ಈರುಳ್ಳಿ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಕೇಂದ್ರ ಸರ್ಕಾರ| ತಕ್ಷಣದಿಂದಲೇ ಜಾರಿಗೆ ಬರುವಂತೆ ಈರುಳ್ಳಿ ರಫ್ತಿನ ಮೇಲೆ ನಿರ್ಬಂಧ| ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಮಾಹಿತಿ| ಎಲ್ಲಾ ರೀತಿಯ ಈರುಳ್ಳಿ ರಫ್ತಿಗೆ ಕೇಂದ್ರ ಸರ್ಕಾರದ ನಿರ್ಬಂಧ| 

ನವದೆಹಲಿ(ಸೆ.29):ಈರುಳ್ಳಿ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಕೇಂದ್ರ ಸರ್ಕಾರ, ತಕ್ಷಣದಿಂದಲೇ ಜಾರಿಗೆ ಬರುವಂತೆ ಈರುಳ್ಳಿ ರಫ್ತಿನ ಮೇಲೆ ನಿರ್ಬಂಧ ಹೇರಿದೆ.

Scroll to load tweet…

ಎಲ್ಲಾ ರೀತಿಯ ಈರುಳ್ಳಿ ರಪ್ತುನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಮಾಹಿತಿ ನೀಡಿದೆ. 

ಮಳೆ ಹಾಗೂ ಕಡಿಮೆ ಇಳುವರಿ ಪರಿಣಾಮ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬರುತ್ತಿಲ್ಲ. ಈ ಹಿನ್ನೆಲೆಯಲ್ಲಿ ದೇಶೀಯ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಏರಿಕೆ ಕಂಡಿದೆ ಎನ್ನಲಾಗಿದೆ.

Scroll to load tweet…

ಈ ಹಿನ್ನೆಲೆಯಲ್ಲಿ ರಫ್ತಿಗೆ ಕಡಿವಾಣ ಹಾಕಿ ಪ್ರಸ್ತುತ ಲಭ್ಯ ಇರುವ ಈರುಳ್ಳಿಯನ್ನು, ಆಂತರಿಕ ಬಳಕೆಗೆ ಮೀಸಲಿಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.