ಇಂದಿನ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. 22 ಮತ್ತು 24 ಕ್ಯಾರಟ್ ಚಿನ್ನದ ದರ ಹಾಗೂ ಬೆಳ್ಳಿ ದರದ ಸಂಪೂರ್ಣ ಮಾಹಿತಿ ಇಲ್ಲಿದೆ.
ನವದೆಹಲಿ: ಚಿನ್ನ ಮತ್ತು ಬೆಳ್ಳಿ ಕೇವಲ ಆಭರಣ ಆಗಿ ಉಳಿದಿಲ್ಲ. ಬೆಲೆಗಳು ಏರಿಕೆಯಾಗುತ್ತಿರುವ ಕಾರಣ ಜನರು ಸಹ ಚಿನ್ನ ಮತ್ತು ಬೆಳ್ಳಿ ಮೇಲೆ ಹೆಚ್ಚಾಗಿ ಹೂಡಿಕೆ ಮಾಡುತ್ತಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಮದುವೆ ಮುಹೂರ್ತಗಳು ಸಮೀಪಿಸುತ್ತಿದ್ದು, ಚಿನ್ನ-ಬೆಳ್ಳಿ ಖರೀದಿ ಹೆಚ್ಚಳವಾಗಲಿದೆ. ಇಂದು ದೇಶದಲ್ಲಿ (India) ಬಂಗಾರದ ದರದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಹಾಗೆ, ಬೆಳ್ಳಿ ದರದಲ್ಲೂ ಯಾವುದೇ ವ್ಯತ್ಯಾಸವಾಗಿಲ್ಲ. ಸೋಮವಾರ ಚಿನ್ನದ ಬೆಲೆ ಏರಿಕೆಯಾಗಿತ್ತು. ಇಂದಿನ 22 ಮತ್ತು 24 ಕ್ಯಾರಟ್ ಚಿನ್ನ ಮತ್ತು ಬೆಳ್ಳಿ ದರಗಳನ್ನು ಈ ಲೇಖನದಲ್ಲಿ ನೀಡಲಾಗಿದೆ.
ಭಾರತದಲ್ಲಿ 22 ಕ್ಯಾರಟ್ ಚಿನ್ನದ ಬೆಲೆ
1 ಗ್ರಾಂ: 7,450 ರೂಪಾಯಿ
8 ಗ್ರಾಂ: 59,600 ರೂಪಾಯಿ
10 ಗ್ರಾಂ: 74,500 ರೂಪಾಯಿ
100 ಗ್ರಾಂ: 7,45,000 ರೂಪಾಯಿ
ಭಾರತದಲ್ಲಿ 24 ಕ್ಯಾರಟ್ ಚಿನ್ನದ ಬೆಲೆ
1 ಗ್ರಾಂ: 8,123 ರೂಪಾಯಿ
8 ಗ್ರಾಂ: 64,984 ರೂಪಾಯಿ
10 ಗ್ರಾಂ: 81,230 ರೂಪಾಯಿ
100 ಗ್ರಾಂ: 8,12,300 ರೂಪಾಯಿ
ದೇಶದ ಪ್ರಮುಖ ನಗರಗಳಲ್ಲಿ ಚಿನ್ನದ ಬೆಲೆ
10 ಗ್ರಾಂ 22 ಕ್ಯಾರಟ್ ಚಿನ್ನದ ಬೆಲೆಗಳು ಹೀಗಿವೆ. ಚೆನ್ನೈ: 74,500 ರೂಪಾಯಿ, ಮುಂಬೈ: 74,500 ರೂಪಾಯಿ, ದೆಹಲಿ: 74,650 ರೂಪಾಯಿ, ಕೋಲ್ಕತ್ತಾ: 74,500 ರೂಪಾಯಿ, ಬೆಂಗಳೂರು: 74,500 ರೂಪಾಯಿ, ಹೈದರಾಬಾದ್: 74,500 ರೂಪಾಯಿ, ಪುಣೆ: 74,500 ರೂಪಾಯಿ.
ಇಂದಿನ ಬೆಳ್ಳಿ ದರ
ಇನ್ನು, ದೇಶದಲ್ಲಿ ನಿನ್ನೆಗೆ ಹೋಲಿಸಿದರೆ ಬೆಳ್ಳಿ ದರದಲ್ಲಿ ಹೆಚ್ಚಾಗಿದೆ. ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ - ಇಳಿಕೆಯಾದಂತೆಯೂ ಚಿನ್ನ - ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ.
10 ಗ್ರಾಂ: 965 ರೂಪಾಯಿ
100 ಗ್ರಾಂ: 9,650 ರೂಪಾಯಿ
1000 ಗ್ರಾಂ: 96,500 ರೂಪಾಯಿ
ಇದನ್ನೂ ಓದಿ: ರಿಲಯನ್ಸ್‌ನಿಂದ ಜಿಯೋಕಾಯಿನ್ ಬಿಡುಗಡೆ: ಏನಿದು? ಇದರಿಂದ ರಿವಾರ್ಡ್ ಪಡೆಯೋದು ಹೇಗೆ?
ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಅನೇಕರು ಮದುವೆ ಮುಂಜಿಗಳಿಗೆ ಮಾತ್ರವಲ್ಲದೇ ಕಷ್ಟಕಾಲಕ್ಕೆ ನೆರವಿಗೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ. ಆಭರಣದ ಬದಲು ಚಿನ್ನದ ಬಿಸ್ಕೆಟ್, ಚಿನ್ನದ ಬಾಂಡ್ ಖರೀದಿಸಿದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ ಇದೂ ಎಂದಿಗೂ ಸೆಕೆಂಡ್ ಹ್ಯಾಂಡ್ ಆಗುವುದಿಲ್ಲ. ಇದನ್ನು ನೀವು ಆ ದಿನದ ಚಿನ್ನದ ದರ ಹೇಗಿದೆ ಎಂಬುದರ ಮೇಲೆ ಬಹು ವರ್ಷಗಳ ನಂತರವೂ ಉತ್ತಮ ದರವನ್ನು ಪಡೆಯಬಹುದು. ಹೀಗಾಗಿಯೇ ಚಿನ್ನ ಹೂಡಿಕೆದಾರರ ಅಚ್ಚುಮೆಚ್ಚಿನ ಹೂಡಿಕೆಯ ವಿಷಯವಾಗಿದೆ. ಅಲ್ಲದೇ ಷೇರು ಮಾರುಕಟ್ಟೆಯ ಹೂಡಿಕೆದಾರರು ಮಾತ್ರವಲ್ಲದೇ ಜನ ಸಾಮಾನ್ಯರು ಕೂಡ ಚಿನ್ನದ ದರದ ಮೇಲೆ ಒಂದು ಕಣ್ಣಿಟ್ಟಿರುತ್ತಾರೆ.
ಇದನ್ನೂ ಓದಿ: ಜನಪ್ರಿಯ ಪ್ರಿಪೇಯ್ಡ್ ಪ್ಲಾನ್‌ಗೆ ವಿದಾಯ ಹೇಳಲು ಮುಂದಾದ ರಿಲಯನ್ಸ್ ಜಿಯೋ
