ಆರ್ಥಿಕವಾಗಿ ನಲುಗಿದ್ದ ರಾಜ್ಯಕ್ಕೆ ಬಿಎಸ್‌ ಯಡಿಯೂರಪ್ಪ ಬಜೆಟ್ ಟಾನಿಕ್ | ಇಲಾಖಾವಾರು ಅನುದಾನ ಘೋಷಿಸಿದ ಯಡಿಯೂರಪ್ಪ| ಮೀನುಗಾರಿಕೆಗೆ ಬಿಎಸ್‌ವೈ ಬಜೆಟ್‌ನಲ್ಲಿ ಸಿಕ್ಕ ಅನುದಾನ, ಕೊಡುಗೆ ಏನು?

ಬೆಂಗಳೂರು(ಮಾ.08): ಕೊರೋನಾದಿಂದ ಕಂಗೆಟ್ಟು ಆರ್ಥಿಕವಾಗಿ ನಲುಗಿದ್ದ ರಾಜ್ಯಕ್ಕೆ ಬಿಎಸ್‌ ಯಡಿಯೂರಪ್ಪ ಬಜೆಟ್ ಟಾನಿಕ್ ನೀಡಿದ್ದಾರೆ. ಆರೋಗ್ಯ, ಕೃಷಿ, ಮಹಿಳಾ ವರ್ಗ ಹೀಗೆ ಅನೇಕ ಕ್ಷೇತ್ರಗಳಿಗೆ ಅನುದಾನ, ಘೊಷಣೆ ಮಾಡಿರುವ ಸಿಎಂ ಯಡಿಯೂರಪ್ಪ ಮೀನುಗಾರಿಕಾ ಕ್ಷೇತ್ರಕ್ಕೂ ಕೆಲ ಘೋಷಣೆಗಳನ್ನು ಮಾಡಿದ್ದಾರೆ.

Add Asianetnews Kannada as a Preferred SourcegooglePreferred

* 2015-16 ರಿಂದ ಯಾಂತ್ರೀಕೃತ ದೋಣಿಗಳಿಗೆ 1.5 ಲಕ್ಷ ಕಿ. ಲೀ ಡೀಸೆಲ್ ಮೇಲಿನ ಮಾರಾಟ ಕರ ಮರುಪಾವತಿಯ ಬದಲು ಡೀಸೆಲ್ ಡೆಲಿವರಿ ಪಾಯಿಂಟ್‌ನಲ್ಲಿಯೇ ಕರರಹಿತ ದರದಲ್ಲಿ ಡೀಸೆಲ್ ವಿತರಣೆಗೆ ಕ್ರಮ.

* ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯ ಕಾರ್ಯಕ್ರಮಗಳ ಅನುಷ್ಠಾನಕ್ಕೆ 62 ಕೋಟಿ ರೂ. ಅನುದಾನ.

* 16 ಮೀನುಮರಿ ಉತ್ಪಾದನಾ ಕೇಂದ್ರಗಳ ತಾಂತ್ರಿಕ ಉನ್ನತೀಕರಣಕ್ಕೆ 2 ಕೋಟಿ ರೂ. ಅನುದಾನ.

* ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ವತಿಯಿಂದ ಆರು ಕೋಟಿ ರೂ ವೆಚ್ಚದಲ್ಲಿ ಮೀನು ಉತ್ಪನ್ನಗಳ ಸಂಸ್ಕರಣೆಗೆ ಆಧುನಿಕ ಸಂಸ್ಕರಣಾ ಮತ್ತು ಮೌಲ್ಯವರ್ಧನಾ ಕೇಂದ್ರ ಸ್ಥಾಪನೆ.

* ರಾಜ್ಯಾದ್ಯಂತ ಮೂವತ್ತು ಕೋಟಿ ರೂ. ವೆಚ್ಚದಲ್ಲಿ ಮೀನು ಮಾರಾಟ ಘಟಕ ಹಾಗೂ ಮತ್ಸ್ಯ ದರ್ಶಿನಿಗಳ ಸ್ಥಾಪನೆ.