Asianet Suvarna News Asianet Suvarna News

ಗೌರಿ ಹಬ್ಬದ ಸಂಭ್ರಮದ ನಡುವೆ ಚಿನ್ನದ ದರದಲ್ಲಿ ತುಸು ಇಳಿಕೆ

ಇಂದು ಹಬ್ಬವೂ ಆಗಿರುವುದರಿಂದ ಚಿನ್ನಾಭರಣ ಖರೀದಿ ಮಾಡುವವರು ಇಂದಿನ ಆಭರಣ ಚಿನ್ನದ ದರದ ಮೇಲೆ ಕಣ್ಣಿಟ್ಟಿದ್ದಾರೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ...

what is the gold price today akb
Author
First Published Aug 30, 2022, 10:30 AM IST

ಇಂದು ಗೌರಿ ಹಬ್ಬದ ಸಂಭ್ರಮ, ದೇಶಾದ್ಯಂತ ಜನ ಗೌರಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಾರೆ. ಕೆಲವರು ಚಿನ್ನಾಭರಣ ಖರೀದಿಗೆ ವಿಶೇಷ ದಿನವನ್ನೇ ನೋಡುತ್ತಾರೆ. ಇಂದು ಹಬ್ಬವೂ ಆಗಿರುವುದರಿಂದ ಚಿನ್ನಾಭರಣ ಖರೀದಿ ಮಾಡುವವರು ಇಂದಿನ ಆಭರಣ ಚಿನ್ನದ ದರದ ಮೇಲೆ ಕಣ್ಣಿಟ್ಟಿದ್ದಾರೆ. ಹಾಗಿದ್ದರೆ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ...


ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 4,725
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,154

ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 37,800
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 41,232

ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ. 47,250
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 51,540

ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ - ರೂ.  4,72,500
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) - ರೂ. 5,15, 400

ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 22 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 47,260 ಆಗಿದ್ದರೆ ಚೆನ್ನೈ, ಮುಂಬೈ ಹಾಗೂ ಕೋಲ್ಕತ್ತಾ ನಗರಗಳಲ್ಲಿ ಕ್ರಮವಾಗಿ ಇದರ ಬೆಲೆ ರೂ. 47,900 ರೂ. 47,250, ರೂ. 47,250 ಆಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 47,400 ರೂ. ಆಗಿದೆ. 

ಇಂದಿನ ಬೆಳ್ಳಿ ದರ
ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ, ಇಳಿಕೆಯಾದಂತೆಯೂ ಚಿನ್ನ ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ. 

ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ಇಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಿ ದರದಲ್ಲಿ ಸ್ವಲ್ಪ ಇಳಿಕೆ ಆಗಿದೆ. ಬೆಂಗಳೂರಲ್ಲಿ  10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 540, ರೂ. 5,400 ಹಾಗೂ ರೂ. 54,000 ಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 61,500 ಆಗಿದ್ದರೆ, ಮುಂಬೈನಲ್ಲಿ ರೂ. 55,400 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 55,400 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 54,000 ಆಗಿದೆ.

ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಅನೇಕರು ಮದುವೆ ಮುಂಜಿಗಳಿಗೆ ಮಾತ್ರವಲ್ಲದೇ ಕಷ್ಟಕಾಲಕ್ಕೆ ನೆರವಿಗೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ. ಆಭರಣದ ಬದಲು ಚಿನ್ನದ ಬಿಸ್ಕೆಟ್‌, ಚಿನ್ನದ ಬಾಂಡ್ ಖರೀದಿಸಿದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ ಇದೂ ಎಂದಿಗೂ ಸೆಕೆಂಡ್ ಹ್ಯಾಂಡ್ ಆಗುವುದಿಲ್ಲ. ಇದನ್ನು ನೀವು ಆ ದಿನದ ಚಿನ್ನದ ದರ ಹೇಗಿದೆ ಎಂಬುದರ ಮೇಲೆ ಬಹು ವರ್ಷಗಳ ನಂತರವೂ ಉತ್ತಮ ದರವನ್ನು ಪಡೆಯಬಹುದು. ಹೀಗಾಗಿಯೇ ಚಿನ್ನ ಹೂಡಿಕೆದಾರರ ಅಚ್ಚುಮೆಚ್ಚಿನ ಹೂಡಿಕೆಯ ವಿಷಯವಾಗಿದೆ. ಅಲ್ಲದೇ ಷೇರು ಮಾರುಕಟ್ಟೆಯ ಹೂಡಿಕೆದಾರರು ಮಾತ್ರವಲ್ಲದೇ ಜನ ಸಾಮಾನ್ಯರು ಕೂಡ ಚಿನ್ನದ ದರದ ಮೇಲೆ ಒಂದು ಕಣ್ಣಿಟ್ಟಿರುತ್ತಾರೆ. 
 

Follow Us:
Download App:
  • android
  • ios