ ಏನು? ಇಲ್ಲಿದೆ.

ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

03:41 PM (IST) Feb 01

ರಕ್ಷಣಾ ಕ್ಷೇತ್ರಕ್ಕೆ ಸಿಂಹಪಾಲು, ಉಳಿದ ಕ್ಷೇತ್ರಕ್ಕೂ ಇದೆ ಅವರ ಪಾಲು!

ಕೇಂದ್ರ ಬಜೆಟ್‌ನಲ್ಲಿ ದೇಶದ ರಕ್ಷಣಾ ಕ್ಷೇತ್ರಕ್ಕೆ ಮೀಸಲಿಟ್ಟ ಹಣದಲ್ಲಿ ಶೇ. 16ರಷ್ಟು ಏರಿಕೆಯಾಗಿದೆ. ನಿರ್ಮಲಾ ಸೀತಾರಾಮನ್‌, 5.93 ಲಕ್ಷ ಕೋಟಿ ಹಣವನ್ನು ರಕ್ಷಣಾ ಕ್ಷೇತ್ರಕ್ಕೆ ಮೀಸಲಿಟ್ಟಿದ್ದಾರೆ. ಕಳೆದ ವರ್ಷದ ಬಜೆಟ್‌ಗೆ ಹೋಲಿಸಿದರೆ ಈ ಬಾರಿ 69 ಸಾವಿರ ಕೋಟಿ ರೂಪಾಯಿ ಏರಿಕೆಯಾಗಿದೆ.

ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

03:29 PM (IST) Feb 01

ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್‌ ಗರಿಷ್ಠ ಬಾರಿ ಬಳಸಿದ ಪದ ಯಾವುದು ಗೊತ್ತಾ?

ಸಾಮಾನ್ಯವಾಗಿ ಬಜೆಟ್‌ ಭಾಷಣದಲ್ಲಿ ತೆರಿಗೆ, ಯಾವ ಕ್ಷೇತ್ರಕ್ಕೆ ಎಷ್ಟು ಹಣ ಮೀಸಲಿಡಲಾಗಿದೆ ಅನ್ನೋ ವಿಚಾರವೇ ಹೆಚ್ಚು ಚರ್ಚೆ ಆಗುತ್ತಿದೆ. ತೆರಿಗೆದಾರರಿಗೆ ದೊಡ್ಡ ರಿಲೀಫ್‌ ನೀಡಿರುವ ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್‌ ಗರಿಷ್ಠ ಬಾರಿ ಬಳಕೆ ಮಾಡಿರುವ ಪದ 'ಟ್ಯಾಕ್ಸ್‌'!

ನಿರ್ಮಲ ಬಜೆಟ್‌ನಲ್ಲಿ ಗರಿಷ್ಠ ಬಾರಿ ಬಳಕೆ ಮಾಡಿದ ಪದ 'ಟ್ಯಾಕ್ಸ್‌'!

03:28 PM (IST) Feb 01

ಬಜೆಟ್‌ನಲ್ಲಿ ರಕ್ಷಣಾ ಕ್ಷೇತ್ರಕ್ಕೆ 5.94 ಲಕ್ಷ ಕೋಟಿ ಮೀಸಲು!

ಕೇಂದ್ರ ಬಜೆಟ್‌ನಲ್ಲಿ ದೇಶದ ರಕ್ಷಣಾ ಕ್ಷೇತ್ರಕ್ಕೆ ಮೀಸಲಿಟ್ಟ ಹಣದಲ್ಲಿ ಶೇ. 16ರಷ್ಟು ಏರಿಕೆಯಾಗಿದೆ. ನಿರ್ಮಲಾ ಸೀತಾರಾಮನ್‌, 5.94 ಲಕ್ಷ ಕೋಟಿ ಹಣವನ್ನು ರಕ್ಷಣಾ ಕ್ಷೇತ್ರಕ್ಕೆ ಮೀಸಲಿಟ್ಟಿದ್ದಾರೆ. ಕಳೆದ ವರ್ಷದ ಬಜೆಟ್‌ಗೆ ಹೋಲಿಸಿದರೆ ಈ ಬಾರಿ 69 ಸಾವಿರ ಕೋಟಿ ರೂಪಾಯಿ ಏರಿಕೆಯಾಗಿದೆ.

Defence Budget 2023: ರಕ್ಷಣಾ ಕ್ಷೇತ್ರಕ್ಕೆ ಸಿಂಹಪಾಲು, ಉಳಿದ ಕ್ಷೇತ್ರಕ್ಕೂ ಇದೆ ಅವರ ಪಾಲು!

