ಇಂದಿನಿಂದಲೇ ಪೆಟ್ರೋಲ್ ದುಬಾರಿ: ಕಷ್ಟವಾದೀತು ವಾಹನ ಸವಾರಿ!

ಲೋಕಸಭೆಯಲ್ಲಿ ಮೋದಿ 2.0 ಸರ್ಕಾರದ ಮೊದಲ ಬಜೆಟ್ ಮಂಡನೆ| ಬಜೆಟ್ ಮಂಡನೆ ಪ್ರಕ್ರಿಯೆ ಪೂರ್ಣಗೊಳಿಸಿದ ಕೇಂದ್ರ ಹಣಕಾಸು ಸಚಿವೆ| ಅರ್ಥ ಪಥದ ನೀಲನಕ್ಷೆ ಬಿಚ್ಚಿಟ್ಟ ನಿರ್ಮಲಾ ಸೀತಾರಾಮನ್| ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ಅಧಿಕ| ಪೆಟ್ರೋಲ್, ಡೀಸೆಲ್ ಮೇಲೆ 1 ರೂ. ಅಧಿಕ ಸೆಸ್ ವಿಧಿಸಿದ ಕೇಂದ್ರ ಸರ್ಕಾರ| ಇಂದು ಮಧ್ಯರಾತ್ರಿಯಿಂದಲೇ ಹೊಸ ದರ ಜಾರಿಗೆ| ಎಲೆಕ್ಟ್ರಿಕ್ ವಾಹನ ಖರೀದಿಗೆ ಉತ್ತೇಜನ|

Union Budget Increases  Excise Duty Cess On Petrol and Diesel

ನವದೆಹಲಿ(ಜು.05): ಮೋದಿ 2.0 ಸರ್ಕಾರದ ಮೊದಲ ಪೂರ್ಣ ಪ್ರಮಾಣದ ಬಜೆಟ್ ಲೋಕಸಭೆಯಲ್ಲಿ ಮಂಡನೆಯಾಗಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಬುತ್ತಿ ಬಿಚ್ಚಿಟ್ಟಿದ್ದಾರೆ. ಬಜೆಟ್ ಭಾಷಣ ಪೂರ್ಣಗೊಳಿಸಿರುವ ನಿರ್ಮಲಾ ಸೀತಾರಾಮನ್, ದೇಶದ ಆರ್ಥಿಕ ಅಭಿವೃದ್ಧಿಯ ನೀಲನಕ್ಷೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟರು.

ಆದರೆ ಈ ಬಾರಿಯ ಬಜೆಟ್'ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 1 ರೂ. ಸೆಸ್ ಹೆಚ್ಚಿನ ತೆರಿಗೆ ವಿಧಿಸಲಾಗಿದ್ದು, ಇಂದು ಮಧ್ಯರಾತ್ರಿಯಿಂದಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಹೆಚ್ಚಳವಾಗಲಿದೆ.

ಎಲೆಕ್ಟ್ರಿಕ್ ವಾಹನ ಖರೀದಿಗೆ ಉತ್ತೇಜನ ನೀಡಲು ಮುಂದಾಗಿರುವ ಕೇಂದ್ರ, ಪೆಟ್ರೋಲ್, ಡೀಸೆಲ್ ಸೆಸ್ ಹೆಚ್ಚಿಸುವ ಮೂಲಕ ಜನರನ್ನು ಎಲೆಕ್ಟ್ರಿಕ್ ವಾಹನದತ್ತ ಚಿತ್ತ ಹರಿಸುವಂತೆ ಪ್ರೆರೇಪಿಸುತ್ತಿದೆ.

ಈ ಹಿನ್ನೆಲೆಯಲ್ಲಿ ಪೆಟ್ರೋಲ್, ಡೀಸೆಲ್ ಮೇಲೆ 1ರೂ. ಹೆಚ್ಚಿನ ಸೆಸ್ ವಿಧಿಸಲಾಗಿದ್ದು, ಇದು ವಾಹನ ಸವಾರರಿಗೆ ಅಚ್ಚರಿ ಮೂಡಿಸಿದೆ.

Latest Videos
Follow Us:
Download App:
  • android
  • ios