ಹೇಗಿದೆ ನಿಮ್ಮ ನಗರದಲ್ಲಿ ಬೆಳ್ಳಿ ಬಂಗಾರದ ದರ
Share Marketಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ...
ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ...
ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 6080
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 6,633
ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 48,640
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 53,064
ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 60, 800
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 66,330
ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 6,08,000
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 6,63,300
ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 60,800 ಆಗಿದ್ದರೆ ಚೆನ್ನೈ 61,350, ಮುಂಬೈ 60,800 ಹಾಗೂ ಕೋಲ್ಕತ್ತಾದಲ್ಲಿ 60,800 ಹಾಗೆಯೇ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 60,950 ರೂ. ಆಗಿದೆ.
ಇಂದಿನ ಬೆಳ್ಳಿ ದರ
ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ, ಇಳಿಕೆಯಾದಂತೆಯೂ ಚಿನ್ನ ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ.
ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ಹಾಗೆಯೇ ಬೆಂಗಳೂರಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 759 ರೂ. 7590 ಹಾಗೂ ರೂ. 75900 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 80,300 ಆಗಿದ್ದರೆ, ಮುಂಬೈನಲ್ಲಿ ರೂ. 77,300 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 77300 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 77,300 ಆಗಿದೆ.
ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಅನೇಕರು ಮದುವೆ ಮುಂಜಿಗಳಿಗೆ ಮಾತ್ರವಲ್ಲದೇ ಕಷ್ಟಕಾಲಕ್ಕೆ ನೆರವಿಗೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ. ಆಭರಣದ ಬದಲು ಚಿನ್ನದ ಬಿಸ್ಕೆಟ್, ಚಿನ್ನದ ಬಾಂಡ್ ಖರೀದಿಸಿದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ ಇದೂ ಎಂದಿಗೂ ಸೆಕೆಂಡ್ ಹ್ಯಾಂಡ್ ಆಗುವುದಿಲ್ಲ. ಇದನ್ನು ನೀವು ಆ ದಿನದ ಚಿನ್ನದ ದರ ಹೇಗಿದೆ ಎಂಬುದರ ಮೇಲೆ ಬಹು ವರ್ಷಗಳ ನಂತರವೂ ಉತ್ತಮ ದರವನ್ನು ಪಡೆಯಬಹುದು. ಹೀಗಾಗಿಯೇ ಚಿನ್ನ ಹೂಡಿಕೆದಾರರ ಅಚ್ಚುಮೆಚ್ಚಿನ ಹೂಡಿಕೆಯ ವಿಷಯವಾಗಿದೆ. ಅಲ್ಲದೇ ಷೇರು ಮಾರುಕಟ್ಟೆಯ ಹೂಡಿಕೆದಾರರು ಮಾತ್ರವಲ್ಲದೇ ಜನ ಸಾಮಾನ್ಯರು ಕೂಡ ಚಿನ್ನದ ದರದ ಮೇಲೆ ಒಂದು ಕಣ್ಣಿಟ್ಟಿರುತ್ತಾರೆ.