03:21 PM (IST) Feb 01

ಡಿಜಿಟಲ್ ಕ್ಷೇತ್ರಕ್ಕೆ ಹೆಚ್ಚಿನ ಒತ್ತು; ಕೌಶಲಾಭಿವೃದ್ಧಿಗೆ ಡಿಜಿಟಲ್ ವೇದಿಕೆ

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಮೋದಿ ಸರ್ಕಾರ ಈ ಹಿಂದಿನಿಂದಲೂ ಡಿಜಿಟಲ್ ಕ್ಷೇತ್ರಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುತ್ತ ಬಂದಿದೆ. ಅದರಂತೆ ಈ ಬಾರಿಯ ಬಜೆಟ್ ನಲ್ಲಿ ಕೂಡ ಡಿಜಿಟಲ್ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ.

ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

03:19 PM (IST) Feb 01

ತೆರಿಗೆ ಭಾರವಿಲ್ಲದೆ ಸರ್ವರನ್ನು ಸಂತೃಪ್ತಿಪಡಿಸಿದ ಕೇಂದ್ರ ಬಜೆಟ್: ಸಚಿವ ನಿರಾಣಿ

ಜನಸಾಮಾನ್ಯರಿಗೆ ಹೊರೆಯಾಗದಂತೆ ಹೊಸ ತೆರಿಗೆಯನ್ನು ವಿಧಿಸದೆ ವೈಯಕ್ತಿಕ ಆದಾಯ ತೆರಿಗೆ ಮಿತಿಯನ್ನು ಹೆಚ್ಚಿಸಿ ಹಿರಿಯ ನಾಗರಿಕರು, ಮಹಿಳೆಯರು, ರೈತರು, ಕಾರ್ಮಿಕರು, ಮಧ್ಯಮ ವರ್ಗದವರು ಸೇರಿದಂತೆ ಪ್ರತಿಯೊಬ್ಬರಿಗೂ ಸಂತೃಪ್ತಿಪಡಿಸುವ ಕೇಂದ್ರ ಬಜೆಟ್ ಮಂಡನೆಯಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್.ನಿರಾಣಿ ಸಂತಸ ವ್ಯಕ್ತಪಡಿಸಿದ್ದಾರೆ. ಲೋಕಸಭೆಯಲ್ಲಿ ಪ್ರಸಕ್ತ 2023-24ನೇ ಸಾಲಿನ ಬಜೆಟ್ ಮಂಡಿಸಿರುವ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಸರ್ವಸ್ಪರ್ಶಿ ಹಾಗೂ ಸರ್ವರನ್ನೊಳಗೊಂಡ ಸಮತೋಲನದ ಬಜೆಟ್ ಮಂಡಿಸಿದ್ದಾರೆ. ಇದು ಭವಿಷ್ಯದ ಬಜೆಟ್ ಎಂದು ನಿರಾಣಿ ಬಣ್ಣಿಸಿದ್ದಾರೆ. ಈವರೆಗೂ ಇದ್ದ ರೂ. 5 ಲಕ್ಷವರೆಗಿನ ಆದಾಯ ತೆರಿಗೆ ಮಿತಿಯನ್ನು ರೂ. 7 ಲಕ್ಷದವರೆಗೆ ಹೆಚ್ಚಿಸಿರುವುದು ಮಧ್ಯಮ ವರ್ಗದವರಿಗೆ ಹೆಚ್ಚಿನ ಅನುಕೂಲವಾಗಲಿದೆ. ಇದು ದೇಶವಾಸಿಗಳ ಬಗ್ಗೆ ಪ್ರಧಾನಿ ನರೇಂದ್ರಮೋದಿ ಅವರು ಇಟ್ಟುಕೊಂಡಿರುವ ಕಳಕಳಿ ಎಂದು ಹೇಳಿದ್ದಾರೆ. 

