ಚಿನ್ನ ಖರೀದಿಗೆ ಇದುವೇ ಸುಸಂದರ್ಭ, ಇಂದು ಮತ್ತಷ್ಟು ಹಗುರವಾದ ಬಂಗಾರ; ಇಲ್ಲಿದೆ ಇವತ್ತಿನ ದರ
ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಇಂದು ಚಿನ್ನ ಮತ್ತು ಬೆಳ್ಳಿ ಎರಡರ ಬೆಲೆಯಲ್ಲಿಯೂ ಇಳಿಕೆಯಾಗಿದೆ.
ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಶುಕ್ರವಾರ ಮತ್ತು ಶನಿವಾರ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿತ್ತು. ಆದರೆ ಭಾನುವಾರ ಚಿನ್ನದ ಬೆಲೆಯಲ್ಲಿ ಯಾವುದೇ ವ್ಯತ್ಯಾಸವಾಗಿರಲಿಲ್ಲ. ಇಂದು ಮತ್ತೆ ಚಿನ್ನದ ಜೊತೆಯಲ್ಲಿ ಬೆಳ್ಳಿ ಬೆಲೆಯಲ್ಲಿಯೂ ಇಳಿಕೆಯಾಗಿದೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ
ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 6,779
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 7,396
ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 54,232
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 59,168
ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 67,790
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 73,960
ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 6,77,900
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 7,39,600
ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 24 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 73,960 ಆಗಿದ್ದರೆ ಚೆನ್ನೈ 74,560 ಮುಂಬೈ 73,960 ಹಾಗೂ ಕೋಲ್ಕತ್ತಾದಲ್ಲಿ 73,960 ಹಾಗೆಯೇ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 74,110 ರೂ. ಆಗಿದೆ.
ಇಂದಿನ ಬೆಳ್ಳಿ ದರ
ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ, ಇಳಿಕೆಯಾದಂತೆಯೂ ಚಿನ್ನ ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ.
300 ಕೋಟಿ ರೂ ಜೆಟ್, 40 ಕೋಟಿ ಮನೆ; ದಿಗ್ಗಜರಿಂದ ಅನಂತ್ ರಾಧಿಕಾಗೆ ಸಿಕ್ಕಿದೆ ಭರ್ಜರಿ ಗಿಫ್ಟ್!
ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ಹಾಗೆಯೇ ಬೆಂಗಳೂರಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 915.50 ರೂ. 9,155ಗೂ ರೂ. 91,550 ರೂ.ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 95,900 ಆಗಿದ್ದರೆ, ಮುಂಬೈನಲ್ಲಿ ರೂ. 91,400 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 91,400 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 91,400 ಆಗಿದೆ.
ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಅನೇಕರು ಮದುವೆ ಮುಂಜಿಗಳಿಗೆ ಮಾತ್ರವಲ್ಲದೇ ಕಷ್ಟಕಾಲಕ್ಕೆ ನೆರವಿಗೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ. ಆಭರಣದ ಬದಲು ಚಿನ್ನದ ಬಿಸ್ಕೆಟ್, ಚಿನ್ನದ ಬಾಂಡ್ ಖರೀದಿಸಿದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ ಇದು ಎಂದಿಗೂ ಸೆಕೆಂಡ್ ಹ್ಯಾಂಡ್ ಆಗುವುದಿಲ್ಲ. ಇದನ್ನು ನೀವು ಆ ದಿನದ ಚಿನ್ನದ ದರ ಹೇಗಿದೆ ಎಂಬುದರ ಮೇಲೆ ಬಹು ವರ್ಷಗಳ ನಂತರವೂ ಉತ್ತಮ ದರವನ್ನು ಪಡೆಯಬಹುದು. ಹೀಗಾಗಿಯೇ ಚಿನ್ನ ಹೂಡಿಕೆದಾರರ ಅಚ್ಚುಮೆಚ್ಚಿನ ಹೂಡಿಕೆಯ ವಿಷಯವಾಗಿದೆ. ಅಲ್ಲದೇ ಷೇರು ಮಾರುಕಟ್ಟೆಯ ಹೂಡಿಕೆದಾರರು ಮಾತ್ರವಲ್ಲದೇ ಜನ ಸಾಮಾನ್ಯರು ಕೂಡ ಚಿನ್ನದ ದರದ ಮೇಲೆ ಒಂದು ಕಣ್ಣಿಟ್ಟಿರುತ್ತಾರೆ.
ಅಲ್ಲಿ ಇಳಿಕೆ, ಇಲ್ಲಿ ಏರಿಕೆ; ನಿಮ್ಮೂರಿನ ಪೆಟ್ರೋಲ್-ಡೀಸೆಲ್ ದರ ಎಷ್ಟಿದೆ?