02:40 PM (IST) Feb 01

ದೂರದೃಷ್ಟಿ ,ದೇಶದ ಹಿತದೃಷ್ಟಿಯುಳ್ಳ ಬಜೆಟ್ಛ ಸಿಟಿ ರವಿ

ಚಿಕ್ಕಮಗಳೂರು: ಬಜೆಟ್ ನಲ್ಲಿ 7 ವಿಶೇಷಗಳಿಗೆ ಆದ್ಯತೆ ನೀಡಲಾಗಿದೆ. ಕಟ್ಟಕಡೆಯ ಮನುಷ್ಯನಿಗೆ ತಲುಪುವ ಯೋಜನೆಗಳಿಗೆ ಆದ್ಯತೆ. ಯುವ ಸಮುದಾಯ,ಮೂಲ ಸೌಕರ್ಯ , ಪರಿಸರ ಸ್ನೇಹಿ ಬಜೆಟ್ ಇದು. ಆದಾಯ ತೆರಿಗೆ ರಿಯಾಯಿತಿ, ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ. ದೂರದೃಷ್ಟಿ,ದೇಶದ ಹಿತದೃಷ್ಟಿಯುಳ್ಳ ಬಜೆಟ್. ಬಡವರ ಸ್ನೇಹಿ ಆಗಿರುವ ಬಜೆಟ್ ,9 ಬಜೆಟ್ ಗಳಂತೆ ಈ ಭಾರೀ ಬಜೆಟ್ ಕೂಡ ದೂರದೃಷ್ಟಿ, ದೇಶದ ಹಿತಕಾಯುವ ನಿಟ್ಟಿನಲ್ಲಿರುವ ಬಜೆಟ್. ಬಡವರಿಗೆ ಬಲ ನೀಡುವ ಬಜೆಟ್ ಇದಾಗಿದ್ದು, ಪ್ರಧಾನ ಮಂತ್ರಿಗಳಿಗೆ, ಕೇಂದ್ರ ಹಣಕಾಸಿನ ಖಾತೆ ಸಚಿವರಿಗೆ ಅಭಿನಂದನೆ ಸಲ್ಲಿಸಿದ ಸಿ.ಟಿ ರವಿ.

.

02:01 PM (IST) Feb 01

ಯಾವುದು ದುಬಾರಿ, ಯಾವುದು ಅಗ್ಗ?

ನಿರ್ಮಲಾ ಸೀತಾರಾಮನ್ ಸಂಸತ್ತಿನಲ್ಲಿ ಕೇದ್ರ ಬಜೆಟ್ ಮಂಡಿಸಿದ್ದಾರೆ. ಮಧ್ಯಮ ವರ್ಗದ ತೆರಿಗೆದಾರರಿಗೆ ಬಂಪರ್ ಕೊಡುಗೆ ಘೋಷಿಸಿದರೆ, ಆಮದು ಸುಂಕ, ರಫ್ತು ಸುಂಕದಲ್ಲಿ ಕೆಲ ಬದಲಾವಣೆಗಳಾಗಿವೆ. ಇಷ್ಟೇ ಅಲ್ಲ ಸಿಗರೇಟು ತಂಬಾಕು ದುಬಾರಿಯಾಗಿದ್ದರೆ, ಮೊಬೈಲ್ ಫೋನ್, ಸ್ಥಳೀಯ ಮತ್ಸ ಉತ್ಪನ್ನಗಳು ಅಗ್ಗವಾಗಿದೆ. ಬಜೆಟ್ ಬಳಿಕ ಯಾವುದೇ ದುಬಾರಿ? ಯಾವುದು ಅಗ್ಗ ಇಲ್ಲಿದೆ ಸಂಪೂರ್ಣ ವಿವರ.

ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

01:49 PM (IST) Feb 01

ಒಂದು ಜಿಲ್ಲೆ, ಒಂದು ಉತ್ಪನ್ನ; ಪ್ರವಾಸೋದ್ಯಮಕ್ಕೆ ಸರ್ಕಾರದ ಚೈತನ್ಯ!

ಎಲ್ಲಾ ರಾಜ್ಯಗಳಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಎಲ್ಲಾ ರಾಜ್ಯಗಳು ತನ್ನ ರಾಜಧಾನಿಯಲ್ಲಿ ಅಥವಾ ರಾಜ್ಯದ ಅತ್ಯಂತ ಪ್ರಸಿದ್ಧ ಪ್ರವಾಸಿ ತಾಣದಲ್ಲಿ ಯುನಿಟಿ ಮಾಲ್‌ಅನ್ನು ಸ್ಥಾಪನೆ ಮಾಡುವುದಾಗಿ ಬಜೆಟ್‌ ಅಲ್ಲಿ ತಿಳಿಸಿದೆ.

Budget 2023: ಒಂದು ಜಿಲ್ಲೆ, ಒಂದು ಉತ್ಪನ್ನ; ಪ್ರವಾಸೋದ್ಯಮಕ್ಕೆ ಸರ್ಕಾರದ ಚೈತನ್ಯ!